CHITRADURGA NEWS | 04 DECEMBER 2025
ಚಿತ್ರದುರ್ಗ: ವೇದಾವತಿ ನದಿ ಹಾದು ಹೋಗುವ ಜಿಲ್ಲೆಯ ಏಕೈಕ ನಗರ ಹಿರಿಯೂರು ಪಟ್ಟಣದ ಒಳಚರಂಡಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸರ್ಕಾರ 100 ಕೋಟಿ ರೂ. ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಬೆಂಗಳೂರಿನ ವಿಕಾಸ ಸೌಧದ ಸಚಿವರಾದ ಡಿ.ಸುಧಾಕರ್ ಅವರ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ, ಟೆಂಡರ್ ಪ್ರಕ್ರಿಯೆ, ಕಾಮಗಾರಿ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 04 | ಹತ್ತಿ ರೇಟ್ ಎಷ್ಟಿದೆ?
ಹಿರಿಯೂರು ನಗರದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಒಟ್ಟು 206 ಕೋಟಿ ರೂ.ಗಳಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಪರಿಶೀಲನೆ ನಡೆಸಿರುವ ಆರ್ಥಿಕ ಇಲಾಖೆ ಮೊದಲ ಹಂತದ ಕಾಮಗಾರಿಗೆ 100 ಕೋಟಿ ರೂ.ಗಳಿಗೆ ಆಡಳಿತಾತತ್ಮಕ ಅನುಮೋದನೆ ನೀಡಿದೆ.
ಮೊದಲ ಹಂತದ ಕಾಮಗಾರಿ ಎಲ್ಲಿ ?
ಈಗ ಸರ್ಕಾರ ನೀಡಲಿರುವ 100 ಕೋಟಿ ರೂ.ಗಳಲ್ಲಿ ಮೊದಲ ಹಂತದ ಕಾಮಗಾರಿ ಕೈಗೊಳ್ಳಲಿದ್ದು, ಇದನ್ನು ಹಿರಿಯೂರು ಹೃದಯ ಭಾಗ ಅಥವಾ ವೇದಾವತಿ ನದಿಯ ಬಲ ಭಾಗದ ಹಳೇ ಟೌನ್ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಜನವರಿ 2026 ರೊಳಗೆ ಟೆಂಡರ್ ಅಂತಿಮಗೊಳಿಸಿ ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ.
ಶುದ್ಧೀಕರಿಸಿದ ನೀರು ಕೆರೆ ಅಥವಾ ಕೈಗಾರಿಕೆಗೆ:
ಒಳಚರಂಡಿ ಯೋಜನೆ ಮಾಡುವಾಗ ಮಲಿನವಾಗಿ ಬರುವ ನೀರನ್ನು ಶುದ್ಧೀಕರಿಸುವ ಘಟಕ ಅಳವಡಿಕೆಯಾಗಲಿದ್ದು, ಈ ನೀರನ್ನು ಕೆರೆ ಅಥವಾ ಕೈಗಾರಿಕೆಗೆ ಬಳಕೆ ಮಾಡಿಕೊಳ್ಳಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಹಿರಿಯೂರಿನ 25 ವಾರ್ಡ್‌ಗಳಲ್ಲಿ ಕಾಮಗಾರಿ:
ಸಭೆಯಲ್ಲಿದ್ದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಸೆಲ್ವಮಣಿ ಮಾತನಾಡಿ, ಒಳಚರಂಡಿ ಯೋಜನೆ ಕಾಮಗಾರಿಯಲ್ಲಿ ಹಿರಿಯೂರು ನಗರದ ದಕ್ಷಿಣ ಭಾಗದ 25 ವಾರ್ಡ್‍ಗಳಲ್ಲಿ ಕಾಮಗಾರಿ ನಡೆಯಲಿದೆ.
ಇದನ್ನೂ ಓದಿ: SSLC ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ | ಶಾಸಕ ಡಾ.ಎಂ.ಚಂದ್ರಪ್ಪ
ವಿವಿಧ ವ್ಯಾಸದ ಪೈಪ್‍ಗಳ ಮೂಲಕ ಮಲಿನ ನೀರು ಕೊಳವೆ ಮಾರ್ಗ 109. ಕಿ.ಮೀ.ಉದ್ದದಲ್ಲಿ ಹಾದು ಹೋಗಲಿದ್ದು, 3691 ಯಂತ್ರಗುಂಡಿಗಳನ್ನು ನಿರ್ಮಿಸಲಾಗುವುದು. ರಾಷ್ಟ್ರೀಯ ಹೆದ್ದಾರಿ-4 ರ ಬೈಪಾಸ್ ವೇದಾವತಿ ನದಿಯ ದಕ್ಷಿಣ ದಂಡೆಯಲ್ಲಿ ವೆಟ್‍ವೆಲ್ ಹಾಗೂ ಸಂಬಂಧಿಸಿದ ಘಟಕಗಳನ್ನು ನಿರ್ಮಿಸಲಾಗುವುದು.
ಹಳೆಯ ರಾಷ್ಟ್ರೀಯ ಹೆದ್ದಾರಿ-4 ರ ವೇದಾವತಿ ನದಿಯ ಸೇತುವೆ ಬಳಿ ವೆಟ್‍ವೆಲ್ ಹಾಗೂ ಸಂಬಂಧಿಸಿದ ಘಟಕಗಳನ್ನು (ಸಾಗರ್ ರೆಡ್ಡಿ ಹೋಟೆಲ್ ಎದುರು) ನಿರ್ಮಿಸಲಾಗುವುದು ಎಂದು ವಿವರಿಸಿದರು.
ಇದನ್ನೂ ಓದಿ: ಮುಖದ ಆಯಾಸವನ್ನು ನಿವಾರಿಸಿ, ಹೊಳಪು ಹೆಚ್ಚಿಸಲು ಈ ಎಣ್ಣೆಯನ್ನು ಹಚ್ಚಿ
ವೆಟ್‍ವೆಲ್‍ಗಳಿಂದ ಮಲಿನ ನೀರು ಶುದ್ಧೀಕರಣ ಘಟಕದವರೆಗೂ ಡಿ.ಐ. ಏರು ಕೊಳವೆ ಮಾರ್ಗವನ್ನು 2.40 ಕಿ.ಮಿ. ಅಳವಡಿಸುವುದು, ಹೊಸ ಬೈಪಾಸ್ ರಸ್ತೆಯ ಸಮೀಪ 5.00 ಎಂ.ಎಲ್.ಡಿ. ಸಾಮಥ್ರ್ಯದ ಎಸ್.ಬಿ.ಆರ್. ತಂತ್ರಜ್ಞಾನದ ಮಲಿನ ನೀರು ಶುದ್ಧಿಕರಣ ಘಟಕ ನಿರ್ಮಿಸುವುದು, 02 ಸಂಖ್ಯೆಯ ವೆಟ್‍ವೆಲ್‍ಗಳಲ್ಲಿ ಮಲಿನ ನೀರುವ ಶುದ್ಧೀಕರಣ ಘಟಕಕ್ಕೆ ಪಂಪ್ ಮಾಡಲು ಯಂತ್ರೋಪಕರಣಗಳ ಅಳವಡಿಕೆ, ಮಲಿನ ನೀರು ಶುದ್ಧೀಕರಣ ಘಟಕ ಹಾಗೂ 02 ಸಂಖ್ಯೆಯ ವೆಟ್‍ವೆಲ್‍ಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ 11 ಕೆ.ವಿ. ವಿದ್ಯುತ್ ಮಾರ್ಗ ಅಳವಡಿಕೆ ಹಾಗೂ ಈ ಮಲಿನ ನೀರುವ ಶುದ್ಧೀಕರಣ ಘಟಕವನ್ನು ನಿರಂತರವಾಗಿ ನಿಗಾವಹಿಸಲು ವಿನೂತನ ತಂತ್ರಜ್ಞಾನ ಬಳಕೆ ಬಳಸಿಕೊಳ್ಳಲು ಯೋಜಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಸಿಎಂ ಹುದ್ದೆ ಬದಲಾದರೆ ಡಾ.ಪರಮೇಶ್ವರ್ ಅವರಿಗೆ ಆದ್ಯತೆ ಕೊಡಿ
ಸಭೆಯಲ್ಲಿ ಮುಖ್ಯ ಇಂಜಿನಿಯರ್ ಪ್ರವೀಣ್‍ಲಿಂಗಯ್ಯ, ಕಾರ್ಯಪಾಲಕ ಇಂಜಿನಿಯರ್ ಮಲ್ಲೇಶ್‍ನಾಯ್ಕ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಓಬಾನಾಯ್ಕ್, ಹಿರಿಯೂರು ನಗರಸಭೆ ಆಯುಕ್ತ ವಾಸೀಂ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________


