CHITRADURGA NEWS | 02 JANUARY 2026
ಚಿತ್ರದುರ್ಗ: ಸಮಗ್ರ ಶಿಕ್ಷಣ ಕರ್ನಾಟಕ, ಶಿಕ್ಷಣ ಫೌಂಡೇಶನ್ ಸಹಭಾಗಿತ್ವದಲ್ಲಿ ಕರ್ನಾಟಕ ಮಾದರಿ ಶಾಲಾ ಮಾರ್ಗದರ್ಶಿ ಕಾರ್ಯಕ್ರಮದಡಿ ಜಿಲ್ಲೆಯ ಶಿಕ್ಷಕರಿಗೆ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ಕುರಿತು ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಇದನ್ನೂ ಓದಿ: ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ | ಶಾಸಕ ಡಾ.ಚಂದ್ರಪ್ಪ
ತರಬೇತಿ ಕಾರ್ಯಾಗಾರದಲ್ಲಿ ಡಯಟ್ ಉಪ ಪ್ರಾಚಾರ್ಯ ಎಸ್.ನಾಗಭೂಷಣ್ ಮಾತನಾಡಿ, ಮಕ್ಕಳ ಸ್ನೇಹಿ ವಾತಾವರಣ ಕಲಿಕಾ ಪ್ರಗತಿಗೆ ಸಹಕಾರಿಯಾಗುತ್ತದೆ.
ಮಕ್ಕಳ ಪರಿಣಾಮಕಾರಿ ಕಲಿಕೆಗೆ ಶಾಲೆಯ ಭೌತಿಕ ಸಂಪನ್ಮೂಲ ಮತ್ತು ತರಗತಿ ಕೋಣೆಯ ಕಲಿಕಾ ವಾತಾವರಣ ಸಹಕಾರಿಯಾಗುವಂತಿರಬೇಕು ಇದರಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ.
ಜಿಲ್ಲೆಯಲ್ಲಿ kMSPP ವತಿಯಿಂದ 100 ಶಾಲೆಗಳಿಗೆ ಕನ್ನಡ, ಇಂಗ್ಲೀಷ್ ಮತ್ತು ಗಣಿತ ವಿಷಯಗಳಿಗೆ 1 ರಿಂದ 7ನೇ ತರಗತಿವರೆಗೆ ಅಭ್ಯಾಸ ಪುಸ್ತಕಗಳನ್ನು ನೀಡಲಾಗಿದೆ.
ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ಬೆಳೆಸುವಲ್ಲಿ ಅಭ್ಯಾಸ ಪುಸ್ತಕಗಳು ಪೂರಕವಾಗಿದ್ದು ವಿದ್ಯಾರ್ಥಿಗಳು ಬಳಸಲು ಶಿಕ್ಷಕರು ಮಾರ್ಗದರ್ಶನ ಮಾಡುವ ಮೂಲಕ ತರಗತಿಯಲ್ಲಿ FLN ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದರು.
ಇದನ್ನೂ ಓದಿ: 6 ತಿಂಗಳವರೆಗೆ ಮಗುವಿಗೆ ತಾಯಿಯ ಹಾಲು ಕುಡಿಸಿ | DHEO ಕೃಷ್ಣನಾಯಕ್
ನೋಡಲ್ ಅಧಿಕಾರಿ ರಾಮಚಂದ್ರಪ್ಪ, ಉಪನ್ಯಾಸಕ ಎಸ್.ಬಸವರಾಜು, ಪ್ರಾಜೆಕ್ಟ್ ಮ್ಯಾನೇಜರ್ ನಾರಾಯಣ ಕಿರ್ಲೋಸ್ಕರ್, ಸಂಪನ್ಮೂಲ ವ್ಯಕ್ತಿಗಳಾದ ಸುಜಾತ, ವರಲಕ್ಷ್ಮಿ ಮತ್ತು ಶಿಕ್ಷಕರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
