
CHITRADURGA NEWS | 09 JANUARY 2026
ಚಿತ್ರದುರ್ಗ: ಬಾಲ್ಯವಿವಾಹ ತಡೆಗಟ್ಟುವುದು ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರ ಜವಾಬ್ದಾರಿಯಾಗಿದ್ದು ಜವಾನರಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ಸಹ ಈ ಕಾರ್ಯವನ್ನು ಮಾಡುವ ಮೂಲಕ ಚಿತ್ರದುರ್ಗ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿಸಲು ಶ್ರಮಿಸಬೇಕೆಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆಕಾಶ್ ಎಸ್. ತಿಳಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ಜನವರಿ 8 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್

ನಗರದ ಜಿ.ಪಂ. ಸಭಾಂಗಣದಲ್ಲಿ ಆಶ್ರಿತ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪೋಲೀಸ್ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಬಾಲ್ಯವಿವಾಹ ಪದ್ಧತಿ ನಿಷೇಧ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಾಲ್ಯವಿವಾಹ ಪದ್ಧತಿಯ ನಿರ್ಮೂಲನೆಗೆ ಕಂಕಣತೊಟ್ಟಿವೆ ಈ ದಿಸೆಯಲ್ಲಿ ಸರ್ಕಾರದ ಆಶಯದಂತೆ ಕೆಲಸ ಮಾಡುವುದು ಪ್ರತಿಯೊಬ್ಬ ಸರ್ಕಾರಿ ನೌಕರರ ಜವಾಬ್ದಾರಿ ಬಾಲ್ಯವಿವಾಹವನ್ನು ತಡೆಗಟ್ಟುವುದು ಬರೀ ಸಂಬಂಧಿಸಿದ ಇಲಾಖೆಯ ಜವಾಬ್ದಾರಿ ಎಂದುಕೊಂಡು ಈ ಗಂಭೀರವಾದ ಸಮಸ್ಯೆಯ ಬಗ್ಗೆ ಅಲಕ್ಷ್ಯ ಮಾಡುವುವವರ ವಿರುದ್ಧ ಕ್ರಮ ಜರುಗಿಸಬೇಕಾಗುತ್ತದೆ ಎಂಬುದನ್ನು ಅರಿತು ತಮ್ಮ ಗಮನಕ್ಕೆ ಬರುವ ಮತ್ತು ಮಾಹಿತಿ ಖಚಿತ ಮಾಹಿತಿ ಆದರಿಸಿ ಬಾಲ್ಯವಿವಾಹವನ್ನು ತಡೆಯಬೇಕೆಂದರು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಬಾಲ್ಯವಿವಾಹವನ್ನು ಗಂಭೀರವಾಗಿ ಪರಿಗಣಿಸಬೇಕು ಈಗಾಗಲೆ ಬಾಲ್ಯವಿವಾಹ ಆಗಿರುವವರ ಮಾಹಿತಿ ಪಡೆಯಬೇಕು ಹಾಗೇಯೇ ಸಮುದಾಯ ಆರೋಗ್ಯ ಕಾರ್ಯಕರ್ತರೊಂದಿಗೆ ಸಮಾಲೋಚಿಸಿ ಬಾಲಗರ್ಭಿಣಿಯರ ಮಾಹಿತಿ ಪಡೆದು ಸಂಬಂಧಿಸಿದವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಿದರು.
ಜಿ.ಪಂ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ ಮಾತನಾಡಿ, ಪಿ.ಡಿ.ಒ ಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಿದರೆ ಬಾಲ್ಯವಿವಾಹ ತಡೆಗಟ್ಟಲು ಸಾಧ್ಯ ಇಲ್ಲದಿದ್ದರೆ ನೇರವಾಗಿ ನೀವೇ ಹೊಣೆಗಾರರಾಗುವಿರಿ ಎಂದು ಎಚ್ಚರಿಸಿದರು.
ಇದನ್ನೂ ಓದಿ: JJM ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ | ಜಿ.ಪಂ ಸಿಇಒ ಡಾ.ಆಕಾಶ್
ಆಶ್ರಿತ ಸಂಸ್ಥೆ ಜಿಲ್ಲಾ ಸಂಯೋಜಕ ಡಿ.ಒ.ಮುರಾರ್ಜಿ ಬಾಲ್ಯವಿವಾಹ ನಿಷೇಧ ಕುರಿತು ಉಪನ್ಯಾಸ ನೀಡಿದರು.
ಡಯಟ್ ಪ್ರಾಂಶುಪಾಲ ನಾಗಭೂಷಣ್, ಆಶ್ರಿತ ಸಂಸ್ಥೆ ತಾಲ್ಲೂಕು ಕಾರ್ಯಕರ್ತರಾದ ಹರ್ಷವರ್ಧನ, ಭಟ್ರಹಳ್ಳಿ ಧನಂಜಯ, ದೇವೀರಮ್ಮ, ಜಿಲ್ಲಾ ಕಾರ್ಯಕ್ರಮ ಸಹಾಯಕ ಚಂದ್ರಪ್ಪ, ಶುಷ್ಮಾ, ಮೇಘ ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
