CHITRADURGA NEWS | 16 DECEMBER 2025
ಚಿತ್ರದುರ್ಗ: ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ 66ನೇ ಜನ್ಮ ದಿನಾಚರಣೆಯನ್ನು ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಕೇಕ್ ಕತ್ತರಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 16 | ಹತ್ತಿ ರೇಟ್ ಎಷ್ಟಿದೆ?
ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ ಮಾತನಾಡಿ, ಎಚ್.ಡಿ.ಕುಮಾರಸ್ವಾಮಿ ಅವರು ಈ ನಾಡು ಕಂಡ ಜನಪ್ರಿಯ ಮುಖ್ಯಮಂತ್ರಿ. ರೈತರ ಸಾಲ ಮನ್ನಾ ಮಾಡುವ ಮೂಲಕ ಮಾನವೀಯತೆ ತೋರಿದ್ದಾರೆ. ಮಣ್ಣಿನ ಮಗ ಎನ್ನುವ ಹೆಸರಿಗೆ ತಕ್ಕಂತೆ ಕೃಷಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಭಾಗ್ಯಲಕ್ಷ್ಮಿ ಯೋಜನೆ, ಗ್ರಾಮ ವಾಸ್ತವ್ಯ ಅವರ ಅಧಿಕಾರವಧಿಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು ಎಂದು ಸ್ಮರಿಸಿದರು.
2028 ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಗಲಿ ಎಂದು ಹಾರೈಸಿದ ಅವರು,ಕೇಂದ್ರ ಮಂತ್ರಿಯಾಗಿರುವ ಕುಮಾರಸ್ವಾಮಿ ರಾಜಕೀಯ ಜೀವನದುದ್ದಕ್ಕೂ ಸರಳತೆ ಮೈಗೂಡಿಸಿಕೊಂಡಿದ್ದಾರೆ. ಎಂದೂ ಅಧಿಕಾರದ ದರ್ಪ ತೋರಿದವರಲ್ಲ ಎಂದು ತಿಳಿಸಿದರು.
ಕೇಕ್ ಕತ್ತರಿಸಿದ ನಂತರ ನಗರದೇವತೆ ಉಚ್ಚಂಗಿಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆ ಮಾಡಿಸಿದ ನಂತರ ಕಬೀರಾನಂದಾಶ್ರಮದಲ್ಲಿರುವ ವೃದ್ದರಿಗೆ ಹಾಗೂ ಶಾಲಾ ಮಕ್ಕಳಿಗೆ ಹಣ್ಣುಗಳನ್ನು ವಿತರಿಸಲಾಯಿತು.
ಇದನ್ನೂ ಓದಿ: SJM ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಧಾರವಾಡದ ಪ್ರೊ.ಕಾಳಗೌಡ ಬಸಪ್ಪ ಗುಡಸಿ ಅಧಿಕಾರ ಸ್ವೀಕಾರ
ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿನಾಯಕ, ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಯುವ ಘಟಕದ ಅಧ್ಯಕ್ಷ ಓ.ಪ್ರತಾಪ್ಜೋಗಿ, ಚಿದಾನಂದ್, ಶಂಕರಮೂರ್ತಿ, ಎಂ.ಎಸ್.ಮಂಜುನಾಥ್, ನಾಗರಾಜು, ಗೀತಮ್ಮ, ಶಿವಪ್ರಸಾದ್ಗೌಡ, ಗೀತ, ಸೋಮು ಇತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
