CHITRADURGA NEWS | 27 NOVEMBER 2025
ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ಗಣಿಬಾಧಿತ ಪ್ರದೇಶದ 05 ಕಿ.ಮೀ ವ್ಯಾಪ್ತಿಗೆ ಬರುವ ಆಡನೂರು, ಬಿ.ದುರ್ಗ, ಚಿಕ್ಕಜೂಜಾರು, ಚಿತ್ರಹಳ್ಳಿ, ಗುಂಜಿಗನೂರು, ಹೆಚ್.ಡಿ.ಪುರ, ಮುತ್ತುಗದೂರು, ಶಿವಗಂಗ, ಟಿ.ನುಲೇನೂರು, ತಾಳ್ಯ, ತೇಕಲವಟ್ಟಿ ಮತ್ತು ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಹಳ್ಳಿಗಳಲ್ಲಿ ಅರ್ಹ ವಸತಿ, ನಿವೇಶನ ರಹಿತರನ್ನು ಆಯ್ಕೆ ಮಾಡಿ ಪಟ್ಟಿಯನ್ನು ಸಲ್ಲಿಸಲು ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಸಭೆಗಳನ್ನು ಡಿಸೆಂಬರ್ 03 ರಿಂದ 12 ರವರೆಗೆ ಆಯೋಜಿಸಲಾಗಿದೆ.
ಇದನ್ನೂ ಓದಿ: ಒಂದು ಲೋಡು ಅನ್ನಭಾಗ್ಯ ಅಕ್ಕಿ ವಶ | ಎಸಿ ಜಿಲಾನಿ ಕಾರ್ಯಾಚರಣೆ
ಹೊಳಲ್ಕೆರೆ ತಾಲ್ಲೂಕಿನ ವ್ಯಾಪ್ತಿಗೆ ಬರುವ ಗಣಿ ಬಾಧಿತ ಪ್ರದೇಶದ ಹಳ್ಳಿಗಳಲ್ಲಿ ಅರ್ಹ ವಸತಿ, ನಿವೇಶನ ರಹಿತರನ್ನು ತುರ್ತಾಗಿ ಆಯ್ಕೆ ಮಾಡಿ ಪಟ್ಟಿಯನ್ನು ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸಿದ್ದು, ಈ ಗ್ರಾಮ ಪಂಚಾಯಿತಿಗಳ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಅರ್ಹ ಫಲಾನುಭವಿಗಳು ನಿಗಧಿಪಡಿಸಿದ ಗ್ರಾಮ ಸಭೆಗಳ ದಿನಾಂಕದಂದು ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕು.
ಹೆಚ್ಚಿನ ವಿವರವನ್ನು ಗ್ರಾ.ಪಂ. ಪಿಡಿಒ ಗಳಿಂದ ಪಡೆಯಬಹುದು ಎಂದು ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
