CHITRADURGA NEWS | 23 JANUARY 2026
ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಸಂಕಿರ್ಣದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು.
ಇದನ್ನೂ ಓದಿ: ಜ.24 ರಂದು ವಿದ್ಯತ್ ವ್ಯತ್ಯಯ
ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿಬ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ ಎಂದು ಮತದಾರರ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಇದೇ ಜ.25 ರಂದು 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು “ನನ್ನ ಭಾರತ ನನ್ನ ಮತ”, ಭಾರತೀಯ ಪ್ರಜಾಪ್ರಭುತ್ವದ ಹೃದಯದಲ್ಲಿ ಭಾರತೀಯ ನಾಗರೀಕ” ಎಂಬ ವಿಶೇಷ ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 23 | ಮೆಕ್ಕೆಜೋಳ ರೇಟ್ ಎಷ್ಟಿದೆ?
ಈ ಸಂದರ್ಭದಲ್ಲಿ ಜಿಲ್ಲಾ ನಗರಾಬಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಚುನಾವಣೆ ಶಿರಸ್ತೆದಾರ್ ಮಲ್ಲಿಕಾರ್ಜುನ ನಾಯಕ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಉಪವಿಭಾಗಾಧಿಕಾರಿಗಳ ಕಚೇರಿ, ಭೂದಾಖಲೆಗಳ ಇಲಾಖೆ, ಸಿಬ್ಬಂದಿ ವರ್ಗದವರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
