
CHITRADURGA NEWS | 30 DECEMBER 2025
ಚಿತ್ರದುರ್ಗ: ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಕಾಂಗ್ರೆಸ್ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಅಭ್ಯರ್ಥಿಯನ್ನೇ ಘೋಷಣೆ ಮಾಡಿದೆ.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಡಿಸೆಂಬರ್ 30 ರಂದು ಅಭ್ಯರ್ಥಿ ಘೋಷಣೆ ಮಾಡಿದ್ದು, ತುಮಕೂರಿನ ಶಶಿ ಹುಲಿಕುಂಟೆ ಮಠ ಅವರು ಆಗ್ನೇಯ ಪದವೀದರರ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
ಈ ಸುದ್ದಿಯನ್ನೂ ಓದಿ: ಆಗ್ನೇಯ ಪದವೀಧರರ ಕ್ಷೇತ್ರ | ಮತದಾರರ ಅಂತಿಮ ಪಟ್ಟಿ ಪ್ರಕಟ | ಜಿಲ್ಲೆಯಲ್ಲಿ 41,358 ಮತದಾರರು
ಉಳಿದಂತೆ ಪಶ್ಚಿಮ ಪದವೀದರರ ಕ್ಷೇತ್ರದ ಅಭ್ಯರ್ಥಿಯಾಗಿ ಮೋಹನ್ ಲಿಂಬಿಕಾಯಿ, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಶರಣಪ್ಪ ಮತ್ತೂರ್ ಹಾಗೂ ಬೆಂಗಳೂರು ಶಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.

ಕಳೆದ 30 ವರ್ಷಗಳಿಂದ ಆಗ್ನೇಯ ಪದವೀದರರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಆದರೆ, ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಗೆಲುವಿಗೆ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಚಿತ್ರದುರ್ಗದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಟಾಸ್ಕ್ ಕೊಟ್ಟು ಹೋಗಿದ್ದಾರೆ.
ಬಿಜೆಪಿ ಅಭ್ಯರ್ಥಿ ಯಾರು ?
ಆಗ್ನೇಯ ಪದವೀದರರ ಕ್ಷೇತ್ರ ಸದ್ಯ ಬಿಜೆಪಿ ಹಿಡಿತದಲ್ಲಿದ್ದು, ಚಿದಾನಂದ ಎಂ.ಗೌಡ ಹಾಲಿ ಸದಸ್ಯರಾಗಿದ್ದಾರೆ. ಅವರೇ ಮತ್ತೆ ಟಿಕೇಟ್ ಪಡೆದು ಸ್ಪರ್ಧೆ ಮಾಡುತ್ತಾರಾ ಎನ್ನುವ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ.
ಈ ಸುದ್ದಿಯನ್ನೂ ಓದಿ: ಅಡಿಕೆ ಧಾರಣೆ | ಡಿಸೆಂಬರ್ 30 | ರಾಜ್ಯದ ಅಡಿಕೆ ಮಾರುಕಟ್ಟೆಗಳ ಪೂರ್ಣ ವಿವರ
ಈ ನಡುವೆ ಬಿಜೆಪಿಯಿಂದ ಮಾಜಿ ಶಾಸಕ ವೈ.ಎ.ನಾರಾಯಣಸ್ವಾಮಿ ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ. ಪಕ್ಷ ಟಿಕೇಟ್ ನೀಡಿದರೆ ಸ್ಪರ್ಧೆ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ.
ವಸಂತಕುಮಾರ್ ಓಡಾಟ:
ಇನ್ನೂ ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಹೊಸದುರ್ಗ ಮೂಲದ ವಸಂತಕುಮಾರ್ ಆಗ್ನೇಯ ಪದವೀದರರ ಕ್ಷೇತ್ರಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಈ ಸುದ್ದಿಯನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು | ಹೊಸ ವರ್ಷದ ಮುನ್ನಾ ದಿನ ಬಿಡುಗಡೆ
ಈಗಾಗಲೇ ಮತದಾರರ ನೊಂದಣಿಯಲ್ಲಿ ತೊಡಗಿಸಿಕೊಂಡಿರುವ ವಸಂತಕುಮಾರ್, ಸುದ್ದಿಗೋಷ್ಠಿ ನಡೆಸಿ ನಾನು ಆಕಾಂಕ್ಷಿ. ಪಕ್ಷ ಟಿಕೇಟ್ ನೀಡಿದರೆ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಕೆ.ಜಿ.ಜಗದೀಶ್ ಅಭ್ಯರ್ಥಿನಾ ?
ರಾಷ್ಟ್ರೀಯ ಹೆದ್ದಾರಿ ವಲಯ ಮುಖ್ಯ ಇಂಜಿನಿಯರ್, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರೂ ಆಗಿರುವ ಕೆ.ಜಿ.ಜಗದೀಶ್ ಈಗ ನಿವೃತ್ತಿ ಹೊಂದಿದ್ದಾರೆ.
ಸರ್ಕಾರಿ ನೌಕರರು, ಸಮುದಾಯ ಹಾಗೂ ಅಭಿಮಾನಿಗಳು ಅದ್ದೂರಿಯಾಗಿ ಸನ್ಮಾನಿಸಿದ್ದಾರೆ. ಮಾಜಿ ಸಚಿವ ಎಚ್.ಆಂಜನೇಯ ರಾಜಕೀಯ ಜೀವನಕ್ಕೆ ಶುಭವಾಗಲಿ ಎಂದೂ ಹಾರೈಸಿದ್ದಾರೆ.
ಈ ಸುದ್ದಿಯನ್ನೂ ಓದಿ: ಗ್ಯಾಸ್ ಗೀಜರ್ ಲೀಕೇಜ್ | ಬಿಎಸ್ಸಿ ವಿದ್ಯಾರ್ಥಿನಿ ಸಾವು
ಕೆ.ಜಿ.ಜಗದೀಶ್ ಪದವೀದರರ ಕ್ಷೇತ್ರದ ಅಭ್ಯರ್ಥಿ ಎಂಬ ಗಾಳಿ ಸುದ್ದಿ ಹರಿದಾಡುತ್ತಿದೆ. ಆದರೆ, ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿ ಘೋಷಣೆ ಮಾಡಿದ್ದು, ಕೆ.ಜಿ.ಜಗದೀಶ್ ಯಾವ ಪಕ್ಷದ ಟಿಕೇಟ್ ಬಯಸಿದ್ದಾರೆ ಎನ್ನುವ ಕುತೂಹಲವೂ ಹೆಚ್ಚಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
