
CHITRADURGA NEWS | 27 NOVEMBER 2025
ಚಿತ್ರದುರ್ಗ: ಚಿತ್ರದುರ್ಗ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಶಿ ನಡೆಸಿದ ದಾಳಿ ವೇಳೆ ಒಂದು ಲೋಡು ಅನ್ನ ಭಾಗ್ಯ ಅಕ್ಕಿ ವಶಕ್ಕೆ ಸಿಕ್ಕಿದೆ.
ನಗರದ ಜೆಸಿಆರ್ ಬಡಾವಣೆಯಲ್ಲಿ ಅಕ್ರಮ ಸಾಗಾಣೆ ಮಾಡುತ್ತಿದ್ದ ಅಕ್ಕಿ ವಶಕ್ಕೆ ಪಡೆದುಕೊಳ್ಳಲಾಗಿದೆ.
ಇದನ್ನೂ ಓದಿ: ಮುರುಘಾ ಶರಣರು ನಿರ್ದೋಷಿ | ಪೋಕ್ಸೋ ಪ್ರಕರಣದಿಂದ ಬಿಡುಗಡೆ
ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಆಹಾರ ಇಲಾಖೆ ಅಧಿಕಾರಿಗಳು ನೂರಾರು ಚೀಲ ಅಕ್ಕಿ ವಶಕ್ಕೆ ಪಡೆದುಕೊಂಡಿದ್ದಾರೆ.
ಲಾರಿಯಲ್ಲಿ ತುಂಬಿದ್ದ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಲಾರಿ ಬಿಟ್ಟು ದಂಧೆಕೋರರು ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಮುರುಘಾ ಶರಣರ ಮೊದಲ ಪ್ರತಿಕ್ರಿಯೆ | ಸಂವಿಧಾನ ದಿನದ ಶುಭಾಷಯ ಕೋರಿದ ಶ್ರೀಗಳು
ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
