By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    2 hours ago
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    10 hours ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    10 hours ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    10 hours ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    21 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    10 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    9 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    10 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: ಭೋವಿ ನಿಗಮದ ವಿವಿಧ ಯೋಜನೆ | 15 ದಿನಗಳಲ್ಲಿ ಫಲಾನುಭವಿಗಳ ಆಯ್ಕೆ ಮಾಡಿ | ನಿಗಮದ ಅಧ್ಯಕ್ಷ ರಾಮಪ್ಪ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭೋವಿ ನಿಗಮದ ವಿವಿಧ ಯೋಜನೆ | 15 ದಿನಗಳಲ್ಲಿ ಫಲಾನುಭವಿಗಳ ಆಯ್ಕೆ ಮಾಡಿ | ನಿಗಮದ ಅಧ್ಯಕ್ಷ ರಾಮಪ್ಪ ಸೂಚನೆ

News Desk Chitradurga News
Last updated: 2 December 2025 21:41
News Desk Chitradurga News
9 months ago
Share
ಪ್ರಗತಿ ಪರಿಶೀಲನಾ ಸಭೆಯಲ್ಲಿಕರ್ನಾಟಕ ಭೋವಿ ಅಭಿವೃದ್ಧಿ ನಿಮಗದ ಅಧ್ಯಕ್ಷ ಎಂ.ರಾಮಪ್ಪ
SHARE

CHITRADURGA NEWS | 02 DECEMBER 2025

ಚಿತ್ರದುರ್ಗ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಸದ್ಯ ರೂ.200 ಕೋಟಿ ಹಣವಿದೆ. ಸರ್ಕಾರ ಕಾಲ ಕಾಲಕ್ಕೆ ಆಯವ್ಯಯದಲ್ಲಿ ಅನುದಾನ ಮಂಜೂರು ಮಾಡುತ್ತಿದ್ದು, ಅನುದಾನದ ಕೊರತೆ ಇಲ್ಲ. ಬಿಡುಗಡೆಯಾದ ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆಯಾದರೆ ಮಾತ್ರ ಸರ್ಕಾರಕ್ಕೆ ಇನ್ನೂ ಹೆಚ್ಚಿನ ಅನುದಾನ ಕೇಳಲು ಅನುವಾಗುತ್ತದೆ. ನಿಗಮದಲ್ಲಿ ಅನುದಾನ ಕೊರತೆ ಇದೆ ಎನ್ನುವುದು ಊಹಾಪೋಹದ ಮಾತುಗಳಾಗಿವೆ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಮಗದ ಅಧ್ಯಕ್ಷ ಎಂ.ರಾಮಪ್ಪ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಪ್ರವೇಶಕ್ಕೆ ಅರ್ಜಿ ಅಹ್ವಾನ

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಚಿತ್ರದುರ್ಗ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ, ಉದ್ಯಮಶೀಲತೆ, ಸ್ವಾವಲಂಭಿ ಸಾರಥಿ, ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಕಿರುಸಾಲ, ಗಂಗಾ ಕಲ್ಯಾಣ, ಭೂ ರಹಿತಿ ಕೃಷಿ ಕಾರ್ಮಿಕರಿಗೆ ಭೂ ಒಡೆತನ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿನ ಭೋವಿ, ಒಡ್, ಒಡ್ಡ, ಒಡ್ಡರ್, ವಡ್ಡರ್, ವಡ್ಡರ, ಕಲ್ಲು ಒಡ್ಡರ, ಬೆಸ್ತರಲ್ಲದ ಭೋವಿ, ಮಣ್ಣು ವಡ್ಡರ ಜಾತಿಗಳಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ನೀಡಲಾಗುತ್ತಿದೆ ಎಂದು ಎಂ.ರಾಮಪ್ಪ ತಿಳಿಸಿದರು.

15 ದಿನಗಳಲ್ಲಿ ಫಲಾನುಭವಿಗಳ ಆಯ್ಕೆಗೆ ಸೂಚನೆ:

ಚಿತ್ರದುರ್ಗ ಜಿಲ್ಲೆಯಲ್ಲಿ 2022-23ನೇ ಸಾಲಿನಿಂದ ವಿವಿಧ ಯೋಜನೆಗಳಡಿ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಬಾಕಿಯಿದೆ. ಅಧಿಕಾರಿಗಳು 15 ದಿನದ ಒಳಗಾಗಿ ಸಂಬಂಧಪಟ್ಟ ಶಾಸಕರ ಅಧ್ಯಕ್ಷತೆಯ ಸಮಿತಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಕ್ರಮ ಕೈಗೊಳ್ಳಬೇಕು. 

ಇದನ್ನೂ ಓದಿ: ಭಾರತ ಕಮ್ಯುನಿಸ್ಟ್ ಪಕ್ಷಕ್ಕೆ ಶತಮಾನೋತ್ಸವ | ರಾಜ್ಯದಲ್ಲಿ 24 ದಿನಗಳ ಕಾಲ ಸಂಚರಿಸುವ ಜಾಥ, ಇಂದು ಚಿತ್ರದುರ್ಗ ತಲುಪಿತು

ಫಲಾನುಭವಿಗಳ ಆಯ್ಕೆ ಬಗ್ಗೆ ನಿರ್ಲಕ್ಷ ವಹಿಸಬಾರದು. ಫಲಾನುಭವಿಗಳನ್ನು ಆಯ್ಕೆ ಮಾಡಿ ಕಲ್ಯಾಣ ತಂತ್ರಾಂಶದಲ್ಲಿ ಅಪ್‍ಲೋಡ್ ಮಾಡಬೇಕು.

ಚಿತ್ರದುರ್ಗ ಜಿಲ್ಲೆಗೆ 2025-26ನೇ ಸಾಲಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ 103 ಭೌತಿಕ ಗುರಿ ನಿಗದಿಪಡಿಸಿದ್ದು, ರೂ.1.3 ಕೋಟಿ ಅನುದಾನ ಮೀಸಲಿರಿಸಲಾಗಿದೆ. 

ಇದೇ ಮಾದರಿಯಲ್ಲಿ ಹೈನುಗಾರಿಕೆ ಕೈಗೊಳ್ಳಲು ಉದ್ಯಮಶೀಲತಾ ಯೋಜನೆಯಡಿ ಘಟಕ ವೆಚ್ಚದ ರೂ.1.25 ಲಕ್ಷ ಸಹಾಯಧನ ನೀಡಲು 39 ಭೌತಿಕ ಗುರಿ ನಿಗದಿ ಪಡಿಸಲಾಗಿದೆ. ಇದಕ್ಕಾಗಿ ರೂ.48.75 ಲಕ್ಷ ಅನುದಾನ ಮೀಸಲಿರಿಸಲಾಗಿದೆ. ಇತರೆ ಉದ್ದಿಮೆಗಳನ್ನ ಕೈಗೊಳ್ಳಲು ಉದ್ಯಮಶೀಲತಾ ಯೋಜನೆಯಡಿ ಘಟಕ ವೆಚ್ಚದ ರೂ.2 ಲಕ್ಷ ಸಹಾಯಧನ ನೀಡಲು 29 ಭೌತಿಕ ಗುರಿ ನಿಗದಿಪಡಿಸಲಾಗಿದೆ. 

ಸ್ವಾವಲಂಬಿ ಸಾರಥಿ ಯೋಜನೆಯಡಿ ಟ್ಯಾಕ್ಸಿ ಖರೀದಿಗೆ ರೂ.4 ಲಕ್ಷದ ವರೆಗೆ ಸಹಾಯಧನ ನೀಡಲು 65 ಭೌತಿಕ ಗುರಿ ನಿಗದಿಪಡಿಸಲಾಗಿದೆ. ಇದಕ್ಕಾಗಿ ರೂ.2.60 ಕೋಟಿ ನೀಡಲಾಗಿದೆ. ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಕಿರು ಸಾಲ ನೀಡಲು 140 ಭೌತಿಕ ಗುರಿ ನಿಗದಿ ಪಡಿಸಲಾಗಿದ್ದು, ರೂ.70 ಲಕ್ಷ ಮೀಸಲಿರಿಸಲಾಗಿದೆ. 

ಇದನ್ನೂ ಓದಿ: ಕ್ಯಾಂಪಸ್ ಸಂದರ್ಶನದಲ್ಲಿ SJMIT 18 ವಿದ್ಯಾರ್ಥಿಗಳ ಆಯ್ಕೆ

ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಯಲು 47 ಭೌತಿಕ ಗುರಿ ನೀಡಿದ್ದು, ರೂ.1.76 ಕೋಟಿ ಮೀಸಲಿರಿಸಲಾಗಿದೆ. ಒಟ್ಟಾರೆ ಎಲ್ಲಾ ಯೋಜನೆಗಳಿಂದ 423 ಭೌತಿ ಗುರಿ ನೀಡಿದ್ದು, ರೂ.7.16 ಕೋಟಿ ಜಿಲ್ಲೆಗೆ ಹಂಚಿಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭೋವಿ ಜನಾಂಗದವರು ಇದ್ದು ಜನಸಂಖ್ಯೆಗೆ ಅನುಗುಣವಾಗಿ ಇನ್ನೂ ಹೆಚ್ಚಿನ ಅನುದಾನವನ್ನು ನೀಡುವುದಾಗಿ ಅಧ್ಯಕ್ಷ ಬಿ.ರಾಮಪ್ಪ ಹೇಳಿದರು.

ಮಧ್ಯವರ್ತಿಗಳ ಹಾವಳಿಗೆ ಕಡಿವಾಣ:

ನಿಗಮದ ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸಲು ವ್ಯಾಪಕ ಪ್ರಚಾರ ಕೈಗೊಳ್ಳಾಗುತ್ತಿದೆ. ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲಾಗಿದೆ. ನಿಗಮದ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗುತ್ತಿದೆ. ಆಯ್ಕೆಯಾದ ಫಲಾನುಭವಿಗಳ ಖಾತೆಗೆ ಯೋಜನೆಗಳ ಸಹಾಯಧನ ನೇರವಾಗಿ ಖಜಾನೆ-2 ಮೂಲಕ ಬಿಡುಗಡೆ ಮಾಡಲಾಗುತ್ತಿದೆ. ಎಲ್ಲಿಯೂ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ. ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟರೆ ನೇರವಾಗಿ ನನಗೆ ಅಥವಾ ನಿಗಮದ ವ್ಯವಸ್ಥಾಪಕರಿಗೆ ಕರೆ ಮಾಡುವಂತೆ ಅಧ್ಯಕ್ಷ ಬಿ.ರಾಮಪ್ಪ ತಿಳಿಸಿದರು.

 ಜಿಲ್ಲಾ ಕೇಂದ್ರಗಳಲ್ಲಿ ನಿಗಮಕ್ಕೆ ಜಾಗ:

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರ 20,000 ಚದರ ಅಡಿ ಜಾಗವನ್ನು ಭೋವಿ ಅಭಿವೃದ್ಧಿ ನಿಗಮಕ್ಕೆ ನೀಡಲು ಒಪ್ಪಿದೆ. ಇದೇ ಮಾದರಿಯಲ್ಲಿ ರಾಜ್ಯದ ಇತರೆ ಜಿಲ್ಲಾ ಕೇಂದ್ರದಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ನಿಗಮಕ್ಕೆ ಜಾಗ ನೀಡುವಂತೆ ಪತ್ರ ಬರೆಯಲಾವುದು. ಈ ಜಾಗದಲ್ಲಿ ಸಮುದಾಯ ಭವನ ಹಾಗೂ ನಿಗಮದ ಕಚೇರಿಗಳನ್ನು ನಿರ್ಮಾಣ ಮಾಡಲು ಚಿಂತಿಸಲಾಗಿದೆ ಎಂದು ಬಿ.ರಾಮಪ್ಪ ಹೇಳಿದರು.

ಪ್ರಾಯೋಗಿಕವಾಗಿ ಮಹಿಳಾ ಸ್ವ ಸಹಾಯ ಗುಂಪುಗಳ ರಚನೆ:

ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಭೋವಿ ಕಾಲೋನಿಗಳಲ್ಲಿನ ಮಹಿಳೆಯರನ್ನು ಒಗ್ಗೂಡಿಸಿ ಸ್ವ ಸಹಾಯ ಗುಂಪುಗಳನ್ನು ರಚಿಸಲು ಯೋಜನೆ ರೂಪಿಸಲಾಗಿದೆ. 10 ಜನರು ಇರುವ ಸ್ವ ಸಹಾಯ ಗುಂಪುಗಳಿಗೆ ಪ್ರೇರಣಾ ಯೋಜನೆಯಡಿ ಕಿರುಸಾಲ ನೀಡಲಾಗುವುದು. ಈ ಸ್ವ ಸಹಾಯ ಗುಂಪುಗಳನ್ನು ಎನ್.ಆರ್.ಎಲ್.ಎಂ ಅಡಿ ಸಹ ನೊಂದಣಿ ಮಾಡಿ ಬ್ಯಾಂಕುಗಳೊಂದಿಗೆ ಸಂಯೋಜಿಸಲಾಗುವುದು. 

ಬ್ಯಾಂಕುಗಳು ಸಿಬಿಲ್ ಸ್ಕೋರ್ ಕಾರಣದಿಂದ ಫಲಾನುಭವಿಗಳ ಆಯ್ಕೆಯನ್ನು ತಿರಸ್ಕರಿಸಿದರೆ ಕೂಡಲೇ ಬೇರೆ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಭೌತಿಕ ಹಾಗೂ ಆರ್ಥಿಕ ಗುರಿ ಸಾಧಿಸದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವುದಾಗಿ ಕರ್ನಾಟಕ ಭೋವಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರಾನಾಯ್ಕ್ ಸಭೆಯಲ್ಲಿ ಹೇಳಿದರು.

ಇದನ್ನೂ ಓದಿ: ಇಂದಿನ ಅಡಿಕೆ ಬೆಲೆ | ಡಿಸೆಂಬರ್‌ 2 | ಯಾವ ಅಡಿಕೆ ರೇಟ್‌ ಎಷ್ಟು ?

ಸಭೆಯಲ್ಲಿ ನಿಗಮದ ಯೋಜನೆಗಳ ಅನುಷ್ಠಾನದಲ್ಲಿನ ತೊಂದರೆ ಹಾಗೂ ಸಮಸ್ಯೆಗಳ ಕುರಿತು ಫಲಾನುಭವಿಗಳೊಂದಿಗೆ ಅಧ್ಯಕ್ಷ ಬಿ.ರಾಮಪ್ಪ ಸಂವಾದ ನಡೆಸಿದರು. ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್ ಸಂವಿಧಾನದ ಪೀಠಿಕೆಯನ್ನು ಇದೇ ಸಂದರ್ಭದಲ್ಲಿ ಬೋಧಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿ.ಪಂ. ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಚಿತ್ರದುರ್ಗ ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಚಿಕ್ಕಂದವಾಡಿ ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhovi CorporationChitradurgaChitradurga newsCorporation President RamappaGrantsVarious Projectsಅನುದಾನಚಿತ್ರದುರ್ಗಚಿತ್ರದುರ್ಗ ನ್ಯೂಸ್ನಿಗಮದ ಅಧ್ಯಕ್ಷ ರಾಮಪ್ಪಭೋವಿ ನಿಗಮವಿವಿಧ ಯೋಜನೆ
Share This Article
Facebook Email Print
Previous Article ಅರ್ಜಿ ಅಹ್ವಾನ ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಪ್ರವೇಶಕ್ಕೆ ಅರ್ಜಿ ಅಹ್ವಾನ
Next Article ಚಳಿಗಾಲದಲ್ಲಿ ಕ್ಯಾಲೊರಿಗಳನ್ನು ವೇಗವಾಗಿ ಸುಡಲು ಸಂಜೆ ಈ ಪಾನೀಯಗಳನ್ನು ಕುಡಿಯಿರಿ
Leave a Comment

Leave a Reply Cancel reply

Your email address will not be published. Required fields are marked *

ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
H1N1
ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
Life Style
hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up