
CHITRADURGA NEWS | 09 DECEMBER 2025
ಚಿತ್ರದುರ್ಗ: ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ
ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ಯಾದವ ಗುರುಪೀಠದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಪ್ರತಿ ಸಮುದಾಯಕ್ಕೂ ರಾಜಕೀಯ ಪ್ರಾತಿನಿಧ್ಯ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾದವ ಸಮುದಾಯದ ಡಿ.ಟಿ.ಶ್ರೀನಿವಾಸ್ ಅವರಿಗೆ ಮಂತ್ರಿ ಸ್ಥಾನ ಕೊಟ್ಟರೆ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಈ ಹಿಂದೆ ಸಮುದಾಯದ ಜಯಮ್ಮ ಬಾಲರಾಜ್ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಿಸಲಾಗಿತ್ತು. ಅದರಂತೆ ಈ ಬಾರಿಯೂ ಸಮುದಾಯಕ್ಕೆ ಅವಕಾಶ ಕಲ್ಪಿಸಬೇಕು. ಬೆಳಗಾವಿಯ ಅಧಿವೇಶನ ಮುಗಿದ ನಂತರ ಮುಖ್ಯಮಂತ್ರಿ ಬಳಿ ನಿಯೋಗ ತೆರಳುತ್ತೇವೆ ಎಂದು ತಿಳಿಸಿದರು.
ಯಾದವ ಸಮಾಜದ ಮುಖಂಡ ಕೆ.ಎಂ.ಹಾಲಸ್ವಾಮಿ ಮಾತನಾಡಿ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡಿ ನಮ್ಮ ಸಮುದಾಯಕ್ಕೆ ಆಗಿರುವ ವಂಚನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರಿಪಡಿಸಬೇಕು ಎಂದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 09 | ಹತ್ತಿ ರೇಟ್ ಎಷ್ಟಿದೆ?
2008 ರಲ್ಲಿ ಚಿತ್ರದುರ್ಗದಲ್ಲಿ ನಡೆದ ಸಮಾವೇಶಕ್ಕೆ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬಿಟ್ಟು ಅಹಿಂದ ನಾಯಕ ಸಿದ್ದರಾಮಯ್ಯ ಅವರನ್ನು ಕರೆಸಿದ್ದೆವು. 2013 ರಲ್ಲಿ ನಮ್ಮ ಜನಾಂಗದ ಎ.ಕೃಷ್ಣಪ್ಪನವರಿಗೆ ಟಿಕೇಟ್ ತಪ್ಪಿತ್ತು. ಹಾಗಾಗಿ ಈಗ ಡಿ.ಟಿ.ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡಿ ಯಾದವ ಜನಾಂಗಕ್ಕೆ ಸಾಮಾಜಿಕ ನ್ಯಾಯ ಒದಗಿಸುವಂತೆ ಮನವಿ ಮಾಡಿದರು.
ನಗರಸಭೆ ಮಾಜಿ ಅಧ್ಯಕ್ಷ, ಸಮಾಜದ ಮುಖಂಡ ಸಿ.ಟಿ.ಕೃಷ್ಣಮೂರ್ತಿ ಮಾತನಾಡಿ, ಸಣ್ಣ ಸಣ್ಣ ಜಾತಿಯವರನ್ನು ಎಂ.ಎಲ್.ಸಿ.ಮಾಡಿ ಮಂತ್ರಿ ಸ್ಥಾನ ನೀಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್‌ಗೆ ಸಚಿವ ಸ್ಥಾನ ಕೊಡಬೇಕು. 25 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯಿರುವ ಯಾದವ ಸಮಾಜವನ್ನು ಕಡೆಗಣಿಸದೆ ಪ್ರಾತಿನಿಧ್ಯ ಕೊಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಮದ್ಯಪಾನದಿಂದ ಲಿವಿರ್ ಸಿರೋಸಿಸ್ ಹಾಗೂ ಜಾಂಡೀಸ್ | ಅಧಿವೇಶನದಲ್ಲಿ ಧ್ವನಿಯೆತ್ತಿದ ರವಿಕುಮಾರ್, ಕೆ.ಎಸ್.ನವೀನ್
ಯಾದವ ಸಮಾಜದ ಮುಖಂಡರಾದ ಭೀಮಸಮುದ್ರದ ಸಿದ್ದಪ್ಪ, ರೇವಣಸಿದ್ದಪ್ಪ ಮತ್ತಿತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
