CHITRADURGA NEWS | 08 FEBRUARY 2026
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಬಚ್ಚಬೋರನಹಟ್ಟಿ ಗ್ರಾಮದ ವಿದ್ಯಾರ್ಥಿನಿ ಪಿ.ಓ.ಶುಭ ಅವರು ಎಂ.ಎ.ಸಮಾಜಶಾಸ್ತ್ರದಲ್ಲಿ ಪ್ರಥಮ ರ್ಯಾಂಕ್ ಹಾಗೂ ಚಿನ್ನದ ಪದಕ ಪಡೆದಿದ್ದಾರೆ.
ಇದನ್ನೂ ಓದಿ: ನಿವೃತ್ತ ಶಿಕ್ಷಕ ತಿಪ್ಪೇಶಾಚಾರ್ಯ ನಿಧನ | ಬಸವೇಶ್ವರ ಆಸ್ಪತ್ರೆಗೆ ನೇತ್ರದಾನ
ದಾವಣಗೆರೆ ವಿಶ್ವವಿದ್ಯಾಲಯ ಶಿವಗಂಗೋತ್ರಿಯ ಸ್ನಾತಕೋತ್ತರ ಸಮಾಜಶಾಸ್ತ್ರ ಅಧ್ಯಯನ ವಿಭಾಗದಲ್ಲಿ ವ್ಯಾಸಂಗ ಮಾಡಿದ್ದ ಅವರು, ವಿಭಾಗಕ್ಕೆ ಪ್ರಥಮ ಸ್ಥಾನ ಪಡೆದು, ವಿಶ್ವವಿದ್ಯಾಲಯದ ಗೌರವಕ್ಕೆ ಪಾತ್ರರಾಗಿದ್ದಾರೆ.
ಈಚೆಗೆ ನಡೆದ ದಾವಣಗೆರೆ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರಿಂದ ಚಿನ್ನದ ಪದಕ, ರ್ಯಾಂಕ್ ಪ್ರಮಾಣ ಪತ್ರ ಹಾಗೂ ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
