
CHITRADURGA NEWS | 14 FEBRUARY 2026
ಚಿತ್ರದುರ್ಗ: ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯ ಸಹಾಯ ಧನ ಸೌಲಭ್ಯ ಪಡಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 06 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇದನ್ನೂ ಓದಿ: ನೀರಿಗಾಗಿ ಸಾವಿರಾರು ರೈತರ ಪಾದಯಾತ್ರೆ | ಸರ್ಕಾರದ ವಿರುದ್ಧ ಆಕ್ರೋಶ | ವಿಧಾನಸೌಧ ಮುತ್ತಿಗೆ ಎಚ್ಚರಿಕೆ

ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನ ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕುಗಳು, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ.
ನಗರ ಪ್ರದೇಶದ ವಿಧಾನಸಭಾ ಕ್ಷೇತ್ರಗಳಾದ ಚಿತ್ರದುರ್ಗ ಕ್ಷೇತ್ರದ ಮರಾಠ ಸಮುದಾಯದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಯ ಸೌಲಭ್ಯ ಪಡೆಯ ಬಯಸುವವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.3 ಲಕ್ಷಗಳ ಒಳಗಿರಬೇಕು.
ಅರ್ಜಿದಾರರ ವಯಸ್ಸು 22 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಡಿ ಸೌಲಭ್ಯ ಪಡೆಯಲು ಮರಾಠ ಜನಾಂಗದಲ್ಲಿ ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು.
ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಒಂದು ಸಾವಿರ ದಿನ ಪೂರ್ಣ | ಕರಾಳ ದಿನವೆಂದು ಆಚರಿಸುವುದು ಸೂಕ್ತ | ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯ
ಈ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಜಾಲತಾಣ https:/kmcdc.karnataka.gov.in/kn ಅನ್ನು ಸಂಪರ್ಕಿಸುವುದು ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದವರ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
