CHITRADURGA NEWS | 19 NOVEMBER 2025
ಚಿತ್ರದುರ್ಗ: ಜಿಲ್ಲಾ ಮಟ್ಟದಲ್ಲಿ ಡಿಸೆಂಬರ್ 03ರಂದು ಆಚರಿಸಲಿರುವ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಇದೇ ನವೆಂಬರ್ 25ರಂದು ಬೆಳಿಗ್ಗೆ 10 ಗಂಟೆಗೆ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ವಿಕಲಚೇತನರಿಗಾಗಿ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.
ಕ್ರೀಡಾ ಸ್ಪರ್ಧೆಗಳ ವಿವರ:
18 ವರ್ಷ ಮೇಲ್ಪಟ್ಟ ದೃಷ್ಟಿದೋಷವುಳ್ಳವರಿಗೆ ಮಡಿಕೆ ಹೊಡೆಯುವುದು, ಕೇನ್ ರೇಸ್ ಸ್ಪರ್ಧೆ ನಡೆಯಲಿದೆ. ಶ್ರವಣ ದೋಷವುಳ್ಳವರಿಗೆ ಹಾಗೂ ದೈಹಿಕ ವಿಕಲಚೇತನರಿಗೆ 100ಮೀ ಓಟ, ಗುಂಡು ಎಸೆತ, ಜಾವಲಿನ್ ಥ್ರೋ ಸ್ಪರ್ಧೆ ನಡೆಯಲಿದೆ. ಬೌದ್ಧಿಕ ವಿಕಲಚೇತನರಿಗೆ 100ಮೀ ಓಟ, ಬಕೆಟ್ನಲ್ಲಿ ರಿಂಗ್ ಎಸೆತ, ಮ್ಯೂಜಿಕಲ್ ಚೇರ್ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು | ಶಬರಿಮಲೆ ಯಾತ್ರೆ ಹೊರಟ ಭಕ್ತರಿಗೆ ಮಹತ್ವದ ಮಾರ್ಗಸೂಚಿ
ಸಾಂಸ್ಕøತಿಕ ಸ್ಪರ್ಧೆಗಳ ವಿವರ: 18 ವರ್ಷ ಮೇಲ್ಪಟ್ಟ ದೃಷ್ಟಿದೋಷ ಮತ್ತು ದೈಹಿಕ ವಿಕಲಚೇತನರು ಮತ್ತು ಬೌದ್ಧಿಕ ವಿಕಲತೆ ಹೊಂದಿರುವವರಿಗೆ ಜಾನಪದ ಗೀತೆ, ಭಾವಗೀತೆ ಭಕ್ತಿಗೀತೆಯನ್ನು ಏರ್ಪಡಿಸಲಾಗಿದೆ.
ವಿಕಲಚೇತನರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

