By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    57 minutes ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    57 minutes ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    58 minutes ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    13 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    12 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    59 minutes ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    18 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    5 minutes ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    55 minutes ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: ಬೆಳೆ ಕಟಾವು ಪ್ರಯೋಗ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ | ADC ಕುಮಾರಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬೆಳೆ ಕಟಾವು ಪ್ರಯೋಗ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ | ADC ಕುಮಾರಸ್ವಾಮಿ

News Desk Chitradurga News
Last updated: 5 December 2025 20:14
News Desk Chitradurga News
9 months ago
Share
ಕೃಷಿ ಅಂಕಿ ಅಂಶಗಳ ಎರಡನೇ ತ್ರೈಮಾಸಿಕ ಸಭೆ
SHARE

CHITRADURGA NEWS | 05 DECEMBER 2025

ಚಿತ್ರದುರ್ಗ: ಬೆಳೆ ಕಟಾವು ಪ್ರಯೋಗ ಹಾಗೂ ಜನನ-ಮರಣ ನೋಂದಣಿ ಕಾರ್ಯ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರುವ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಹಕ್ಕು ಪಡೆಯದ ಬ್ಯಾಂಕ್ ಠೇವಣಿಗಳ ಇತ್ಯರ್ಥಕ್ಕಾಗಿ ವಿಶೇಷ ಶಿಬಿರ | ಜಿ.ಪಂ. ಸಿಇಒ ಡಾ.ಎಸ್.ಆಕಾಶ್ ಚಾಲನೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ “ಕೃಷಿ ಅಂಕಿ ಅಂಶಗಳ ಎರಡನೇ ತ್ರೈಮಾಸಿಕ ಸಭೆ” ಹಾಗೂ “ನಾಗರಿಕ ನೋಂದಣಿ ಪದ್ಧತಿ” ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಯಕ್ಕೆ ಸರಿಯಾಗಿ ಕಟಾವು ಪ್ರಯೋಗ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿ ರೈತರಿಗೆ ಸಮಸ್ಯೆ ಅಥವಾ ನಷ್ಟ ಉಂಟಾದರೆ ಸಂಬಂಧಪಟ್ಟವರಿಂದಲೇ ನಷ್ಟ ಭರಿಸಲು ಕ್ರಮ ಕೈಗೊಳ್ಳಲಾಗುವುದು. ನಿಯೋಜಿಸಿದ ಅಧಿಕಾರಿಗಳೇ ಖುದ್ದಾಗಿ ಜಮೀನುಗಳಿಗೆ ಭೇಟಿ ನೀಡಿ, ಬೆಳೆ ಕಟಾವು ಪ್ರಯೋಗ ನಡೆಸಬೇಕು. ಈ ಹಿಂದೆ ಬೆಳೆ ಕಟಾವು ಪ್ರಯೋಗದಲ್ಲಿ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. 

ಚಳ್ಳಕೆರೆ ತಾಲ್ಲೂಕಿನಲ್ಲಿ ಈ ಹಿಂದೆ ಅಕ್ರಮವಾಗಿ ಬೆಳೆ ಪರಿಹಾರ ಧನವನ್ನು ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಪೊಲೀಸ್ ದೂರು ದಾಖಲಾಗಿದೆ. ಪ್ರಕರಣದ ತನಿಖೆಗೆ ಸಮಿತಿ ನೇಮಿಸಲಾಗಿದೆ. 

ಇದನ್ನೂ ಓದಿ: ರೈತರು ಬೆಳೆದ ಮೆಕ್ಕೆಜೋಳ ಏನು ಮಾಡಬೇಕು MLC ರವಿಕುಮಾರ್ ಸರ್ಕಾರಕ್ಕೆ ಪ್ರಶ್ನೆ

ವರದಿ ಆಧರಿಸಿ ಶೀಘ್ರದಲ್ಲೇ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಆಗಲಿದೆ. ತಹಶೀಲ್ದಾರ್ ಹಾಗೂ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಬೆಳೆ ಕಟಾವು ಪ್ರಯೋಗದ ಕುರಿತು ತಮ್ಮ ಹಂತದಲ್ಲಿ ಸಮನ್ವಯ ಸಭೆಯನ್ನು ನಡೆಸಬೇಕು. ಸಭೆ ನಡೆಸದೆ ಲೋಪ ಉಂಟಾದರೆ ಅಂತಹ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಕಠಿಣ ಕ್ರಮಕ್ಕೆ ಶಿಫಾರಸ್ಸಿಗೆ ಸೂಚನೆ:

ಪ್ರಸಕ್ತ ವರ್ಷದ ಕಳೆದ ಜುಲೈ ಮಾಹೆಯಿಂದ ಅಕ್ಟೋಬರ್ ವರೆಗೆ ಪ್ರತಿ ತಾಲ್ಲೂಕಿನಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಕೃಷಿ ಅಂಕಿ ಅಂಶಗಳ ಸಮನ್ವಯ ಸಮಿತಿ 04 ಸಭೆ ನಡೆಸಬೇಕಿತ್ತು, ಆದರೆ ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕಿನಲ್ಲಿ 2 ಸಭೆಗಳನ್ನು ಮಾತ್ರ ನಡೆಸಲಾಗಿದೆ. 

ಸಭೆ ನಡೆಸಲು ವಿಫಲರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಬೇಕು. ಕಳೆದ ಸಭೆಯಲ್ಲಿ ಈ ಸೂಚನೆ ನೀಡಿದ್ದರೂ, ಹೊಸದುರ್ಗ ತಾಲ್ಲೂಕು ಅಂಕಿ ಸಂಖ್ಯೆ ಸಂಗ್ರಹಣೆ ಇಲಾಖೆ ಅಧಿಕಾರಿ ನಿರ್ಲಕ್ಷ್ಯ ತೋರಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮಕ್ಕೆ ಶಿಫಾರಸ್ಸು ಮಾಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ನಿರ್ದೇಶನ ನೀಡಿದರು.

ಇದನ್ನೂ ಓದಿ: ಭದ್ರಾ ಮೇಲ್ದಂಡೆಯಡಿ ಬಿಟ್ಟು ಹೋಗಿರುವ ಕೆರೆಗಳಿಗೂ ನೀರು ತುಂಬಿಸಿ | ರೈತ ಸಂಘದಿಂದ ಬೆಳಗಾವಿ ಚಲೋ

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ನಮೂನೆ-1ರ 3,824 ಬೆಳೆ ಕಟಾವು ಪ್ರಯೋಗ ಪೂರ್ಣಗೊಂಡಿವೆ. ನಮೂನೆ-2ರಲ್ಲಿ 3,495 ಬೆಳೆ ಕಟಾವು ಪ್ರಯೋಗಳಲ್ಲಿ 329 ಪ್ರಯೋಗಗಳು ಪೂರ್ಣಗೊಂಡಿಲ್ಲ. ಈ ಪೈಕಿ ಕಂದಾಯ ಇಲಾಖೆಗೆ 185, ಗ್ರಾಮೀಣಾಭಿವೃದ್ಧಿ ಇಲಾಖೆಗೆ 79, ಕೃಷಿ ಇಲಾಖೆಗೆ 42, ತೋಟಗಾರಿಕೆ ಇಲಾಖೆಗೆ 23 ಪ್ರಯೋಗಳು ಬಾಕಿಯಿವೆ. ಪ್ರಸಕ್ತ ಹಿಂಗಾರು ಹಂಗಾಮಿನಲ್ಲಿ ಅಧಿಸೂಚಿತ 1,026 ಮತ್ತು ಅಧಿಸೂಚಿತವಲ್ಲದ 50 ಸೇರಿ ಒಟ್ಟು 12 ಬೆಳೆಗಳಿಗೆ 1,076 ಬೆಳೆ ಕಟಾವು ಪ್ರಯೋಗ ಕೈಗೊಳ್ಳಲು ಆಯ್ಕೆಯಾಗಿವೆ.

ಕೃಷಿ ಅಂಕಿ ಅಂಶಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಗೆ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿದ್ದು, ಸಹಾಯಕ ಕೃಷಿ ನಿರ್ದೇಶಕರು ಹಾಗೂ ತಹಶೀಲ್ದಾರ್ ಅವರ ಜಂಟಿ ದೃಢೀಕರಣದ ಪ್ರಸ್ತಾವದ ಮೇರೆಗೆ ‘ಬೆಳೆ ಸಮೀಕ್ಷೆ’ ಆ್ಯಪ್‍ನಲ್ಲಿ ಬೆಳೆ ಕ್ಷೇತ್ರ, ವಿಸ್ತೀರ್ಣ, ಮರು ಹೊಂದಾಣಿಕೆ ಮಾಡಲು ಅವಕಾಶ ನೀಡಲಾಗಿದೆ. ಜಿಲ್ಲೆಯ 1,117 ಹಳ್ಳಿಗಳಲ್ಲಿ 7ನೇ ಸಣ್ಣ ನೀರಾವರಿ ಸಮೀಕ್ಷೆಯನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರವಿಕುಮಾರ್.ಎನ್ ಸಭೆಯಲ್ಲಿ ಮಾಹಿತಿ ನೀಡಿದರು.

ಜನನ ಪ್ರಮಾಣ ಪತ್ರ ವಿತರಣೆ ಆಂದೋಲನಕ್ಕೆ ಸೂಚನೆ:

ಜಿಲ್ಲೆಯಲ್ಲಿ ಶೇ.99 ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುತ್ತಿವೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮಗು ಜನನವಾದ ದಿನದಂದೇ ನೊಂದಣಿ ಮಾಡಲು ಕ್ರಮ ವಹಿಸಬೇಕು. ಹೆರಿಗೆ ನಂತರ ಆಸ್ಪತ್ರೆಯಿಂದ ತಾಯಿ ಮಗು ಬಿಡುಗಡೆಯಾಗುವ ಸಮಯದಲ್ಲಿಯೇ ಮಗುವಿನ ಜನನ ಪ್ರಮಾಣ ಪತ್ರವನ್ನು ನೀಡಬೇಕು. ಈ ಸಂಬಂದ ಜಿಲ್ಲೆಯಾದ್ಯಂತ ಜನನ ಪ್ರಮಾಣ ಪತ್ರ ವಿತರಣೆ ಆಂದೋಲನೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಆರೋಗ್ಯ ಇಲಾಖೆ ಅಧಿಕಾರಿಗಳಗೆ ಸೂಚಿಸಿದರು.

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ | OPS ಕುರಿತ ವರದಿ ಸಿದ್ಧ | ಮಾಲತೇಶ್‌ ಮದ್ದಜ್ಜಿ

ಜನನ ಹಾಗೂ ಮರಣ ದಿನದಿಂದ 21 ದಿನದ ಒಳಗಾಗಿ ನೊಂದಣಿ ಮಾಡುವುದು ಸಂಬಂಧಪಟ್ಟ ಅಧಿಕಾರಿಗಳ ಕರ್ತವ್ಯವಾಗಿದೆ. ಬಳಿಕ ವಿಳಂಬವಾಗಿ ಜನನ ಹಾಗೂ ಮರಣ ನೊಂದಣಿಯನ್ನು ಮಾಡಿದ ಎಲ್ಲಾ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ತಾಲ್ಲೂಕು ಮಟ್ಟದ ನಾಗರಿಕ ನೊಂದಣಿ ಪದ್ದತಿಯ ಸಮನ್ವಯ ಸಮಿತಿ ಸಭೆ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ನಿರ್ದೇಶನ ನೀಡಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರವಿಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ 1,347 ಹಾಗೂ ನಗರ ಪ್ರದೇಶದಲ್ಲಿ 14 ನೋಂದಣಿ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿ ಜನವರಿಯಿಂದ ನವೆಂಬರ್ ವರೆಗೆ 17,861 ಜನನ ಹಾಗೂ 15,239 ಮರಣ ನೊಂದಣಿಯಾಗಿವೆ. ಜಿಲ್ಲೆಯಲ್ಲಿ ಬಾಕಿಯಿದ್ದ ಹಳೆಯ 32,650 ಜನನ ಮತ್ತು ಮರಣ ದಾಖಲೆಗಳ ಸ್ಕ್ಯಾನಿಂಗ್ ಹಾಗೂ ಡಿಜಟಲೀಕರಣ ಕಾರ್ಯವನ್ನು ಖಾಸಗಿ ಕಂಪನಿಗೆ ಟೆಂಡರ್ ನೀಡಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಸಹಾಯಕ ಅಂಕಿ-ಸಂಖ್ಯೆ ಸಂಗ್ರಹಣಾಧಿಕಾರಿ ಅಶ್ವತ್ಥಾಮ, ವೀಣಾ, ಚಂದ್ರಪ್ಪ, ಸಹಾಯಕ ನಿರ್ದೇಶಕರುಗಳಾದ ಶಶಿರೇಖಾ, ಯಾಸಿನ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ADC KumaraswamyADC ಕುಮಾರಸ್ವಾಮಿChitradurgaChitradurga newsCrop harvestingಚಿತ್ರದುರ್ಗಚಿತ್ರದುರ್ಗ ನ್ಯೂಸ್ಬೆಳೆ ಕಟಾವು
Share This Article
Facebook Email Print
Previous Article ಹಕ್ಕು ಪಡೆಯದ ಬ್ಯಾಂಕ್ ಠೇವಣಿಗಳ ಇತ್ಯರ್ಥಕ್ಕಾಗಿ ವಿಶೇಷ ಶಿಬಿರ | ಜಿ.ಪಂ. ಸಿಇಒ ಡಾ.ಎಸ್.ಆಕಾಶ್ ಚಾಲನೆ
Next Article Mass wedding at Murugan Mutt ಮುರುಘಾ ಮಠದಲ್ಲಿ ಸಾಮೂಹಿಕ ವಿವಾಹ | ದಾಂಪತ್ಯಕ್ಕೆ ಕಾಲಿಟ್ಟ ಜೋಡಿಗಳೆಷ್ಟು ? 
Leave a Comment

Leave a Reply Cancel reply

Your email address will not be published. Required fields are marked *

H1N1
ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
Life Style
hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
ವಚನಾಭಿಷೇಕ ಕಾರ್ಯಕ್ರಮ
ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
ಮುಖ್ಯ ಸುದ್ದಿ
New office bearers elected for Chitradurga Taluk Contractors Association
ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up