CHITRADURGA NEWS | 18 NOVEMBER 2025
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರ ಕುರಿತ ನ್ಯಾಯಾಲಯದ ತೀರ್ಪು ನ.26 ರಂದು ಪ್ರಕಟವಾಗುವ ನಿರೀಕ್ಷೆ ಇದೆ.
ಶರಣರ ಪರ ಹಾಗೂ ವಿರುದ್ಧದ ವಾದ-ಪ್ರತಿವಾದ ಮುಕ್ತಾಯವಾಗಿದ್ದು, ಪ್ರಕರಣದ ತೀರ್ಪು ಪ್ರಕಟವಾಗುವ ಹಂತದಲ್ಲಿದೆ.
ಇದನ್ನೂ ಓದಿ: ಹಿರಿಯೂರು ತಾಲೂಕಿನಲ್ಲಿ ಕೆಇಬಿ ಸ್ಟೇಷನ್ | ವಿಕಾಸಸೌಧದಲ್ಲಿ ಸಚಿವ ಡಿ.ಸುಧಾಕರ್ ಸಭೆ
ಕಳೆದ ವಾರವಷ್ಟೇ ಶ್ರೀ ಶಿವಮೂರ್ತಿ ಮುರುಘಾ ಶರಣರ ಪರ ವಕೀಲರಾದ ಸಿ.ವಿ.ನಾಗೇಶ್ ಚಿತ್ರದುರ್ಗ ನ್ಯಾಯಾಲಯಕ್ಕೆ ಹಾಜರಾಗಿ ವಾದ ಮಂಡನೆ ಮಾಡಿದ್ದರು.
ಇದಾದ ಬಳಿಕ ಪ್ರಾಸಿಕ್ಯೂಷನ್ ಪರ ವಕೀಲರಿಗೆ ವಾದ ಮಂಡನೆಗೆ ಅವಕಾಶ ಕಲ್ಪಿಸಲಾಗಿತ್ತು. ಇಂದು ನ.18 ಮಂಗಳವಾರ ಸರ್ಕಾರಿ ವಕೀಲರಾದ ಜಗದೀಶ್ ವಾದ ಮಂಡನೆ ಮುಕ್ತಾಯಗೊಳಿಸಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 18 | ಹತ್ತಿ ರೇಟ್ ಎಷ್ಟಿದೆ?
ಈ ಹಿನ್ನೆಲೆಯಲ್ಲಿ ನವೆಂಬರ್ 26 ಬುಧವಾರದಂದು ಮುರುಘಾ ಶರಣರ ಪ್ರಕರಣದ ತೀರ್ಪು ಪ್ರಕಟವಾಗಲಿದೆ ಎನ್ನಲಾಗುತ್ತಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
