ಚಿತ್ರದುರ್ಗ: ನಗರದ ಮೆದೇಹಳ್ಳಿ ರಸ್ತೆಯಲ್ಲಿನ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ 26ನೇ ವರ್ಷದ ದೀಪೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆದಿದೆ. ಜನವರಿ 13 ಮತ್ತು14 ರಂದು ಅಯ್ಯಪ್ಪನ ದೀಪೋತ್ಸವ ನಡೆಯಲಿದೆ ಎಂದು ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಶರಣ್ ಕುಮಾರ್ ತಿಳಿಸಿದ್ದಾರೆ.
ಜ. 13ರ ಮಂಗಳವಾರ ಸಂಜೆ 6 ಗಂಟೆಗೆ ಶ್ರೀ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಸ್ವಾಮಿಯ ಆಭರಣಗಳ ಮೆರವಣಿಗೆ ಹಾಗೂ ವಜ್ರಾಭರಣ ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ: ಮಠ ಯಾರ ಪರವೂ ಅಲ್ಲ, ವಿರುದ್ಧವೂ ಅಲ್ಲ | ಶಾಂತವೀರ ಶ್ರೀ
ಜ. 14ರ ಸಂಜೆ 5 ಗಂಟೆಗೆ 26ನೇ ವರ್ಷದ ದೀಪೋತ್ಸವ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭವನ್ನು ಲೋಕಸಭಾ ಸದಸ್ಯರಾದ ಗೋವಿಂದ ಎಂ.ಕಾರಜೋಳ ಉದ್ಘಾಟಿಸಲಿದ್ದಾರೆ.
ದೀಪೋತ್ಸವಕ್ಕೆ ಶಾಸಕ ಕೆ.ಸಿ.ವಿರೇಂದ್ರ(ಪಪ್ಪಿ) ಚಾಲನೆ ನೀಡಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ಎಸ್.ಆರ್. ಎಸ್. ವಿದ್ಯಾಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಡಿ.ಸಿ.ಸಿ. ಬ್ಯಾಂಕ್ ನಿರ್ದೆಶಕರಾದ ಟಿ.ಮಹಂತೇಶ್, ಹೆಚ್.ಎಂ. ದ್ಯಾಮಣ್ಣ, ಅಡಿಕೆ ವರ್ತಕ ಉದಯ್ ಶೆಟ್ಟಿ, ಉದ್ಯಮಿ ಡಾ.ಸಿದ್ದಾರ್ಥ್, ಐಶ್ವರ್ಯ ಗ್ರೂಪ್ ಆಫ್ ಹೋಟೆಲ್ಸ್ ಮಾಲಿಕ ಅರುಣ್‍ಕುಮಾರ್, ಮೆದೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿರಂಜನಮೂರ್ತಿ, ಟೀಚರ್ಸ್ ಕಾಲೋನಿಯ ಸುಭಾಷ್‍ಬಾಬು, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಟಿ. ಬದರೀನಾಥ್, ಕಂಠೇಶ್ವರ ಏಜೆನ್ಸಿ ಸುರೇಶ್ ಬಾಬು ಭಾಗವಹಿಸುವರು.
ಇದನ್ನೂ ಓದಿ: ಎರಡನೇ ಶಬರಿಮಲೆಯಾದ ಚಿತ್ರದುರ್ಗ ಅಯ್ಯಪ್ಪಸ್ವಾಮಿ ದೇವಸ್ಥಾನ | ಇರುಮುಡಿ ಹೊತ್ತು ಬರುತ್ತಿದ್ದಾರೆ ಭಕ್ತರು
ಜ 14ರ ಸಂಜೆ 5-30 ರಿಂದ ಹಿನ್ನಲೆ ಗಾಯಕರಾದ ಯಶವಂತ್, ಮಂಗಳೂರು, ನಿತಿನ್ ರಾಜಾರಾಮ್ ಶಾಸ್ತ್ರಿ, ಕೃಪಾ ಎಸ್ ಇವರಿಂದ ಸುರಸಾರವ ಭಕ್ತಿ ಕಾರ್ಯಕ್ರಮ ನಡೆಯಲಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
