By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ
    ಮುಂದಿನ ಪೀಳಿಗೆ ನಾವು ಹಾಕಿದ ಮರದ ನೆರಳನ್ನು ಪಡೆಯಬೇಕು | ಡಾ.ಬಸವಕುಮಾರ ಸ್ವಾಮೀಜಿ 
    2 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆ | ಜೂನ್ 09ರಂದು ಉಚಿತ ಗ್ಯಾಸ್ಟ್ರೋ ಶಿಬಿರ
    2 hours ago
    SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ
    SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ 
    2 hours ago
    ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ
    ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ | ನೂತನ ವಧು-ವರರು ಸಸಿ ನೆಟ್ಟರು 
    2 hours ago
    ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
    ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    16 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    4 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    3 hours ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    4 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    1 day ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    1 day ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
Reading: ಸಂವಿಧಾನ ದಿನಾಚರಣೆ | ಕೋಟೆನಾಡಿನಲ್ಲಿ ಗಮನ ಸೆಳೆದ ಸಂವಿಧಾನ ಜಾಗೃತಿ ಜಾಥ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಂವಿಧಾನ ದಿನಾಚರಣೆ | ಕೋಟೆನಾಡಿನಲ್ಲಿ ಗಮನ ಸೆಳೆದ ಸಂವಿಧಾನ ಜಾಗೃತಿ ಜಾಥ 

News Desk Chitradurga News
Last updated: 26 November 2025 22:26
News Desk Chitradurga News
6 months ago
Share
ಸಂವಿಧಾನ ದಿನಾಚರಣೆ | ಕೋಟೆನಾಡಿನಲ್ಲಿ ಗಮನ ಸೆಳೆದ ಸಂವಿಧಾನ ಜಾಗೃತಿ ಜಾಥ
SHARE

CHITRADURGA NEWS | 26 NOVEMBER 2025

ಚಿತ್ರದುರ್ಗ: ವಿಶ್ವದಲ್ಲಿರುವ ಎಲ್ಲಾ ಸರ್ವ ಧರ್ಮಗಳ ಸಾರ ಭಾರತದ ಸಂವಿಧಾನದಲ್ಲಿ ಅಡಕವಾಗಿದೆ. ಮಾನವ ಕುಲದ ಶ್ರೇಯೋಭಿವೃದ್ಧಿಯೇ ಸಂವಿಧಾನದ ಆಶಯವಾಗಿದೆ ಎಂದು ಇಂಗ್ಲೀಷ್ ಪ್ರಾಧ್ಯಾಪಕ ಪ್ರೋ. ನಟರಾಜ ಡಿ.ಹೆಚ್ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಅಡಿಕೆ ಧಾರಣೆ | ನವೆಂಬರ್‌ 26 | ಯಾವ ಅಡಿಕೆಗೆ ಎಷ್ಟು ರೇಟ್‌

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ನಗರದ ಲಿಡ್ಕರ್ ಭವನದಲ್ಲಿರುವ ಶಿವಶರಣ ಮಾದಾರ ಚೆನ್ನಯ್ಯ ಸಭಾಭವನದಲ್ಲಿ ಬುಧವಾರ ಆಯೋಜಿಸಲಾದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಂವಿಧಾನ ಜಾಗೃತಿ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.

1946 ರಲ್ಲಿ ಬ್ರಿಟೀಷ್ ಸರ್ಕಾರ ಭಾರತದ ಸಂವಿಧಾನ ರಚನಾ ಸಮಿತಿ ಸ್ಥಾಪಿಸಿತು. ಡಾ. ಸಚ್ಚಿದಾನಂದ ಸಿನ್ಹ ಸಂವಿಧಾನ ಸಭೆಯ ತಾತ್ಕಾಲಿಕ ಅಧ್ಯಕ್ಷರಾಗಿದ್ದರು. ನಂತರ ಡಾ.ರಾಜೇಂದ್ರ ಪ್ರಸಾದ್ ಅವರು ಸಂವಿಧಾನ ರಚನೆ ಸಭೆಯ ಅಧ್ಯಕ್ಷರಾಗಿ, ಡಾ.ಬಿ.ಆರ್.ಅಂಬೇಡ್ಕರ್ ಕರಡು ರಚನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದರು. 

ಅಂಬೇಡ್ಕರ್ ವಿಶ್ವದ 60 ದೇಶಗಳ ಸಂವಿಧಾನವನ್ನು ಓದಿ ಅರ್ಥೈಸಿಕೊಂಡು ನಮ್ಮ ದೇಶದ ಸಂವಿಧಾನವನ್ನು ರಚಿಸಿದ್ದಾರೆ. ಸಂವಿಧಾನ ರಚನಾ ಸಭೆ 12 ಬಾರಿ ಅಧಿವೇಶನ ನಡೆಸಿ, ಒಟ್ಟು 2 ವರ್ಷ 11 ತಿಂಗಳು 18 ದಿನಗಳ ಸುಧಿರ್ಘ ಚರ್ಚೆಯ ನಂತರ ಸಂವಿಧಾನದ ಕರಡು ಪ್ರತಿಗೆ 26 ನವೆಂಬರ್ 1949 ರಂದು ಅಂಗೀಕಾರ ದೊರಕಿತು. ಇದರ ನೆನಪಿಗಾಗಿ ಪ್ರತಿ ವರ್ಷ ನವೆಂಬರ್ 26ರನ್ನು ಕಾನೂನು ದಿವಸ್ ಎಂದ ದೇಶದಾದ್ಯಂತ ಆಚರಿಸಲಾಗುತ್ತಿತ್ತು. 2015 ರಿಂದ ಈ ಕಾನೂನು ದಿವಸ್‍ನ್ನು ಸಂವಿಧಾನ ದಿನ ಎಂದು ಮರುನಾಮಕರಣದೊಂದಿಗೆ ಆಚರಿಸಲಾಗುತ್ತಿದೆ. 

ಇದನ್ನೂ ಓದಿ: ಬೀದಿ ನಾಯಿಗಳ ಆಶ್ರಯ ತಾಣ ನಿರ್ಮಿಸಲು ಪ್ರತ್ಯೇಕ ಜಾಗ ಗುರುತಿಸಿ | ADC ಸೂಚನೆ

ಅಂಗೀಕಾರಗೊಂಡ ಸಂವಿಧಾನ 26 ಜನವರಿ 1950 ರಂದು ದೇಶದೆಲ್ಲಡೆ ಜಾರಿಗೆ ಬಂದಿತು. ಜಾರಿಯಾದ ಸಂದರ್ಭದಲ್ಲಿ ಸಂವಿಧಾನ 22 ಭಾಗ, 395 ವಿಧಿ 8 ಅನುಸೂಚಿಗಳನ್ನು ಒಳಗೊಂಡಿತ್ತು. ಪ್ರಸ್ತುತ 25 ಭಾಗ, 448 ವಿಧಿ ಹಾಗೂ 12 ಅನುಸೂಚಿಗಳನ್ನು ಒಳಗೊಂಡಿದೆ. ಸಂವಿಧಾನದ ಮೂಲ ಪ್ರತಿಯನ್ನು ಪ್ರೇಮ್ ಬಿಹಾರಿ ನರೇನ್ ರಾಯಿಜಾದ್ ತಮ್ಮ ಸುಂದರ ಕೈ ಬರಹದ ಅಕ್ಷರಗಳಲ್ಲಿ ಬರೆದಿದ್ದಾರೆ. 

ರವೀಂದ್ರನಾಥ್ ಠ್ಯಾಗೂರ್ ಅವರ ಶಾಂತಿ ನಿಕೇತನದ ಪ್ರಸಿದ್ಧ ಚಿತ್ರಕಲಾವಿದ ರಾಮ ಮನೋಹರ ಸಿನ್ಹ ಹಾಗೂ ನಂದಲಾಲ್ ಬೋಸ್ ಅವರು ಸಂವಿಧಾನದ ಪ್ರತಿ ಪುಟದಲ್ಲಿ ಭಾರತದ ಇತಿಹಾಸ ಹಾಗೂ ಸಂಸ್ಕøತಿಗಳನ್ನು ಬಿಂಬಿಸುವ ಚಿತ್ರಗಳನ್ನು ಬರೆದಿದಾರೆ. ಸಂವಿಧಾನ ರಚನೆಯ ಲಾಂಛನ ಆನೆಯಾಗಿತ್ತು. 

ಸಂವಿಧಾನ ಜಾರಿಯಾಗಿ 75 ವರ್ಷಪೂರ್ಣಗೊಂಡರು ದೇಶ ಅದರ ಆಧಾರದಲ್ಲಿಯೇ ಮುನ್ನಡೆಯುತ್ತಿದೆ. ನಮ್ಮ ದೇಶದೊಂದಿಗೆ ಉದಯವಾದ ಪಾಕಿಸ್ತಾನ 75 ವರ್ಷದಲ್ಲಿ 03 ಬಾರಿ ಸಂವಿಧಾನವನ್ನು ಬದಲಾಯಿಸಿದೆ. ನೇಪಾಳ 07 ಬಾರಿ ಸಂವಿಧಾನ ಬದಲಾಯಿಸಿದೆ. ಆದರೆ ಭಾರತ ಸಂವಿಧಾನ ಸರ್ವಕಾಲಕ್ಕೂ ಸಲ್ಲುವ ತತ್ವಗಳಿಂದ ಕೂಡಿದ್ದು, ಮುಂದೆಯೂ ದೇಶದ ಮುನ್ನೆಡೆಸಲು ಆಧಾರವಾಗಿದೆ ಎಂದು ಪ್ರೋ. ನಟರಾಜ.ಡಿ.ಹೆಚ್. ಹೇಳಿದರು.

ಇದನ್ನೂ ಓದಿ: 

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಚಿವ ಹೆಚ್.ಆಂಜನೇಯ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಎಲ್ಲಾ ಧರ್ಮದ ಜನರು ಜ್ಯಾತ್ಯತೀತವಾಗಿ ಹೋರಾಟ ನಡೆಸಿದ್ದಾರೆ. ಇದರ ಫಲವಾಗಿ ಬ್ರೀಟಿಷರ ಗುಲಾಮಗಿರಿಯಿಂದ ನಮಗೆ ಮುಕ್ತಿ ದೊರೆಯಿತು. ನಂತರ ದೇಶದಲ್ಲಿ ಜಾರಿಯಾದ ಸಂವಿಧಾನ, ಮಹಿಳೆಯರು ಹಾಗೂ ಶೋಷಿತರಿಗೆ ನಿಜ ಅರ್ಥದಲ್ಲಿ ಸ್ವಾತ್ರಂತ್ರ್ಯ ಹಾಗೂ ಸಮಾನತೆಯನ್ನು ದೊರಕಿಸಿಕೊಟ್ಟಿತ್ತು. ಸಂವಿಧಾನ ಜಾರಿಯಿಂದ ರಾಜಪ್ರಭುತ್ವ ಕೊನೆಗೊಂಡು ಮತಪೆಟ್ಟಿಗೆಗಳಿಂದ ಜನಪ್ರತಿನಿಧಿಗಳು ಉದಯವಾಗುವಂತೆ ಆಯಿತು. 

ಸಂವಿಧಾನ ನಮಗೆ ಹಕ್ಕುಗಳ ಜೊತೆಗೆ ಪಾಲಿಸಬೇಕಾದ ಕರ್ತವ್ಯಗಳನ್ನು ಸಹ ತಿಳಿಸಿದೆ. ಡಾ.ಬಿ.ಆರ್.ಅಂಬೇಡ್ಕರ್ ಶೋಷಿತರಿಗೆ ಸಂವಿಧಾನದ ಮೂಲಕ ನ್ಯಾಯ ದೊರಕಿಸಿಕೊಟ್ಟು ವಿಮೋಚಕರು ಎಂದು ಹೆಸರಾಗಿದ್ದಾರೆ. ಪ್ರತಿಯೊಬ್ಬ ಭಾರತಿಯರಿಗೂ ಆಗಸ್ಟ್ 15 ಹಾಗೂ ಜನವರಿ 26 ರಾಷ್ಟ್ರೀಯ ಹಬ್ಬಗಳಾಗಿವೆ ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ ಸಂವಿಧಾನ ಪ್ರತಿಯೊಬ್ಬರಿಗೂ ತಾಯಿ ಇದ್ದಂತೆ, ಯಾವುದೇ ಸರ್ಕಾರಗಳು ಸಂವಿಧಾನ ಉಲ್ಲಂಘಿಸಿ ನಡೆದುಕೊಳ್ಳಬಾರದು ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸಿ, ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ, ಪ್ರಬಂದ, ಚಿತ್ರಕಲೆ, ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. 

ಇದನ್ನೂ ಓದಿ: ಮುರುಘಾ ಶರಣರು ನಿರ್ದೋಷಿ | ಪೋಕ್ಸೋ ಪ್ರಕರಣದಿಂದ ಬಿಡುಗಡೆ

ವಿದ್ಯಾರ್ಥಿಗಳು ಸಂವಿಧಾನ ಕುರಿತು ಬಿಡಿಸಿದ ಚಿತ್ರಗಳ ಪ್ರದರ್ಶನ ಇದೇ ವೇಳೆ ಏರ್ಪಡಿಸಲಾಗಿತ್ತು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಲಿಡ್ಕರ್ ಸಂಸ್ಥೆ ನಿಕಟಪೂರ್ವ ಅಧ್ಯಕ್ಷ ಶಂಕರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಜಿ.ಪಂ. ಯೋಜನಾಧಿಕಾರಿ ಗಾಯಿತ್ರಿ, ವಕೀಲರ ಸಂಘದ ಅಧ್ಯಕ್ಷ ಮಹೇಶ್ವರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ.ಬಿ ಸ್ವಾಗತಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ತಂಡ ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಡಾ.ನವೀನ್ ಮಸ್ಕಲ್ ಕಾರ್ಯಕ್ರಮ ನಿರೂಪಿಸಿದರು.

ಗಮನ ಸೆಳೆದ ಸಂವಿಧಾನ ಜಾಗೃತಿ ಜಾಥ:

ಸಂವಿಧಾನ ದಿನಾಚರಣೆ ಅಂಗವಾಗಿ ನಗರದ ಐತಿಹಾಸಿಕ ಕೋಟೆ ಆವರಣದ ಬಳಿ ಅಂಬೇಡ್ಕರ್ ಪುತ್ಥಳಿ ಹಾಗೂ ಸಂವಿಧಾನ ಪ್ರತಿಕೃತಿ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆ ನೀಡಿದರು. 

ಇದನ್ನೂ ಓದಿ: IAS ಅಧಿಕಾರಿ ಮಹಾಂತೇಶ ಬೀಳಗಿ ನಿಧನಕ್ಕೆ ಸಿರಿಗೆರೆ ಶ್ರೀ ಸಂತಾಪ

ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲೆ ವಿದ್ಯಾರ್ಥಿಗಳು ಸಂವಿಧಾನ ಜಾಗೃತಿಗೆ ಸಂಬಂಧಿಸಿದ ಸಂದೇಶಗಳನ್ನು ಘೋಷಿಸುವ ಮೂಲಕ ಸಂಭ್ರಮ ಹಾಗೂ ಸಡಗರದಿಂದ ಮೆರವಣಿಗೆಯಲ್ಲಿ ನೃತ್ಯದೊಂದಿಗೆ ಹೆಜ್ಜೆಹಾಕಿದರು. 

ಮೆರವಣಿಗೆ ಕೋಟೆ ಮುಂಭಾಗದಿಂದ ಪ್ರಾರಂಭವಾಗಿ, ಕಾಮನಬಾವಿ ಬಡಾವಣೆ, ಕರುವಿನಕಟ್ಟೆ ಸರ್ಕಲ್, ಜೋಗಿಮಟ್ಟಿ ರಸ್ತೆ, ಬುದ್ದ ಪ್ರತಿಮೆ, ಸ್ಟೇಡಿಯಂ ರಸ್ತೆ, ಹಳೇ ವೈಶಾಲಿ ವೃತ್ತ, ಮದರಕರಿ ನಾಯಕ ವೃತ್ತದ ಮೂಲಕ ಸಾಗಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಮಾಪ್ತಿಗೊಂಡಿತು. ಈ ವೇಳೆ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಶಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಕಾಳಿಸಿಂಗೆ ಸೇರಿದಂತೆ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.  

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

Share This Article
Facebook Email Print
Previous Article arecanut price list ಅಡಿಕೆ ಧಾರಣೆ | ನವೆಂಬರ್‌ 26 | ಯಾವ ಅಡಿಕೆಗೆ ಎಷ್ಟು ರೇಟ್‌
Next Article ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಶಿಕ್ಷಣ ಕಾರ್ಯಪಡೆ ರಚಿಸಿ | ಡಾ.ತಿಪ್ಪೇಸ್ವಾಮಿ 
1 Comment
  • Prof. RK Rangaswamy says:
    27 November 2025 at 11:00

    A lot of thanks to District administration for having conducted the Constitution day that reached many people of city and surrounding areas. Following of our constitution is nothing but people living with dignity and brotherhood across the society. I salute many times whole heartedly, Dr.BheemRao Ramji Ambedkar,the architect of our great constitution

    Reply

Leave a Reply Cancel reply

Your email address will not be published. Required fields are marked *

ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ
ಮುಂದಿನ ಪೀಳಿಗೆ ನಾವು ಹಾಕಿದ ಮರದ ನೆರಳನ್ನು ಪಡೆಯಬೇಕು | ಡಾ.ಬಸವಕುಮಾರ ಸ್ವಾಮೀಜಿ 
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆ | ಜೂನ್ 09ರಂದು ಉಚಿತ ಗ್ಯಾಸ್ಟ್ರೋ ಶಿಬಿರ
ಮುಖ್ಯ ಸುದ್ದಿ
SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ
SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ 
ಮುಖ್ಯ ಸುದ್ದಿ
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ
ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ | ನೂತನ ವಧು-ವರರು ಸಸಿ ನೆಟ್ಟರು 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up