CHITRADURGA NEWS | 09 JANUARY 2026
ಚಿತ್ರದುರ್ಗ: 2026-27ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ವಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಆನ್ಲೈನ್ನಲ್ಲಿ ಸೇವಾಸಿಂಧು ತಂತ್ರಾಂಶದ ಮೂಲಕ ಸಲ್ಲಿಸಬಹುದಾಗಿರುತ್ತದೆ. ಫೆಬ್ರವರಿ 10 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಕೃಷಿ ಹೊಂಡ ತೋಡಿಸಲು ರೈತರಿಂದ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು. ಸೇವಾಸಿಂಧು ವೆಬ್ಸೈಟ್ https://sevasindhuservices.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
