
CHITRADURGA NEWS | 14 DECEMBER 2025
ಚಿತ್ರದುರ್ಗ: ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿದ್ದ, ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಂಕರಪ್ಪ(95) ನಿಧನರಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: MLC ಕೆ.ಎಸ್.ನವೀನ್ ಅವರ ಮಾವ ಕೆ.ಟಿ.ತಿಪ್ಪೇಸ್ವಾಮಿ ನಿಧನ
ಅವಿಭಜಿತ ಚಿತ್ರದುರ್ಗ ಜಿಲ್ಲೆಯಲ್ಲಿದ್ದ ದಾವಣಗೆರೆ ನಗರಸಭೆ ಅಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ ಡಾ.ಶಾಮನೂರು ಶಿವಶಂಕರಪ್ಪ ಅವರು, ಸತತ 6ಬಾರಿ ಶಾಸಕರಾಗಿ, ಕಾಂಗ್ರೆಸ್ ಪಕ್ಷದ ಖಾಯಾಂ ಖಜಾಂಚಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಪ್ತರಾಗಿದ್ದ ಶಾಮನೂರು, ದೊಡ್ಡ ಉದ್ಯಮಿ ಮಾತ್ರವಲ್ಲದೆ ಸಮಾಜ ಸೇವೆಯಲ್ಲಿ ಸದಾ ಮುಂದಿದ್ದು, ಕೊಡುಗೈ ದಾನಿಯಾಗಿದ್ದರು.
ಇದನ್ನೂ ಓದಿ: ನಾಕೀಕೆರೆ ಕೋಡಿ ಆಲದ ಕೆಂಚಾಂಬಿಕಾ ದೇವಿ ಜಾತ್ರೆ
ಚಿತ್ರದುರ್ಗ ಜಿಲ್ಲೆಯ ಸಾಣೇಹಳ್ಳಿಯಲ್ಲಿ ಡಾ.ಶಾಮನೂರು ಶಿವಶಂಕರಪ್ಪ ಅವರ ಹೆಸರಿನಲ್ಲಿ ಒಳಾಂಗಣ ರಂಗಮಂದಿರ ನಿರ್ಮಾಣವಾಗಿದೆ.
ಮುರುಘಾ ಮಠದಲ್ಲಿರುವ ಅನುಭವ ಮಂಟಪ ನಿರ್ಮಾಣದಲ್ಲೂ ಅವರ ಸೇವೆಯಿದೆ. ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ ಸ್ಮಾರಕ ನಿರ್ಮಾಣಕ್ಕೂ ಶಾಮನೂರು ಶಿವಶಂಕರಪ್ಪ ಸಹಾಯ ಮಾಡಿದ್ದರು.
ಇದನ್ನೂ ಓದಿ: MLC ಕೆ.ಎಸ್.ನವೀನ್ ಅವರ ಮಾವ ಕೆ.ಟಿ.ತಿಪ್ಪೇಸ್ವಾಮಿ ನಿಧನ
ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಸೇರಿದಂತೆ ಜಿಲ್ಲೆಯ ಹಲವು ದೇವಸ್ಥಾನ ಇನ್ನಿತರೆ ಚಟುವಟಿಕೆಗಳಿಗೆ ದಾನಿಗಳಾಗಿದ್ದರು.
ಹೊಳಲ್ಕೆರೆ ತಾಲೂಕು ಎಮ್ಮಿಗನೂರು ಗ್ರಾಮದಲ್ಲಿರುವ ಶ್ರೀ ಕಲ್ಲೇಶ್ವರ ಸ್ವಾಮಿ ಡಾ.ಶಾಮನೂರು ಶಿವಶಂಕರಪ್ಪ ಅವರ ಮನೆ ದೇವರಾಗಿದ್ದು, ಅಲ್ಲಿನ ಅಭಿವೃದ್ಧಿ ಕಾರ್ಯಗಳಲ್ಲಿ ಅವರ ಪಾತ್ರವಿತ್ತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

ಅದ್ಬುತ ಮನೋಜ್ಞಾನಿ, ಅಸಾಮಾನ್ಯ ವ್ಯವಹಾರದ ಅನುಭವಿ, ಜನಸಾಮಾನ್ಯರ ಮನಗೆದ್ದ ಮಹಾನ್ ಮುತ್ಸದ್ದಿ ರಾಜಕಾರಣಿ, ನೇರ ನಡೆ, ನೇರ ನುಡಿಯ ಸರದಾರ ಇವರ ಬಗ್ಗೆ ಎಷ್ಟು ಹೇಳಿದರು ಸಾಲದು ಅಂತಹ ಮಹಾನ್ ಚೇತನ ಇಂದು ಇಹಲೋಕ ತ್ಯಜಿಸಿರುವುದು ನಮ್ಮ ಸಮಾಜಕ್ಕೆ ರಾಜ್ಯದ ಜನತೆಗೆ ವಿಶೇಷವಾಗಿ ಇಡೀ ದಾವಣಗೆರೆ ಜಿಲ್ಲೆಗೆ ತುಂಬಾ ನೋವಿನ ಸಂಗತಿಯಾಗಿದೆ ತುಂಬು ಆಯಸ್ಸು ಬಾಳಿ ಬದುಕಿದ ಸಮಾಜಮುಖಿ ಶರಣ ಲಿಂಗೈಕ್ಯ ಶ್ರೀ ಶಿವಶಂಕರಪ್ಪ ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಎಂದು ಸಮಸ್ತ ಜನತೆಯ ಪರವಾಗಿ ಪ್ರಾರ್ಥಿಸುತ್ತೇನೆ ಗೌರವ ನಮನಗಳೊಂದಿಗೆ…… 🙏🏼🙏🏼🙏🏼🙏🏼💐💐💐💐