
CHITRADURGA NEWS | 30 DECEMBER 2025
ಚಿತ್ರದುರ್ಗ: ಗ್ಯಾಸ್ ಗೀಜರ್ ಬಳಸುವ ಪ್ರತಿಯೊಬ್ಬರೂ ಒಮ್ಮೆ ಓದಲೇಬೇಕಾದ ಸುದ್ದಿ ಇದು. ಹೌದು ಬಿಸಿ ನೀರು ಕಾಯಿಸಿಕೊಳ್ಳಲು ಸಾಕಷ್ಟು ಜನ ಗ್ಯಾಸ್ ಗೀಜರ್ ಬಳಕೆ ಮಾಡುತ್ತೇವೆ. ಆದರೆ. ಅದರಿಂದ ಹೊರಹೊಮ್ಮುವ ವಿಷಾನಿಲ ಲೀಕ್ ಆದರೆ ಪ್ರಾಣಕ್ಕೆ ಕುತ್ತು ಎನ್ನುವುದು ಸತ್ಯ.
ಇಂಥದ್ದೇ ಒಂದು ಘಟನೆ ಚಿತ್ರದುರ್ಗದಲ್ಲಿ ನಡೆದಿದ್ದು, ಬಿಎಸ್ಸಿ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಚಿತ್ರದುರ್ಗ ಚಳ್ಳಕೆರೆ ರಸ್ತೆಯ ವಿನಾಯಕ ಕಲ್ಯಾಣ ಮಂಟಪದ ಬಳಿ ಮನೆಯೊಂದರಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಬೈಕ್ ಅಪಘಾತದಲ್ಲಿ ASI ಸಾವು | ಮತ್ತೋರ್ವ ಸಿಬ್ಬಂದಿಗೆ ಗಾಯ
ಬಿಎಸ್ಸಿ ಓದುತ್ತಿದ್ದ ನೂತನ್ ಎಂಬ ವಿದ್ಯಾರ್ಥಿನಿ ಗೀಜರ್‌ನಿಂದ ಲೀಕೇಜ್ ಆದ ಗ್ಯಾಸ್‌ನಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ನಾನ ಮಾಡುವ ಕೋಣೆಯ ಎಲ್ಲ ಕಿಟಕಿ ಹಾಗೂ ಬಾಗಿಲು ಮುಚ್ಚಿದ್ದರಿಂದ ಉಸಿರುಗಟ್ಟಿದ್ದ ಯುವತಿ, ಹೊರಗೆ ಬರಲಾಗದೆ ಅಸ್ವಸ್ಥಳಾಗಿದ್ದಾರೆ.
ನಗರದ ಖಾಸಗಿ ಕಾಲೇಜಿನಲ್ಲಿ ನೂತನ ಎರಡನೇ ವರ್ಷದ ಬಿಎಸ್ಸಿ ಅಧ್ಯಯನ ಮಾಡುತ್ತಿದ್ದಳು. ಮಂಗಳವಾರ ಬೆಳಗ್ಗೆ ಸ್ನಾನಕ್ಕೆ ಹೋದಾಗ ನೀರು ಬಿಟ್ಟಿದ್ದು, ಬಾಗಿಲು ಮುಚ್ಚಿದ್ದಾರೆ. ಈ ವೇಳೆ ಗ್ಯಾಸ್ ಸೋರಿಕೆಯಾಗಿ ತೀವ್ರ ಅಸ್ವಸ್ಥಗೊಂಡ ಯುವತಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದು, ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಬೈಕಿನಲ್ಲಿ ಮೃತದೇಹ ರವಾನೆ:
ಇನ್ನೂ ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದ ಪೋಷಕರು, ಮೃತ ದೇಹವನ್ನು ಬೈಕಿನಲ್ಲೇ ತೆಗೆದುಕೊಂಡು ಹೋದರು. ಸಾವಿನ ಬಗ್ಗೆ ಯಾವುದೇ ಅನುಮಾನ ಇಲ್ಲ ಎಂದು ಮೃತ ಯುವತಿ ತಂದೆ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
