
CHITRADURGA NEWS | 25 NOVEMBER 2025
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ನ. 27 ರಿಂದ 29 ರವರೆಗೆ ಮೂರು ದಿನಗಳ ಕಾಲ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.
ಕ್ರೀಡಾಕೂಟದ ಉದ್ಘಾಟನೆ 27 ರಂದು ಬೆಳಿಗ್ಗೆ 09 ಗಂಟೆಗೆ ನಡೆಯಲಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ್ ವಾಸುದೇವ್ ಉದ್ಘಾಟನೆ ನೆರವೇರಿಸುವರು. ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಎಸ್. ಆಕಾಶ್ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.
ಇದನ್ನೂ ಓದಿ: ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಆರ್ಶಿವಾದ ಪಡೆದ ಬಿಗ್ ಬಾಸ್ ಸ್ಪರ್ಧಿ ಚಂದ್ರಪ್ರಭ
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಿಗೆ ಗೌರವ ರಕ್ಷೆ, ಪಥ ಸಂಚಲನ, ಕ್ರೀಡಾ ಜ್ಯೋತಿಯ ಸ್ವಾಗತ, ಪ್ರತಿಜ್ಞಾ ವಿಧಿ ಸ್ವೀಕಾರ ನೆರವೇರುವುದರೊಂದಿಗೆ ವಿವಿಧ ಕ್ರೀಡೆಗಳು ನಡೆಯಲಿವೆ.
ಕ್ರೀಡಾಕೂಟದ ಸಮಾರೋಪ ಸಮಾರಂಭ ನ.29 ರಂದು ಸಂಜೆ 04 ಗಂಟೆಗೆ ಜರುಗಲಿದ್ದು, ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕ ಡಾ. ಬಿ.ಆರ್. ರವಿಕಾಂತೇಗೌಡ ಹಾಗೂ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಅವರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

