
CHITRADURGA NEWS | 30 JANUARY 2026
ಚಿತ್ರದುರ್ಗ: ಸಹಕಾರ ಕ್ಷೇತ್ರದಲ್ಲಿ ಕಾಲಕಾಲಕ್ಕೆ ಜಾರಿಗೆ ಬರುವ ಕಾಯ್ದೆ-ಕಾನೂನುಗಳ ತಿದ್ದುಪಡಿ ಹಾಗೂ ಬದಲಾವಣೆಗಳ ಬಗ್ಗೆ ಪದಾಧಿಕಾರಿಗಳು ಜಾಗೃತರಾದಾಗ ಮಾತ್ರ ಸಂಘಗಳನ್ನು ಯಶಸ್ವಿಯಾಗಿ ಮುನ್ನಡೆಸಲು ಸಾಧ್ಯ ಎಂದು ಸಹಕಾರರತ್ನ ಪುರಸ್ಕøತರು ಹಾಗೂ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಆರ್. ಮಲ್ಲೇಶಪ್ಪ ಅಭಿಪ್ರಾಯಪಟ್ಟರು.
ಇದನ್ನೂ ಓದಿ: ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿಗೆ ಅರ್ಜಿ ಅಹ್ವಾನ
ನಗರದ ದುರ್ಗದ ಸಿರಿ ಹೋಟೆಲ್‍ನಲ್ಲಿ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ವಿಭಾಗದಲ್ಲಿ ಬರುವ ಆಯ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪದಾಧಿಕಾರಿಗಳು, ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತರಬೇತಿಯಲ್ಲಿ ನೀಡಲಾಗುವ ಕಾನೂನು ಮಾಹಿತಿಯು ಕೇವಲ ಕೇಳಿಸಿಕೊಳ್ಳುವುದಕ್ಕೆ ಸೀಮಿತವಾಗಬಾರದು. ಬದಲಾಗಿ, ಪ್ರತಿಯೊಬ್ಬ ನಿರ್ದೇಶಕರು ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಇಲ್ಲಿ ಪಡೆದ ಜ್ಞಾನವನ್ನು ತಮ್ಮ ಸಂಘಗಳ ಆಡಳಿತ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳಬೇಕು. ಈ ಮೂಲಕ ತರಬೇತಿಯ ಸದುಪಯೋಗ ಪಡೆದುಕೊಂಡು ಸಂಘದ ಪಾರದರ್ಶಕತೆಗೆ ಒತ್ತು ನೀಡಬೇಕು ಎಂದು ಅವರು ಕರೆ ನೀಡಿದರು.
ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜೆ. ಶಿವಪ್ರಕಾಶ್ ಮಾತನಾಡಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಉದ್ದೇಶ ಶಿಕ್ಷಣ, ತರಬೇತಿ ಮತ್ತು ಪ್ರಚಾರದ ಉದ್ದೇಶವಿದ್ದು, ತಾವುಗಳು ತಮ್ಮ ಸಹಕಾರ ಸಂಘಗಳಿಂದ ಲಾಭದಲ್ಲಿ ನೀಡುವ ಶೇ.02 ಸಹಕಾರ ಶಿಕ್ಷಣ ನಿಧಿಯನ್ನು ಉಪಯೋಗಿಸಿಕೊಂಡು ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಯೂನಿಯನ್‍ಗಳು ಇಂತಹ ತರಬೇತಿ ಕಾರ್ಯಕ್ರಮವನ್ನು ನಿರಂತರವಾಗಿ ಆಯೋಜಿಸಿ ಉತ್ತಮವಾದ ತರಬೇತಿಯನ್ನು ನೀಡಲಾಗುತ್ತಿದೆ.
ಇದನ್ನೂ ಓದಿ: JJM ಕಾಮಗಾರಿ ಕಳಪೆ | ಕೇಂದ್ರದ ಮಧ್ಯ ಪ್ರವೇಶಕ್ಕೆ ಗೋವಿಂದ ಕಾರಜೋಳ ಒತ್ತಾಯ
ಸಹಕಾರ ಸಂಘಗಳಿಂದ ಬಂದಿರುವ ಪ್ರತಿನಿಧಿಗಳು ಇಂತಹ ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು, ಜ್ಞಾನ ಪಡೆದುಕೊಂಡಲ್ಲಿ ತಮ್ಮ ಸಂಘಗಳ ಪಾಲನೆ, ಅಭಿವೃದ್ದಿಪಡಿಲು ಸಾಧ್ಯವಾಗಲಿದೆ ಎಂದು ಹೇಳಿದರು.
ಸಹಕಾರ ರತ್ನ ಪುರಸ್ಕøತರು ಹಾಗೂ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಜಿ.ಈ. ಅಜ್ಜಪ್ಪ ಮಾತನಾಡಿ, ಸಹಕಾರ ಕಾಯ್ದೆ, ಕಾನೂನುಗಳಲ್ಲಿ ಇತ್ತೀಚೆಗೆ ಆಗುವ ಬದಲಾವಣೆಗಳು, ತಿದ್ದುಪಡಿಗಳ ಮಾಹಿತಿಯನ್ನು ನುರಿತ ಉಪನ್ಯಾಸಕರಿಂದ ಪಡೆದು ತಮ್ಮ ಸಹಕಾರ ಸಂಘಗಳಲ್ಲಿ ಅಳವಡಿಸಿಕೊಳ್ಳುವುದರ ಮುಖಾಂತರ ಈ ತರಬೇತಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಹಕಾರ ಸಂಘಗಳ ಉಪನಿಬಂಧಕ ಆರ್.ಎಸ್.ದಿಲೀಪ್‍ಕುಮಾರ್ ಮಾತನಾಡಿ, ಜ್ಞಾನ ಎಂಬುದು ಯಾರ ಸ್ವತ್ತು ಅಲ್ಲ, ನಿಂತ ನೀರು ಅಲ್ಲ, ಇದಕ್ಕೆ ಕೊನೆ ಎಂಬುದಿಲ್ಲ. ಎಲ್ಲರೂ ಇದನ್ನು ಅರಿತುಕೊಂಡು ಎಲ್ಲಾ ಕ್ಷೇತ್ರಗಳಲ್ಲೂ ಜ್ಞಾನ ಪಡೆದುಕೊಳ್ಳಬೇಕಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಆದರ್ಶ ವಿದ್ಯಾಲಯ | 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಸಹಕಾರ ಸಂಘಗಳಲ್ಲಿ ಇತ್ತೀಚೆಗೆ ತಿದ್ದುಪಡಿಯಾದ ಕಾಯ್ದೆ ಕಾನೂನಿನ ಮುಖ್ಯಾಂಶಗಳ ಕುರಿತು ಬೆಂಗಳೂರಿನ ಸಹಕಾರ ಸಂಘಗಳ ಅಪರ ನಿಬಂಧಕ ಹೆಚ್.ಎಸ್.ನಾಗರಾಜಯ್ಯ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಜಿ.ವಿ.ಗಂಗಾಧರಪ್ಪ, ಎ.ಚನ್ನಬಸಪ್ಪ, ಮಂಜಮ್ಮ, ಕಾರ್ಯಕ್ರಮದ ಸಮನ್ವಯಾಧಿಕಾರಿ ಎಸ್.ವಿ.ಹಿರೇಮಠ್, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯಶ್ರೀ ಪಿ.ಹುನಗುಂದ, ಶಿಕ್ಷಕ ನಾಗರಾಜ್ ಪಾಟೀಲ್, ಯೂನಿಯನ್ ಸಿಬ್ಬಂದಿ ಟಿ.ಎನ್.ಶ್ರೀನಿವಾಸ್ ಸೇರಿದಂತೆ ಬೆಂಗಳೂರು ವಿಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪದಾಧಿಕಾರಿಗಳು, ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

