
CHITRADURGA NEWS | 15 FEBRUARY 2026
ಚಿತ್ರದುರ್ಗ: ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಮತ್ತು ಪ್ರಾಥಮಿಕ ಶಾಲೆಯ ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ಪ್ರತಿದಿನ ಸಂಜೆ 07 ಗಂಟೆಯಿಂದ ರಾತ್ರಿ 9 ರತನಕ ಮನೆಗಳಲ್ಲಿ ಮೊಬೈಲ್ ಫೋನ್ , ಟಿ.ವಿ.ಗಳನ್ನು ಆಫ್ ಮಾಡಿ, ಮಕ್ಕಳ ಓದಿಗೆ ಪೂರಕ ವಾತಾವರಣ ಕಲ್ಪಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿರುವುದರಿಂದ ವಾಸವಿ ಆಂಗ್ಲ ಮತ್ತು ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳು ಜಾಥಾ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು.
ಇದನ್ನೂ ಓದಿ: ಆಹಾರವಾಹಿನಿ ಯೋಜನೆ | ಅರ್ಜಿ ಆಹ್ವಾನ

ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಸತ್ಯನಾರಾಯಣಶೆಟ್ಟಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡುತ್ತ ಪರೀಕ್ಷೆ ಸಮಯದಲ್ಲಿ ಮಕ್ಕಳು ಮೊಬೈಲ್ ಹಾಗೂ ಟಿ.ವಿ.ಯಿಂದ ದೂರವಿದ್ದು, ಓದಿನ ಕಡೆ ಹೆಚ್ಚು ಗಮನ ಕೊಡಬೇಕು. ಇದಕ್ಕೆ ಮನೆಯಲ್ಲಿ ಪೋಷಕರುಗಳು 2 ಗಂಟೆಗಳ ಕಾಲ ಸಹಕರಿಸುವಂತೆ ಮನವಿ ಮಾಡಿದರು.
ದೊಡ್ಡಪೇಟೆ, ರಂಗಯ್ಯನಬಾಗಿಲು, ಹಳೆ ಮಾಧ್ಯಮಿಕ ಶಾಲೆ ರಸ್ತೆ, ಧರ್ಮಶಾಲಾ ರೋಡ್ನಲ್ಲಿ ಜಾಥಾ ಸಂಚರಿಸಿತು.
ಇದನ್ನೂ ಓದಿ: ಗೌರವಧನ ಹೆಚ್ಚಳಕ್ಕೆ ಸ್ವಾತಂತತ್ರ್ಯ ಹೋರಾಟಗಾರರ ಸಂಘ ಮನವಿ
ವಾಸವಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಅಜಯ್ ಕುಮಾರ್, ಮುಖ್ಯೋಪಾಧ್ಯಾಯರುಗಳಾದ ಅಶೋಕ್ ಕುಮಾರ್, ರಾಧಮಣಿ, ದೈಹಿಕ ಶಿಕ್ಷಕ ಸುರೇಶ್ ಬಾಬು ಜಾಥಾದಲ್ಲಿ ಪಾಲ್ಗೊಂಡಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
