
CHITRADURGA NEWS | 01 JANUARY 2025
ಚಿತ್ರದುರ್ಗ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಯೋಜನೆಯಾದ ಸಿಲ್ಕ್ ಸಮಗ್ರ-2 ಯೋಜನೆಯಡಿ ರೇಷ್ಮೆ ಕೈಮಗ್ಗ ನೇಕಾರರನ್ನು ಉತ್ತೇಜಿಸಲು ಶೇಕಡ 75% ರಷ್ಟು ರಿಯಾಯಿತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ವೈದ್ಯಕೀಯ ಕಾಲೇಜು ಸಿಬ್ಬಂದಿ ನೇಮಕಾತಿಗೆ ನಡೆದ ಸಂದರ್ಶನದ ವಿವರ

ಉತ್ತಮ ಗುಣಮಟ್ಟವುಳ್ಳ ಕುಣಿ ರೇಷ್ಮೆ ಕೈಮಗ್ಗ ಕಾಂಪೋನೆಂಟ್ನಡಿ 40 ಗುರಿ ಹಾಗೂ ಉತ್ತಮ ಗುಣಮಟ್ಟವುಳ್ಳ ಗುಣಿ ಕೈಮಗ್ಗಕ್ಕೆ ಬೇಕಾದ ರೇಕಾರ್ಡ್ ಪರ್ಮ್ವೈಂಡಿಂಗ್ ಮತ್ತು ಇತರೆ ಸಾಮಾಗ್ರಿಗಳನ್ನು ಅಳವಡಿಸಲು ಕಾಂಪೋನೆಂಟ್ನಡಿ 50 ಗುರಿಯನ್ನು ಪ್ರಸಕ್ತ ಸಾಲಿಗೆ ನಿಗಧಿಪಡಿಸಲಾಗಿದೆ.
ಆಸಕ್ತ ರೇಷ್ಮೆ ಕೈಮಗ್ಗ ನೇಕಾರರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಸೂಕ್ತ ದಾಖಲಾತಿಗಳನ್ನು ಜ.12 ರೊಳಗೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸಬೇಕು, ಹೆಚ್ಚಿನ ಮಾಹಿತಿಗಾಗಿ ಬಿ.ಡಿ.ರಸ್ತೆ, ಭಾಗ್ಯ ಕಾಂಪ್ಲೆಕ್ಸ್ನ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರ ಕಛೇರಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08194-221426 ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 31 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
