
CHITRADURGA NEWS | 20 DECEMBER 2025
ಚಿತ್ರದುರ್ಗ: ಖಾಸಗಿ ಬಸ್ಗಳ ಮೇಲೆ ಶೇ.60 ರಷ್ಟು ಕನ್ನಡ ಬಳಸುವಂತೆ ಸರ್ಕಾರದ ಆದೇಶವಿದ್ದರೂ ಕೆಲವು ಬಸ್ಗಳು ಪಾಲಿಸುತ್ತಿಲ್ಲವೆಂದು ಕರುನಾಡ ವಿಜಯಸೇನೆ ವತಿಯಿಂದ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ, ಖಾಸಗಿ ಬಸ್ ಮಾಲೀಕರ ಸಂಘದ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ಮೇಷ | ವಾರ್ಷಿಕ ರಾಶಿ ಭವಿಷ್ಯ- 2026

ಬಹುತೇಕ ಖಾಸಗಿ ಬಸ್ಗಳ ಮೇಲೆ ಕನ್ನಡವನ್ನು ಬಳಸಲಾಗಿದೆಯಾದರು ಕೆಲವು ಬಸ್ಗಳು ಇನ್ನು ಆಂಗ್ಲ ಭಾಷೆಯನ್ನು ಬಳಸುತ್ತ ಕನ್ನಡವನ್ನು ಕಡೆಗಣಿಸುತ್ತಿವೆ.
ಜಿಲ್ಲೆಯ ಎಲ್ಲಾ ಖಾಸಗಿ ಬಸ್ಗಳ ಮೇಲೆ ಶೇ.60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕೆಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 20 | ಹತ್ತಿ ರೇಟ್ ಎಷ್ಟಿದೆ?
ಪ್ರತಿಭಟನೆಯಲ್ಲಿ ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಪ್ರದೀಪ್, ತಿಪ್ಪೇಸ್ವಾಮಿ, ಮಧುಸೂದನ್, ಚಂದನ ಇನ್ನು ಅನೇಕರು ಪಾಲ್ಗೊಂಡಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
