CHITRADURGA NEWS | 22 DECEMBER 2025
ಚಿತ್ರದುರ್ಗ: ಪೊಲಿಯೋ ಮುಕ್ತ ಭಾರತ ನಿರ್ಮಾಣ ಮಾಡುವ ದಿಶೆಯಲ್ಲಿ ಧಿಟ್ಟ ಹೆಜ್ಜೆ ಹಾಕುತ್ತಿರುವ ಆರೋಗ್ಯ ಇಲಾಖೆ ಮೊದಲ ದಿನವೇ ಗುರಿ ಮೀರಿದ ಸಾಧನೆ ಮಾಡಿದೆ.
ಡಿಸೆಂಬರ್ 21 ರಂದು 24 ರವರೆಗೆ ಹಮ್ಮಿಕೊಂಡಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಜಿಲ್ಲೆಯ ತಾಯಂದಿರು ಸ್ಪಂಧಿಸಿದ್ದು, ಮೊದಲ ದಿನವೇ ಶೇ.99.89 ರಷ್ಟು ಮಕ್ಕಳಿಗೆ ಲಸಿಕೆ ಹಾಕಲಾಗಿದೆ.
ಇದನ್ನೂ ಓದಿ: ಕ್ರಿಮಿನಲ್, ಬ್ಲಾಕ್‌ಮೇಲ್ ಪತ್ರಕರ್ತರನ್ನು ಹೊರಗೆ ಕಳಿಸಿದಾಗ ಕಾರ್ಯನಿರತರಿಗೆ ಗೌರವ | ಶಿವಾನಂದ ತಗಡೂರು
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭಾನುವಾರ ಬೆಳಗ್ಗೆ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಡಳಿತ, ತಾಲೂಕು ಪಂಚಾಯಿತಿ ವತಿಯಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಒಳಪಂಗಡಗಳು ವೀರಶೈವ – ಲಿಂಗಾಯತ ಮಹಾಸಭಾ ಜೊತೆ ನಿಲ್ಲಬೇಕು | ಕೆ.ಎಸ್.ನವೀನ್
ಜಿಲ್ಲೆಯಲ್ಲಿ ಐದು ವರ್ಷದೊಳಗಿನ 126361 ಮಕ್ಕಳಿದ್ದು, ಇದರಲ್ಲಿ 12219 ಮಕ್ಕಳಿಗೆ ಮೊದಲ ದಿನವೇ ಲಸಿಕೆ ಹಾಕಲಾಗಿದೆ. ಚಳ್ಳಕೆರೆ ತಾಲೂಕಿನಲ್ಲಿ ಒಟ್ಟು ಶೇ.107.70 ರಷ್ಟು ಗುರಿ ಮೀರಿದ ಸಾಧನೆಯಾಗಿದೆ. ಹೊಸದುರ್ಗದಲ್ಲಿ 100.84 ರಷ್ಟು ಸಾಧನೆ ಮಾಡಲಾಗಿದೆ. ಚಿತ್ರದುರ್ಗದಲ್ಲಿ 98.23, ಹಿರಿಯೂರು ತಾಲೂಕಿನಲ್ಲಿ 99.17 ಹಾಗೂ ಮೊಳಕಾಲ್ಮೂರು ತಾಲೂಕಿನಲ್ಲಿ 97.98 ರಷ್ಟು ಮಕ್ಕಳಿಗೆ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ.
ಜಿಲ್ಲೆಯಲ್ಲಿ 4,12,426 ಮನೆಗಳು 1169 ಬೂತ್ ತಂಡಗಳನ್ನು ರಚಿಸಿ 239 ಮೇಲ್ವಿಚಾರಕರನ್ನು ನಿಯೋಜಿಸಿ ಒಟ್ಟು ಐದು ವರ್ಷದೊಳಗಿನ 126361 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.
ಇದನ್ನೂ ಓದಿ: ಸಂಸದರು, ಶಾಸಕರ ಅನುದಾನದ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸಿ | ADC ಕುಮಾರಸ್ವಾಮಿ
ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆದ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅಭಿನವ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

