
CHITRADURGA NEWS | 20 JANUARY 2026
ಚಿತ್ರದುರ್ಗ: ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಲ್ಲಿ, ಮರಳು, ಕಾಂಕ್ರಿಟ್ ಮತ್ತಿತರೆ ಸಾಮಗ್ರಿಗಳನ್ನು ಸಾಗಿಸುವ ಲಾರಿಗಳನ್ನು ತಡೆದು, ವಿವಿಧ ಕಾರಣಗಳನ್ನು ಒಡ್ಡಿ ಪ್ರಾದೇಶಿಕ ಸಾರಿಗೆ ಇಲಾಖೆ ಇನ್‍ಸ್ಪೆಕ್ಟರ್ ಗಳು ದಂಡ ವಿಧಿಸುವುದು ಸೇರಿದಂತೆ ಅಡೆ ತಡೆ ಮಾಡುತ್ತಿದ್ದಾರೆ ಎಂದು ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಅಸಮಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: ಜಲಜೀವನ ಮಿಷನ್ | ಚಿತ್ರದುರ್ಗ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಕಳಪೆ ಕಾಮಗಾರಿ

ಈ ರೀತಿ ಮಾಡುವುದರಿಂದ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಗೆ ಕುಂಠಿತವಾಗುತ್ತದೆ ಎಂದು ಆರೋಪಿಸಿದರು.
ಇದಕ್ಕೆ ದನಿಗೂಡಿಸಿದ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಸಿಸಿ ರಸ್ತೆ ನಿರ್ಮಾಣಕ್ಕೆ ಕಾಂಕ್ರೀಟ್ ತೆಗೆದುಕೊಂಡು ಹೋಗುವ ಲಾರಿ ಅಡ್ಡಗಟ್ಟಿ ಕೀ ಕಿತ್ತುಕೊಳ್ಳುವುದು ಯಾವ ಕಾನೂನು, ಹೀಗೆ ಮಾಡಿದರೆ ಲಾರಿಯಲ್ಲಿರುವ ಕಾಂಕ್ರೀಟ್ ಹಾಳಾಗುವುದಿಲ್ಲವೇ, ಲಾರಿಯ ಬಾಡಿ ಏನಾಗಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಕ್ರಿಯಿಸಿದ ಆರ್‌ಟಿಓ ಅದು ಖಾಲಿ ಗಾಡಿ ಎಂದರು, ಹಾಗಾದರೆ, ಓವರ್ ಲೋಡ್ ಎಂದು ಯಾಕೆ ಫೈನ್ ಹಾಕುತ್ತೀರಿ ಎಂದು ಪ್ರಶ್ನೆ ಮಾಡಿದರು.
ಇದನ್ನೂ ಓದಿ: ಕೋವಿಡ್ ಸಂಕಟದಲ್ಲೇ ನಡೆಯಿತೇ ಹಗರಣ | ಮಾನವೀಯತೆ ಸತ್ತೋದ ವರದಿ ಬಹಿರಂಗ
ಈ ಬಗ್ಗೆ ಪರಿಶೀಲನೆ ನಡೆಸಿ ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರ್‌ಟಿಓ ಕಾಳೆಸಿಂಘೆ ಭರವಸೆ ನೀಡಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
