By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಎಸ್‌ವೈ ಅಭಿಮಾನೋತ್ಸ
    ಅಭಿಮಾನೋತ್ಸವಕ್ಕೆ ಬರಲಿದೆ ಬಿಎಸ್‌ವೈ ಅಂಬಾಸೀಡರ್‌
    26 minutes ago
    ಡಿಪ್ಲೊಮಾ ಪ್ರವೇಶಕ್ಕೆ ವಿಶೇಷಚೇತನರಿಂದ ಅರ್ಜಿ ಆಹ್ವಾನ
    2 hours ago
    ಅರ್ಜಿ ಅಹ್ವಾನ
    BVA ಪದವಿ ಪ್ರವೇಶ | ಅರ್ಜಿ ಅಹ್ವಾನ 
    4 hours ago
    ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜನಜಾಗೃತಿ
    ಹೊಸದುರ್ಗ ತಾಲೂಕಿನ ಬಲ್ಲಾಳ ಸಮುದ್ರದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜನಜಾಗೃತಿ
    11 hours ago
    SSLC, PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
    ಬೆಳಗಟ್ಟ | SSLC, PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    4 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    4 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    1 hour ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 day ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    2 days ago
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 29 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣ ಬೇಡ, ಅರೋಗ್ಯದಲ್ಲಿ ಎಚ್ಚರ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 28 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 27 | ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ, ಹಠಾತ್ ಆರ್ಥಿಕ ಲಾಭ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    4 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    4 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • Life Style
    Life StyleShow More
    Parkinson
    ಪಾರ್ಕಿನ್ಸನ್ ಸಮಸ್ಯೆ ಇರುವವರು ಏನು ತಿನ್ನಬೇಕು ಮತ್ತು ಏನು ತಿನ್ನಬಾರದು ಎಂಬುದನ್ನು ತಿಳಿಯಿರಿ
    12 hours ago
    ಕಲ್ಲಂಗಡಿ ಫೇಶಿಯಲ್
    ಬೇಸಿಗೆಯಲ್ಲಿ ತ್ವಚೆಯ ತಾಜಾತನವನ್ನು ಕಾಪಾಡಲು ಕಲ್ಲಂಗಡಿ ಫೇಶಿಯಲ್ ಮಾಡಿ
    13 hours ago
    Smoking
    ಧೂಮಪಾನದಿಂದ ಶ್ವಾಸಕೋಶಕ್ಕೆ ಮಾತ್ರವಲ್ಲ ಈ ಭಾಗಗಳಿಗೂ ಹಾನಿಯುಂಟಾಗುತ್ತದೆಯಂತೆ
    1 day ago
    Eating nitrate-rich vegetables may reduce heart attacks
    ನೈಟ್ರೇಟ್ ಭರಿತ ತರಕಾರಿಗಳನ್ನು ತಿನ್ನುವುದರಿಂದ ಹೃದಯಾಘಾತ ಕಡಿಮೆಯಾಗುತ್ತದೆಯಂತೆ
    2 days ago
    white spots on the skin
    ಚರ್ಮದ ಮೇಲಿನ ಬಿಳಿ ಕಲೆಗಳನ್ನು ತೆಗೆದುಹಾಕಲು ಈ ಮನೆಮದ್ದುಗಳನ್ನು ಹಚ್ಚಿ
    2 days ago
Reading: ನಾಯಕನಹಟ್ಟಿ ಜಾತ್ರೆಗೆ ಡೇಟ್ ಫಿಕ್ಸ್ | ಸಚಿವ ಸುಧಾಕರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಾಯಕನಹಟ್ಟಿ ಜಾತ್ರೆಗೆ ಡೇಟ್ ಫಿಕ್ಸ್ | ಸಚಿವ ಸುಧಾಕರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

News Desk Chitradurga News
Last updated: 26 January 2026 19:34
News Desk Chitradurga News
3 months ago
Share
ನಾಯಕನಹಟ್ಟಿ ಜಾತ್ರೆಗೆ ಡೇಟ್ ಫಿಕ್ಸ್ | ಸಚಿವ ಸುಧಾಕರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ
ನಾಯಕನಹಟ್ಟಿ ಜಾತ್ರೆಗೆ ಡೇಟ್ ಫಿಕ್ಸ್ | ಸಚಿವ ಸುಧಾಕರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ
SHARE

CHITRADURGA NEWS | 27 JANUARY 2026

ಚಿತ್ರದುರ್ಗ: ಮುಂಬರುವ ಫೆಬ್ರವರಿ 27 ರಿಂದ ಮಾರ್ಚ್ 9 ರವರೆಗೆ ಐತಿಹಾಸಿಕ ಪ್ರಸಿದ್ಧ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಜರುಗಲಿದೆ. ಮಾರ್ಚ್ 06 ರಂದು ದೊಡ್ಡ ರಥೋತ್ಸವ ನಡೆಯಲಿದ್ದು, ಅತ್ಯಂತ ವಿಜೃಂಭಣೆ ಮತ್ತು ಭಕ್ತಿಪೂರ್ವಕ ಹಾಗೂ ಶಿಸ್ತುಬದ್ಧವಾಗಿ ರಥೋತ್ಸವ ಜರುಗಿಸಲು ಅಗತ್ಯ ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ರಾಜ್ಯ ಯೋಜನೆ, ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: ಭಾರತದ ಇತಿಹಾಸದಲ್ಲಿ ಜನವರಿ 26 ಒಂದು ಸುವರ್ಣ ದಿನ | ಡಾ. ಬಿ.ವೈ. ಯುವರಾಜ್

ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ ಒಳಮಠದ ಆವರಣದಲ್ಲಿ ಜರುಗಿದ ನಾಯಕನಹಟ್ಟಿ ಜಾತ್ರಾ ಪೂರ್ವ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನೆರೆ ಹೊರೆಯ ರಾಜ್ಯಗಳೂ ಸೇರಿದಂತೆ ವಿವಿಧ ಮೂಲೆಗಳಿಂದ ಲಕ್ಷಾಂತರ ಭಕ್ತರು ಜಾತ್ರಾ ಮಹೋತ್ಸವಕ್ಕೆ ಆಗಮಿಸುವುದರಿಂದ, ಯಾವುದೇ ಸಣ್ಣ ಲೋಪ-ದೋಷಗಳಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಭಕ್ತಾದಿಗಳಿಗೆ ಕುಡಿಯುವ ನೀರು, ಸ್ವಚ್ಛತೆ ಮತ್ತು ತುರ್ತು ವೈದ್ಯಕೀಯ ಸೇವೆಗಳಲ್ಲಿ ಯಾವುದೇ ಕೊರತೆಯಾಗದಂತೆ ಸಮನ್ವಯತೆಯಿಂದ ಕಾರ್ಯನಿರ್ವಹಿಸುವ ಮೂಲಕ ಜಾತ್ರೆಯನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ ಮಾತನಾಡಿ, ಮೊಳಕಾಲ್ಮೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಮುಂಬರುವ ಐತಿಹಾಸಿಕ ಜಾತ್ರೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಮೂಲಸೌಕರ್ಯಗಳ ಒದಗಿಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: ಕಾಂಗ್ರೆಸ್ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ 10 ಲಕ್ಷ ರೂಪಾಯಿಗಳ ಅನುದಾನ ನೀಡುವುದಾಗಿ ಘೋಷಿಸಿದ ಶಾಸಕ ಗೋಪಾಲಕೃಷ್ಣ ಒಂದು ವೇಳೆ ತಾಂತ್ರಿಕ ಕಾರಣಗಳಿಂದ ಸರ್ಕಾರಿ ಅನುದಾನ ವಿಳಂಬವಾದರೆ, ವೈಯಕ್ತಿಕವಾಗಿಯಾದರೂ ಈ ಮೊತ್ತವನ್ನು ಭರಿಸುವುದಾಗಿ ಅವರು ಸ್ಪಷ್ಟಪಡಿಸಿದರು.

ಜಾತ್ರೆ ಹಿನ್ನಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಬ್ಯಾನರ್ ಮತ್ತು ಪೋಸ್ಟರ್ ಗಳನ್ನು ಅಳವಡಿಸಿ ಪಟ್ಟಣದ ಅಂದಗೆಡಿಸುವುದನ್ನು ತಡೆಗಟ್ಟಲು ಪಟ್ಟಣ ಪಂಚಾಯಿತಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಸೂಚಿಸಿದರು.

ಜಾತ್ರೆಯ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಆಗಮಿಸುವುದರಿಂದ, ಮಾರ್ಚ್ ತಿಂಗಳ ಬಿಸಿಲನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೆ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಜಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದರು.

ಇದನ್ನೂ ಓದಿ: ಬಿಜೆಪಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ | ಭಾರತಾಂಬೆಯ ಭಾವಚಿತ್ರಕ್ಕೆ ಕೆ.ಎಸ್.ನವೀನ್ ಪುಷ್ಪ ನಮನ

 ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಮಾತನಾಡಿ, ನಾಯಕನಹಟ್ಟಿ ಪಟ್ಟಣವನ್ನು ಸಂಪರ್ಕಿಸುವ ವಿವಿಧ ರಸ್ತೆಗಳಲ್ಲಿ ತಗ್ಗು ಗುಂಡಿಗಳಿದ್ದು, ಲೋಕೋಪಯೋಗಿ ಇಲಾಖೆಯವರು ಈ ರಸ್ತೆಗಳಲ್ಲಿನ ತಗ್ಗು ಗುಂಡಿಗಳನ್ನು ದುರಸ್ತಿಪಡಿಸುವ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು. ಜಾತ್ರೆಯ ಒಳಗಾಗಿ ಎಲ್ಲ ರಸ್ತೆಗಳು ಅಚ್ಚುಕಟ್ಟಾಗಿರಬೇಕು ಎಂದು ಸೂಚನೆ ನೀಡಿದರು.

ಮೈಸೂರು ದಸರಾ ಮಾದರಿ ದೀಪಾಲಂಕಾರ:

ಜಾತ್ರೆಯ ಸೌಂದರ್ಯ ಮತ್ತು ಭಕ್ತರ ಉತ್ಸಾಹ ಹೆಚ್ಚಿಸಲು ಈ ಬಾರಿ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮೈಸೂರು ದಸರಾ ಮಾದರಿಯಲ್ಲಿ ದೇವಸ್ಥಾನದ ಮುಖ್ಯ ದ್ವಾರದಿಂದ ರಥ ಬೀದಿಯವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಆಕರ್ಷಕ ದೀಪಾಲಂಕಾರ ಮಾಡಲಾಗುವುದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯಲ್ಲಿ ತಿಳಿಸಿದರು.

ದೀಪಾಲಂಕಾರ ಜಾತ್ರೆಗೆ ಮತ್ತಷ್ಟು ಮೆರುಗು ನೀಡಲಿದೆ. ಜನರನ್ನು ಸಹ ಆಕರ್ಷಿಸಲಿದೆ. ದೀಪಾಲಂಕಾರದ ಕುರಿತು ದೇವಸ್ಥಾನ ಮಂಡಳಿ ಜೊತೆ ಬೆಸ್ಕಾಂ ಅಧಿಕಾರಿಗಳು ಚರ್ಚಿಸಿ ಯೋಜನೆ ರೂಪಿಸುವಂತೆ ಈ ವೇಳೆ ಅವರು ಸೂಚಿಸಿದರು.

ಇದನ್ನೂ ಓದಿ: ಶ್ರೀ ಅಹೋಬಲ TVS ನಲ್ಲಿ 77ನೇ ಗಣರಾಜ್ಯೋತ್ಸವಆಚರಣೆ

ಐತಿಹಾಸಿಕ ಜಾತ್ರೆಯ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಾತ್ರಾ ಆವರಣದಲ್ಲಿ ಪ್ರಾಣಿಬಲಿ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರಚಾರ ಕೈಗೊಳ್ಳಬೇಕು ಮತ್ತು ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. 

ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಈ ಬಾರಿ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯ ಶಾಶ್ವತ ಸಿಸಿ ಟಿವಿ ಕ್ಯಾಮೆರಾಗಳ ಜೊತೆಗೆ, 40 ರಿಂದ 50 ತಾತ್ಕಾಲಿಕ ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಿ ಪೊಲೀಸ್ ನಿಯಂತ್ರಣ ಕೊಠಡಿಯಿಂದ ಪ್ರತಿ ಕ್ಷಣದ ಮೇಲೆ ನಿಗಾ ಇರಿಸಬೇಕು ಎಂದು ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ:

ಜಾತ್ರೆಯ ಸಮಯದಲ್ಲಿ ಶಾಂತಿ ಕಾಪಾಡಲು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಅಬಕಾರಿ ಇಲಾಖೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು ಮಾಡಿದರು.

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆ | ಮಾರ್ಚ್ ಅಂತ್ಯದೊಳಗೆ ಗೋನೂರು ವರೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಗುರಿ | ಡಿ.ಸುಧಾಕರ್

ಇದೇ ವೇಳೆ ಲೋಕೋಪಯೋಗಿ ಇಲಾಖೆಯು ನಾಯಕನಹಟ್ಟಿ ಸಂಪರ್ಕಿಸುವ ರಸ್ತೆ ಬದಿಗಳಲ್ಲಿ ಜಂಗಲ್ ಕಟಿಂಗ್ ಮಾಡಬೇಕು. ರಥ ಸಾಗುವ ಹಾದಿಯನ್ನು ಸರಿಪಡಿಸಬೇಕು. ಕೆಎಸ್‍ಆರ್‍ಟಿಸಿ ವತಿಯಿಂದ ವಿವಿಧ ತಾಲ್ಲೂಕುಗಳಿಂದಲೂ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಿದ ಅವರು, ಹಳೆಯ ದಾಸೋಹ ಭವನವನ್ನು ತೆರವುಗೊಳಿಸಲಾಗಿದ್ದು, ಈ ಸ್ಥಳದಲ್ಲಿ, ತಿರುಪತಿ ಮತ್ತು ಮಂತ್ರಾಲಯದ ಮಾದರಿಯಲ್ಲಿ ‘ಸಕ್ರ್ಯುಲರ್ ಕ್ಯೂ ಲೈನ್’ ವ್ಯವಸ್ಥೆಯನ್ನು ಜಾರಿಗೆ ತರುವ ಮೂಲಕ ಭಕ್ತರ ದಟ್ಟಣೆಯನ್ನು ಸುಗಮವಾಗಿ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ದೇವಸ್ಥಾನದ ಕಲ್ಯಾಣ ಮಂಟಪ, ಹೊರಮಠದಲ್ಲಿರುವ ಕೊಠಡಿಗಳು ಅತ್ಯಂತ ಅಶುಚಿಯಾಗಿವೆ ಎಂದು ಭಕ್ತರು ದೂರಿದರು. ದೇವಸ್ಥಾನದ ಆವರಣದಲ್ಲಿರುವ ಸಿಸಿ ಟಿವಿ ಕ್ಯಾಮೆರಾಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ, ಇದು ಭಕ್ತರ ಭದ್ರತೆಯ ಬಗ್ಗೆ ಆತಂಕ ಮೂಡಿಸಿದೆ. ಅನಗತ್ಯವಾಗಿ ಬ್ಯಾನರ್ ಹಾಕಿ ಜಾತ್ರೆಯ ಸೌಂದರ್ಯಕ್ಕೆ ಧಕ್ಕೆ ತರಬಾರದು ತಡೆಯಬೇಕು ಎಂದು ಸಾರ್ವಜನಿಕರು ಸಭೆಯಲ್ಲಿ ಕೋರಿದರು.

ಮುಕ್ತಿ ಬಾವುಟ ಹರಾಜು : ಹಣ ವಸೂಲಿಗೆ ಕ್ರಮ

ಕಳೆದ 2021 ರಲ್ಲಿ ಮುಕ್ತಿ ಬಾವುಟವನ್ನು 21 ಲಕ್ಷ ರೂ. ಗೆ ಪಡೆದಿದ್ದರು. ಈ ಪೈಕಿ ಕಳೆದ ವರ್ಷ 04 ಲಕ್ಷ ರೂ. ನೀಡಿದ್ದು, ಕಳೆದ 15 ದಿನಗಳ ಹಿಂದೆ 12 ಲಕ್ಷ ರೂ. ನೀಡಿದ್ದಾರೆ. ಬಾಕಿ ಉಳಿದ 5 ಲಕ್ಷ ರೂಪಾಯಿಗಳಿಗೂ ಈಗಾಗಲೆ ಚೆಕ್ ನೀಡಿದ್ದಾರೆ. ಬಾಕಿ ಮೊತ್ತವನ್ನು ಜಾತ್ರೆ ಆರಂಭದ ಒಳಗಾಗಿ ವಸೂಲಿ ಮಾಡುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಎಸ್.ಜೆ.ಎಂ. ವಿದ್ಯಾಪೀಠದಲ್ಲಿ 77ನೇ ಗಣರಾಜ್ಯೋತ್ಸವ | ಆಕರ್ಷಕ ಪಥಸಂಚಲನಕ್ಕೆ ಪುರಸ್ಕಾರ

ಸಭೆಯಲ್ಲಿ ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಚಿತ್ರದುರ್ಗ ಶಾಸಕ ಕೆ.ಎಸ್.ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ಬಾಮಿ, ಜಿ.ಪಂ. ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ನಾಯಕನಹಟ್ಟಿ ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿ ಗಂಗಾಧರ, ಪಟ್ಟಣ ಪಂಚಾಯತಿ ಅಧ್ಯಕ್ಷೆ ಮಂಜುಳ ಶ್ರೀಕಾಂತ್ ಉಪಾಧ್ಯಕ್ಷೆ ಪಿ.ಬೋಸಮ್ಮ ಸ್ಥಾಯಿ ಸಮಿತಿಯ ಅಧ್ಯಕ್ಷ ಸೈಯದ್ ಅನ್ವರ್, ಸದಸ್ಯರಾದ ಜಿ.ಆರ್.ರವಿಕುಮಾರ್, ತಿಪ್ಪೇಶ್, ಈರಕ್ಕ, ಸುನೀತ, ಸರ್ವಮಂಗಳ, ಎಂ.ಟಿ.ಮಂಜುನಾಥ, ವಿನೂತ, ಗ್ರಾಮಸ್ಥರಾದ ಜೆ.ಪಿ ರವಿಶಂಕರ್, ಜಿಎಸ್ ಪ್ರಭುಸ್ವಾಮಿ, ಎಂ.ವೈ.ಟಿ.ಸ್ವಾಮಿ, ಎಸ್.ಉಮಾಪತಿ, ಬಾಲರಾಜ್ ಸೇರಿದಂತೆ ಮತ್ತಿತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMinister D. SudhakarNayakanahatti JatrePreliminary meetingShri Tipperudraswamyಚಿತ್ರದುರ್ಗಚಿತ್ರದುರ್ಗ ನ್ಯೂಸ್ನಾಯಕನಹಟ್ಟಿ ಜಾತ್ರೆಪೂರ್ವಭಾವಿ ಸಭೆಶ್ರೀ ತಿಪ್ಪೇರುದ್ರಸ್ವಾಮಿಸಚಿವ ಡಿ.ಸುಧಾಕರ್
Share This Article
Facebook Email Print
Previous Article ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಭಾರತದ ಇತಿಹಾಸದಲ್ಲಿ ಜನವರಿ 26 ಒಂದು ಸುವರ್ಣ ದಿನ | ಡಾ. ಬಿ.ವೈ. ಯುವರಾಜ್
Next Article ರಾತ್ರಿ ವೇಳೆ ಕೆಮ್ಮು ಜಾಸ್ತಿ ಇದ್ದಾಗ ಮುಲೇಥಿ ಅಥವಾ ಲವಂಗ ಯಾವುದನ್ನು ಸೇವಿಸಬೇಕು? 
Leave a Comment

Leave a Reply Cancel reply

Your email address will not be published. Required fields are marked *

ಬಿಎಸ್‌ವೈ ಅಭಿಮಾನೋತ್ಸ
ಅಭಿಮಾನೋತ್ಸವಕ್ಕೆ ಬರಲಿದೆ ಬಿಎಸ್‌ವೈ ಅಂಬಾಸೀಡರ್‌
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
ಅಡಕೆ ಧಾರಣೆ
ಡಿಪ್ಲೊಮಾ ಪ್ರವೇಶಕ್ಕೆ ವಿಶೇಷಚೇತನರಿಂದ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up