
CHITRADURGA NEWS | 22 February 2026
ಚಿತ್ರದುರ್ಗ: ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನವನ್ನು ಇನ್ನೂ ಒಂದು ದಿನ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಭ್ರೂಣಲಿಂಗ ಪತ್ತೆ ಮಾಡುವವರ ಬಗ್ಗೆ ಮಾಹಿತಿ ನೀಡಿದರೆ ₹1 ಲಕ್ಷ ಬಹುಮಾನ | ಜಿಲ್ಲಾಧಿಕಾರಿ

ಕಳೆದ ಮೂರು ದಿನಗಳಿಂದ ಅದ್ದೂರಿಯಾಗಿ ಪ್ರದರ್ಶನ ಕಂಡ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳ ಸಲಹೆ ಮೇರೆಗೆ ಪ್ರದರ್ಶನವನ್ನು ವಿಸ್ತರಿಸಲಾಗಿದೆ.
ಈ ವರ್ಷದ ಫಲಪುಷ್ಪ ಪ್ರದರ್ಶನದಲ್ಲಿ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹೊರಮಠ ಹಾಗೂ ಒಳಮಠದ ಪ್ರಕೃತಿಗಳು ವಿಶೇಷ ಗಮನ ಸೆಳೆದಿವೆ. ಇದರೊಟ್ಟಿಗೆ ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್.ವೇಣು ಅವರ ಪ್ರತಿಕೃತಿ, ಅವರು ರಚಿಸಿರುವ ಕೃತಿಗಳು, ಪ್ರಶಸ್ತಿಗಳ ವಿವರ ಆಕರ್ಷಕವಾಗಿದೆ.
ಜಿಲ್ಲೆಯ ರೈತರು ಬೆಳೆದ ತರಕಾರಿ, ಹೂವು, ಹಣ್ಣು ಇತ್ಯಾದಿಗಳ ಪ್ರದರ್ಶನ ಜನಾಕರ್ಷಣೆಯಾಗಿದೆ. ಸಂಜೆ ತೋಟಗಾರಿಕೆ ಇಲಾಖೆ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರೋಪ ಸಮಾರಂಭದಲ್ಲಿ ಸಾರ್ವಜನಿಕರು ಇನ್ನೂ ಒಂದು ದಿನ ವಿಸ್ತರಿಸಲು ಮನವಿ ಮಾಡಿದ್ದರು.
ಇದನ್ನೂ ಓದಿ: ಸಾಗುವಳಿದಾರರಿಗೆ ಭೂಮಿಯ ಹಕ್ಕೇ ಸಿಗದಿದ್ದಾಗ ಭದ್ರಾ ನೀರು ಹರಿದು ಏನು ಪ್ರಯೋಜನೆ | ಬಿ.ಕಾಂತರಾಜ್
ಶಾಸಕರಾದ ಟಿ.ರಘುಮೂರ್ತಿ ಹಾಗೂ ಕೆ.ಎಸ್.ನವೀನ್ ಕೂಡಾ ವಿಸ್ತರಣೆಗೆ ಸಲಹೆ ನೀಡಿದರು.
ಈ ಹಿನ್ನೆಲೆಯಲ್ಲಿ ಜಂಟಿ ನಿರ್ದೇಶಕಿ ಡಾ.ಸವಿತಾ ಅವರು, ಜಿಪಂ ಸಿಇಓ ಡಾ.ಎಸ್.ಆಕಾಶ್ ಅವರ ಬಳಿ ಮನವಿ ಮಾಡಿ ಫೆ.23ರವರೆಗೆ ವಿಸ್ತರಣೆ ಮಾಡಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
