
CHITRADURGA NEWS | 15 DECEMBER 2025
ಹೊಳಲ್ಕೆರೆ: ಮುತ್ತುಗದೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ಸೌಧ ಹಾಗೂ ಅರಿವು ಕೇಂದ್ರವನ್ನು ಶಾಸಕ ಡಾ.ಎಂ.ಚಂದ್ರಪ್ಪ ಉದ್ಘಾಟಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 15 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ನಂತರ ಮಾತನಾಡಿದ ಶಾಸಕರು, ತಾಲ್ಲೂಕಿನಾದ್ಯಂತ 493 ಹಳ್ಳಿಗಳಲ್ಲಿ ಎಲ್ಲೆಲ್ಲಿ ಕೆರೆಗಳಿಂದ ರೈತರಿಗೆ ನೀರು ಸಿಗುವುದಿಲ್ಲವೋ ಅಲ್ಲೆಲ್ಲಾ ಸರಣಿ ಚೆಕ್‍ಡ್ಯಾಂಗಳನ್ನು ಕಟ್ಟಿಸಿರುವುದರಿಂದ ಇನ್ನು ಎರಡು ಮೂರು ವರ್ಷಗಳು ಮಳೆ ಬಾರದಿದ್ದರು ರೈತ ಬದುಕುವ ವಿಶ್ವಾಸವಿಟ್ಟುಕೊಂಡಿದ್ದಾರೆ.
ರೈತನ ನೋವು ಏನೆಂಬುದನ್ನು ಅರ್ಥಮಾಡಿಕೊಂಡು ಕೆಲಸ ಮಾಡುತ್ತಿದ್ದೇನೆ. ಚಿಕ್ಕಜಾಜೂರಿನ ಕೋಟೆಹಾಳ್ ಸಮೀಪ ರೇಷ್ಮೆ ಇಲಾಖೆಗೆ ಸೇರಿದ ಹದಿಮೂರುವರೆ ಎಕರೆ ಜಮೀನನ್ನು ವಿದ್ಯುತ್ ಇಲಾಖೆಗೆ ಹಸ್ತಾಂತರಿಸಿದ್ದು, ಐದುನೂರು ಕೋಟಿ ರೂ.ವೆಚ್ಚದಲ್ಲಿ ಪವರ್ ಸ್ಟೇಷನ್ ಕಟ್ಟಿಸುತ್ತಿದ್ದೇನೆ.
ಜೋಗ್‍ಫಾಲ್ಸ್‍ನಿಂದ ಇಲ್ಲಿಗೆ ನೇರವಾಗಿ ರೈತರಿಗೆ ವಿದ್ಯುತ್ ಪೂರೈಕೆಯಾಗಲಿದೆ. ಕೂಟಿಗೆಹಳ್ಳಿ, ಗುಂಜಿಗನೂರು, ಗುಂಡೇರಿ, ತುಪ್ಪದಹಳ್ಳಿ, ತೇಕಲವಟ್ಟಿ, ತಾಳ್ಯದಲ್ಲಿ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸುತ್ತಿದ್ದೇನೆ. ರಾಜ್ಯ ಸರ್ಕಾರದಲ್ಲಿ ಹಣ ಗ್ಯಾರೆಂಟಿ ಯೋಜನೆಗಳಿಗೆ ಖರ್ಚಾಗುತ್ತಿದೆ. ಸಾರ್ವಜನಿಕರ ಬದುಕಿಗಿಲ್ಲ. ಸರ್ಕಾರ ಯಾವುದಾದರೂ ಇರಲಿ ಅನುದಾನ ತಂದು ಪ್ರತಿನಿತ್ಯವೂ ಒಂದಲ್ಲ ಒಂದು ಅಭಿವೃದ್ದಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: ನ್ಯಾಯಾಲಯದಲ್ಲಿ ಮತ್ತೆ ಒಂದಾದ ಒಂಭತ್ತು ಜೋಡಿಗಳು | ಮೆಗಾ ಲೋಕ ಅದಾಲತ್‌ನಲ್ಲಿ ವಿವಾದ ಅಂತ್ಯ
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಲಕ್ಷ್ಮಿದೇವಿ ರಂಗಸ್ವಾಮಿ, ಉಪಾಧ್ಯಕ್ಷ ದೀಪಕ್ ಎಸ್. ಹೊಳಲ್ಕೆರೆ ಬಿಜೆಪಿ. ಮಂಡಲ ಮಾಜಿ ಅಧ್ಯಕ್ಷ ಸಿದ್ದೇಶ್, ತಾಲ್ಲೂಕು ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಟಿ.ಹನುಮಂತಪ್ಪ, ರುದ್ರಣ್ಣ, ಓಂಕಾರಸ್ವಾಮಿ, ಈರಣ್ಣ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಪ್ರಕಾಶ್ ಎಸ್. ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಗೂ ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
