
CHITRADURGA NEWS | 19 NOVEMBER 2025
ಚಿತ್ರದುರ್ಗ: ಜಿಲ್ಲೆಯ ಯುವನಿಧಿ ಫಲಾನುಭವಿಗಳು ಉಚಿತ ಕೌಶಲ್ಯ ತರಬೇತಿಗಾಗಿ ತಮ್ಮ ತಾಲ್ಲೂಕಿನ ಸಮೀಪದ ಐಟಿಐ, ಜಿಟಿಟಿಸಿ, ಸಿಡಾಕ್ ತರಬೇತಿ ಸಂಸ್ಥೆಗಳನ್ನು ನೇರವಾಗಿ ಸಂಪರ್ಕಿಸಿ ವಿವಿಧ ಕೌಶಲ್ಯ ತರಬೇತಿ ಪಡೆಯುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು | ಶಬರಿಮಲೆ ಯಾತ್ರೆ ಹೊರಟ ಭಕ್ತರಿಗೆ ಮಹತ್ವದ ಮಾರ್ಗಸೂಚಿ
ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಜಿಲ್ಲೆಯ ಎಲ್ಲಾ ಯುವನಿಧಿ ಫಲಾನುಭವಿಗಳು ಯುವನಿಧಿ ಪ್ಲಸ್ ಯೋಜನೆಯಡಿ ಕೌಶಲ್ಯ ತರಬೇತಿ ಪಡೆಯಲು ತಮ್ಮ ತಾಲ್ಲೂಕಿನ ಸಮೀಪದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಐ), ಸಿಡಾಕ್ ತರಬೇತಿ ಸಂಸ್ಥೆ, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಗಳ ತರಬೇತಿ ಸಂಸ್ಥೆಗಳನ್ನು ಇದೇ ನ.24ರೊಳಗೆ ನೇರವಾಗಿ ಸಂಪರ್ಕಿಸಿ ಸ್ವ ವಿವರಗಳೊಂದಿಗೆ ನೋಂದಾಯಿಸುವ ಮೂಲಕ ಉಚಿತವಾಗಿ ವಿವಿಧ ಕೌಶಲ್ಯ ತರಬೇತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಟೇಶ್ ಕೋರಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
