By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.28ರಂದು ಉಚಿತ ಗ್ಯಾಸ್ಟೊ ಶಿಬಿರ
    4 hours ago
    ನಾಯಕನಹಟ್ಟಿ ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ
    ನಾಯಕನಹಟ್ಟಿ ಹಟ್ಟಿ ತಿಪ್ಪೇರುದ್ರಸ್ವಾಮಿ ಹುಂಡಿಯಲ್ಲಿ 80.84 ಲಕ್ಷ ಸಂಗ್ರಹ 
    7 hours ago
    ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
    ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ | ಶಾಸಕ ಟಿ.ರಘುಮೂರ್ತಿ
    7 hours ago
    ವಸತಿ ಶಾಲೆ ವಿದ್ಯಾರ್ಥಿಗಳು
    ಎಸ್‍ಎಸ್‍ಎಲ್‍ಸಿ RESULT | 29 ವಸತಿ ಶಾಲೆಗಳಿಗೆ ಶೇ.100 ಫಲಿತಾಂಶ
    20 hours ago
    Yogish Sahyadri
    ತುಮಕೂರಿನಲ್ಲಿ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ-ಸಾಂಸ್ಕೃತಿಕ ಶಿಬಿರ | ಚಿತ್ರದುರ್ಗದಿಂದ ಭಾಗವಹಿಸಲು ಅವಕಾಶ 
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    21 hours ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    9 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    2 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Orange juice
    ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
    7 hours ago
    Thigh itching problem
    ಬೇಸಿಗೆಯಲ್ಲಿ ತೊಡೆಯ ತುರಿಕೆ ಸಮಸ್ಯೆ ನಿಮ್ಮ ಕಾಡುತ್ತಿದೆಯೇ? ಹಾಗಾದ್ರೆ ಈ ಸಲಹೆ ಅನುಸರಿಸಿ
    8 hours ago
    PCOS for women
    ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
    1 day ago
    herbal tea
    ಈ ಗಿಡಮೂಲಿಕೆ ಚಹಾಗಳು ನಿಮ್ಮ ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತವೆ
    1 day ago
    Fatty liver problem, fish
    ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?
    2 days ago
Reading: ಕನ್ನಡ ಮಾಧ್ಯಮ ಅಭ್ಯರ್ಥಿಗಳ ಮೀಸಲು ಶೇ.10ಕ್ಕೆ ಏರಿಸಲು ಶಿಫಾರಸ್ಸು | ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕನ್ನಡ ಮಾಧ್ಯಮ ಅಭ್ಯರ್ಥಿಗಳ ಮೀಸಲು ಶೇ.10ಕ್ಕೆ ಏರಿಸಲು ಶಿಫಾರಸ್ಸು | ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ

News Desk Chitradurga News
Last updated: 4 February 2026 18:35
News Desk Chitradurga News
3 months ago
Share
ಕನ್ನಡ ಅನುಷ್ಠಾನದ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ
ಕನ್ನಡ ಅನುಷ್ಠಾನದ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ
SHARE

CHITRADURGA NEWS | 04 FEBRUARY 2026

ಚಿತ್ರದುರ್ಗ: ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಶೇ.5 ರಷ್ಟು ಇರುವ ಮೀಸಲಾತಿಯನ್ನು ಶೇ.10ಕ್ಕೆ ಏರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.

ಇದನ್ನೂ ಓದಿ: ಫೆಬ್ರವರಿ, ಮಾರ್ಚ್ ವಿದ್ಯುತ್ ವ್ಯತ್ಯಯ | ಯಾವ ದಿನ ಕರೆಂಟ್ ಇರಲ್ಲ | ಇಲ್ಲಿದೆ ಪೂರ್ಣ ವಿವರ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕನ್ನಡ ಅನುಷ್ಠಾನದ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಸರ್ಕಾರಿ ಹಾಗೂ ಖಾಸಗಿ ವಲಯಗಳ ಉದ್ಯೋಗದಲ್ಲಿ ಕನ್ನಡಿಗರ ಪ್ರಾತಿನಿಧ್ಯ ಕಡಿಮೆಯಾಗಿದೆ. ಈ ಕುರಿತು ಜಿಲ್ಲಾ ಕನ್ನಡ ಅನುಷ್ಠಾನ ಸಮಿತಿ ಸದಸ್ಯರೊಂದಿಗೆ ಚರ್ಚಿಸಿದ್ದೇನೆ. ಎಸ್.ಎಸ್.ಎಲ್.ಸಿ ವರಗೆ ಕನ್ನಡ ಭಾಷೆಯಲ್ಲಿ ಓದಿವವರಿಗೆ ರಾಜ್ಯ ಸರ್ಕಾರಿ ನೇಮಕಾತಿಗಳಲ್ಲಿ ಈಗಿರುವ ಶೇ.5 ರಷ್ಟು ಮೀಸಲಾತಿಯನ್ನು ಶೇ.10ಕ್ಕೆ ಏರಿಸಿದರೆ, ಕನ್ನಡಿಗರಿಗೆ ಉದ್ಯೋಗವಕಾಶಗಳು ಹೆಚ್ಚಾಗುತ್ತವೆ. 

ಇದರೊಂದಿಗೆ ಹೊರಗುತ್ತಿಗೆ ನೇಮಕಾತಿಗಳಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಆದ್ಯತೆ ನೀಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ರಾಜ್ಯದಲ್ಲಿರುವ ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಎಂಬುದು ಬಹುದಿನಗಳ ಕೂಗಾಗಿದೆ. ಪ್ರಾಧಿಕಾರ ಸರೋಜಿನಿ ಮಹಿಷಿ ವರದಿಗಳು ಖಾಸಗಿ ಕಂಪನಿಗಳಲ್ಲಿ ಅನುಷ್ಠಾನವಾಗಿವೇ ಎಂದು ಪರಿಶೀಲನೆ ನಡೆಸಲಿದೆ ಎಂದು ಡಾ.ಪುರುಷೋತ್ತಮ ಬಿಳಿಮಲೆ ತಿಳಿಸಿದರು.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆಗೆ ನಿಯಮಗಳ ರಚನೆ:  

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಅಧಿನಿಯಮಕ್ಕೆ ನಿಯಮಗಳ ರಚನೆ ಕುರಿತು ಫೆ.11 ರಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಹಾಗೂ ಸರ್ಕಾರ ಪ್ರಧಾನ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಮಹತ್ವ ಸಭೆ ನಡೆಯಲಿದೆ. ಸಭೆಯಲ್ಲಿ ನಿಯಮಗಳು ರಚನೆಯಾದರೆ ಕನ್ನಡವನ್ನು ಸರಿಯಾಗಿ ಅನುಷ್ಠಾನಗೊಳಿಸದ ಅಧಿಕಾರಿಗಳ ವಿರುದ್ಧ ದಂಡ, ವರ್ಗಾವಣೆ ಸೇರಿದಂತೆ ಇತರೆ ಶಿಸ್ತು ಕ್ರಮಗಳನ್ನು ಕೈಗೊಳ್ಳಲು ಅವಕಾಶ ಸಿಗಲಿದೆ. 

ಇದನ್ನೂ ಓದಿ: ಮೆಡಿಕಲ್ ಕಾಲೇಜು ನೇಮಕಾತಿ | ಮಧ್ಯವರ್ತಿಗಳಿಗೆ ಬಲಿಯಾಗಬೇಡಿ | ಡಾ.ಯುವರಾಜ್

ಕನ್ನಡ ಅನುಷ್ಠಾನದ ವಿಷಯದಲ್ಲಿ ಉಡಾಫೆ ಪ್ರದರ್ಶಿಸುವ ಅಥವಾ ವರದಿ ನೀಡಲು ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಮುಂದಿನ ಎರಡು-ಮೂರು ತಿಂಗಳಲ್ಲಿ ನಿರ್ಧಾಯಕ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾ ಮಟ್ಟದ ಕೆಡಿಪಿ ಸಭೆಯ ಆರಂಭದಲ್ಲಿಯೇ ಕನ್ನಡ ಭಾಷೆ ಅನುಷ್ಠಾನದ ಕುರಿತು ಚರ್ಚೆಯಾಗಬೇಕು ಎಂದು ಪ್ರಾಧಿಕಾರದಿಂದ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ ಎಂದು ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.  

ಊರುಗಳ ಹೆಸರು ತಿದ್ದುಪಡಿಗೆ ಅಭಿಯಾನ:

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕನ್ನಡದ ಬಳಕೆ ಅಧ್ವಾನವಾಗಿದೆ. ಹೆದ್ದಾರಿಗಳಲ್ಲಿ ತ್ರಿಭಾಷಾ ಸೂತ್ರದ ಅಡಿ ಕನ್ನಡವನ್ನು ಕಡೆಗಣಿಸಲಾಗುತ್ತಿದೆ. ರಾಜ್ಯದ ಸುಮಾರು 1.10 ಲಕ್ಷ ಊರುಗಳ ಹೆಸರುಗಳನ್ನು ಇಂಗ್ಲಿಷ್ ನಲ್ಲಿ ಬರೆಯುವಾಗ ಆಗುವ ಉಚ್ಚಾರಣಾ ದೋಷಗಳನ್ನು ಸರಿಪಡಿಸಲು ಬೃಹತ್ ಅಭಿಯಾನ ಆರಂಭಿಸಲಾಗಿದೆ. 

ಇದನ್ನೂ ಓದಿ: ವಾಲ್ಮೀಕಿ ನಾಯಕ ನೌಕರರ ಸಂಘಕ್ಕೆ ಅಧ್ಯಕ್ಷರ, ಪದಾಧಿಕಾರಿಗಳ ಆಯ್ಕೆ

ನಾಮಫಲಕಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಸುಮಾರು 70 ಸಾವಿರ ಊರುಗಳ ಹೆಸರನ್ನು ಅಕ್ಷರ ಹಾಗೂ ಆಡಿಯೋ ಫೈಲ್‍ಗಳನ್ನು ಸಂಗ್ರಹಿಸಿ ಇಡಲಾಗಿದೆ. ಇದು ಶ್ಲಾಘನೀಯ ವಿಷಯವಾಗಿದೆ ಎಂದು ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.

ಕನ್ನಡ ಭಾಷೆಯಲ್ಲಿ ನೇಮಕಾತಿ ಪರೀಕ್ಷೆ ನಡೆಸಲು ಪತ್ರ:

ಬ್ಯಾಂಕಿಗ್ ಹಾಗೂ ರೈಲ್ವೇ ನೇಮಕಾತಿ ಪರೀಕ್ಷೆಗಳನ್ನು ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ನಡೆಸುತ್ತಿರುವುದರಿಂದ ಕನ್ನಡಿಗರಿಗೆ ಉದ್ಯೋಗಾವಕಾಶಗಳು ತಪ್ಪುತ್ತಿವೆ. ಪರೀಕ್ಷೆಗಳನ್ನು ಕನ್ನಡದಲ್ಲೂ ನಡೆಸುವಂತೆ ಒತ್ತಾಯಿಸಿ ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆಯಲು ಪ್ರಾಧಿಕಾರ ತೀರ್ಮಾನಿಸಿದೆ. 

ಅಲ್ಲದೆ, ಬ್ಯಾಂಕ್‍ಗಳಲ್ಲಿ ಕನ್ನಡ ಬಾರದ ಅಧಿಕಾರಿಗಳ ನೇಮಕದಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತಿದೆ. ಬ್ಯಾಂಕ್‍ನ ಎಲ್ಲ ಅರ್ಜಿಗಳು ಮತ್ತು ಚಲನ್‍ಗಳು ಕನ್ನಡ ಲಭ್ಯವಾಗಬೇಕು ಹಾಗೂ ಬ್ಯಾಂಕುಗಳಲ್ಲಿ ಕನಿಷ್ಠ ಒರ್ವ ಕನ್ನಡ ಬಲ್ಲ ಅಧಿಕಾರಿಯನ್ನು ನೇಮಿಸಲು ಪ್ರಾಧಿಕಾರದಿಂದ ಸೂಚನೆ ನೀಡಲಾಗಿದೆ ಎಂದು ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.

ಮದರಸಾಗಳಲ್ಲಿ ಕನ್ನಡ ಕಲಿಕೆ, ಲಿಂಗತ್ವ ಅಲ್ಪಸಂಖ್ಯಾತರ ಪದಕೋಶ ರಚನೆ:

ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಎಲ್ಲಾ ವರ್ಗದ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಎರಡು ಪ್ರಮುಖ ಮತ್ತು ಐತಿಹಾಸಿಕ ಯೋಜನೆಗಳನ್ನು ಘೋಷಿಸಿದೆ. ಮದರಸಾಗಳಲ್ಲಿ ಕನ್ನಡ ಕಲಿಕೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯಕ್ಕಾಗಿ ಪ್ರತ್ಯೇಕ ಕನ್ನಡ ಪದಕೋಶ ಸಿದ್ಧಪಡಿಸುವುದು ಈ ಯೋಜನೆಗಳ ಮುಖ್ಯ ಉದ್ದೇಶವಾಗಿದೆ.

ಇದನ್ನೂ ಓದಿ: ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಸೂಚನೆ | ಡಿಸಿ ವೆಂಕಟೇಶ್

ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಮುಖ್ಯವಾಹಿನಿಗೆ ಬರಲು ಅನುಕೂಲವಾಗುವಂತೆ ಮದರಸಾಗಳಲ್ಲಿ ಕನ್ನಡ ಕಲಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಾಯೋಗಿಕ ಹಂತವಾಗಿ ವಕ್ಫ್ ಮಂಡಳಿಯ ಅಡಿಯಲ್ಲಿ ಬರುವ ಆಯ್ದ 180 ಮದರಸಾಗಳಲ್ಲಿ ಈಗಾಗಲೇ ಮೂರು ತಿಂಗಳ ಮೂಲ ಕನ್ನಡ ಕಲಿಕಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಗಿದೆ. ಈ ಯೋಜನೆಗೆ ಸಿಗುತ್ತಿರುವ ಅಭೂತಪೂರ್ವ ಪ್ರತಿಕ್ರಿಯೆಯನ್ನು ಗಮನಿಸಿ, ಮುಂದಿನ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸುಮಾರು 1,200 ಮದರಸಾಗಳಿಗೆ ಈ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ.

ಲಿಂಗತ್ವ ಅಲ್ಪಸಂಖ್ಯಾತರ ಬಗ್ಗೆ ಸಮಾಜದಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಮತ್ತು ಅವರ ಸಂವಹನವನ್ನು ಸುಲಭಗೊಳಿಸಲು ವಿಶೇಷ ಪದಕೋಶವೊಂದು ಸಿದ್ಧವಾಗುತ್ತಿದೆ. ಈ ಸಮುದಾಯಕ್ಕೆ ಸಂಬಂಧಿಸಿದಂತೆ ಸುಮಾರು 300 ಪದಗಳ ‘ಸಾಂಸ್ಕøತಿಕ ವಿವರಣಾ ಕೋಶ’ವನ್ನು ಸಿದ್ಧಪಡಿಸಲಾಗುತ್ತಿದೆ. ಈ ಕಾರ್ಯಕ್ಕೆ ಅಕ್ಕೈ ಪದ್ಮಶಾಲಿ, ರೂಬಿ ಹರೀಶ್ ಹಾಗೂ ವಸುಧೇಂದ್ರ ಅವರಂತಹ ತಜ್ಞರೊಂದಿಗೆ ನೆರವು ಪಡೆಯಲಾಗಿದೆ. 

ಪ್ರಾಥಮಿಕ ಹಂತದಿಂದ ಪದವಿ ಹಂತದವರೆಗೆ ಕನ್ನಡ ಪಠ್ಯಪುಸ್ತಕಗಳಲ್ಲಿ ನಿರಂತರತೆ ಇಲ್ಲದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಧಿಕಾರವು, 1 ರಿಂದ 10ನೇ ತರಗತಿಯವರೆಗಿನ ಶಿಕ್ಷಕರನ್ನು ಒಳಗೊಂಡ ಸಮಿತಿಯ ಮೂಲಕ ಪಠ್ಯಕ್ರಮದ ಸುಧಾರಣೆಗೆ ಕ್ರಮ ಕೈಗೊಳ್ಳಲಿದೆ. ಇದರೊಂದಿಗೆ ನಲಿ-ಕಲಿ ಯೋಜನೆಯ ಕುರಿತು ಸರ್ಕಾರಕ್ಕೆ ವಿವರವಾದ ವರದಿ ನೀಡಲಾಗುವುದು. 

ಇದನ್ನೂ ಓದಿ: ಅಡಿಕೆ ಧಾರಣೆ | 3 ಫೆಬ್ರವರಿ | ಯಾವ ಅಡಿಕೆಗೆ ಎಷ್ಟು ರೇಟ್‌ ?

ಪ್ರಾಧಿಕಾರ ಸಾಹಿತ್ಯಕ್ಕಿಂತ ಹೆಚ್ಚಾಗಿ ದೈನಂದಿನ ಸಂವಹನಕ್ಕೆ ಪೂರಕವಾದ ‘ಭಾಷೆಯನ್ನು ಕಲಿಸಲು ಸರಳವಾದ ವಿಶೇಷ ಪಠ್ಯಪುಸ್ತಕವನ್ನು ಸಿದ್ಧಪಡಿಸಿದೆ. ಸಾಹಿತ್ಯಕ್ಕಿಂತ ಹೆಚ್ಚಾಗಿ ‘ಭಾಷಾ ಜ್ಞಾನ’ಕ್ಕೆ ಒತ್ತು ನೀಡುವ ಪದ್ಧತಿಯನ್ನು ಜಾರಿಗೆ ತರುವುದು ಪ್ರಾಧಿಕಾರದ ಗುರಿಯಾಗಿದೆ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.

ಶಿಕ್ಷಕರ ಕೊರತೆ ಬಗ್ಗೆ ವರದಿ ಸಲ್ಲಿಕೆ:

ರಾಜ್ಯಾದ್ಯಂತ ಸುಮಾರು 55 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಮುಂದಿನ ಆರ್ಥಿಕ ವರ್ಷದ ವೇಳೆಗೆ ಸುಮಾರು 20 ರಿಂದ 25 ಸಾವಿರ ಶಿಕ್ಷಕರು ನಿವೃತ್ತರಾಗಲಿದ್ದಾರೆ. ಶಿಕ್ಷಣ ಇಲಾಖೆಗೆ ಸುಮಾರು 75,000 ದಿಂದ 80,000 ಶಿಕ್ಷಕರ ಅಗತ್ಯವಿದೆ. ಪ್ರಸ್ತುತ ಸರ್ಕಾರವು ಸುಮಾರು 35,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ತಾತ್ಕಾಲಿಕವಾಗಿ ಸಮಸ್ಯೆಯನ್ನು ನಿಭಾಯಿಸುತ್ತಿದೆ. 

ಮುಂಬರುವ ಮಾರ್ಚ್ ವೇಳೆಗೆ ಸುಮಾರು 25,000 ಹೊಸ ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿನ ಶಿಕ್ಷಕರ ಕೊರತೆ ಮತ್ತು ವಿದ್ಯಾರ್ಥಿಗಳ ಅನುಪಾತದ ಬಗ್ಗೆ ವರದಿ ನೀಡುವಂತೆ ಸೂಚಿಸಲಾಗಿದ್ದು, ಇದನ್ನು ಆಧರಿಸಿ ಶಿಕ್ಷಣ ಸಚಿವರು ಮತ್ತು ಆಯುಕ್ತರೊಂದಿಗೆ ಅವರೊಂದಿಗೆ ಚರ್ಚಿಸಲಾಗುವುದು. 

ಇದನ್ನೂ ಓದಿ: ಟ್ರಾನ್ಸ್‌ಫಾರ್ಮರ್‌ ರಿಪೇರಿಗೆ ಲಂಚ | ಬೆಸ್ಕಾಂ ಎಸ್‌ಓ ಲೋಕಾಯುಕ್ತ ಬಲೆಗೆ

ವಿದ್ಯಾರ್ಥಿಗಳಲ್ಲಿ ಭಾಷಾ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳ ಅರಿವು ಮೂಡಿಸಲು ಸರ್ಕಾರಿ ಶಾಲೆಗಳಿಗೆ ಕನ್ನಡ ದಿನಪತ್ರಿಕೆಗಳನ್ನು ಪೂರೈಸುವ ಬಗ್ಗೆಯೂ ಶಿಕ್ಷಣ ಸಚಿವರೊಂದಿಗೆ ಚರ್ಚಿಸುವುದಾಗಿ ಡಾ.ಪುರುಷೋತ್ತಮ ಬಿಳಿಮಲೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಟಿ.ಎಸ್.ಫಣಿಕುಮಾರ್, ನಾಮನಿರ್ದೇಶಿತ ಸದಸ್ಯ ಡಾ.ಎ.ಬಿ.ರಾಮಚಂದ್ರಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಚಿಕ್ಕಪ್ಪನಹಳ್ಳಿ ಷಣ್ಮುಖ, ಸಂಗೇನಹಳ್ಳಿ ಅಶೋಕ್‍ಕುಮಾರ್, ಡಾ.ಚಿತ್ತಯ್ಯ, ಡಾ.ವೇಂದಾತ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDr. PurushottamaKannadaKannada Mediaಕನ್ನಡಕನ್ನಡ ಮಾಧ್ಯಮಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಪುರುಷೋತ್ತಮ
Share This Article
Facebook Email Print
Previous Article Power Cut chitradurga News (3) ಫೆಬ್ರವರಿ, ಮಾರ್ಚ್ ವಿದ್ಯುತ್ ವ್ಯತ್ಯಯ | ಯಾವ ದಿನ ಕರೆಂಟ್ ಇರಲ್ಲ | ಇಲ್ಲಿದೆ ಪೂರ್ಣ ವಿವರ
Next Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಫೆಬ್ರವರಿ 04 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
ಮಾರುಕಟ್ಟೆ ಧಾರಣೆ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆಯಲ್ಲಿ ಏ.28ರಂದು ಉಚಿತ ಗ್ಯಾಸ್ಟೊ ಶಿಬಿರ
ಮುಖ್ಯ ಸುದ್ದಿ
ನಾಯಕನಹಟ್ಟಿ ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ
ನಾಯಕನಹಟ್ಟಿ ಹಟ್ಟಿ ತಿಪ್ಪೇರುದ್ರಸ್ವಾಮಿ ಹುಂಡಿಯಲ್ಲಿ 80.84 ಲಕ್ಷ ಸಂಗ್ರಹ 
ಮುಖ್ಯ ಸುದ್ದಿ
Orange juice
ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up