
CHITRADURGA NEWS | 23 FEBRUARY 2026
ಚಿತ್ರದುರ್ಗ: ರಾಜ್ಯ ಸರ್ಕಾರವು ಗುತ್ತಿಗೆದಾರರ ಸಾವಿರಾರು ಕೋಟಿ ರೂಪಾಯಿ ಬಾಕಿ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ, ಗುತ್ತಿಗೆದಾರರ ಸಂಘವು ಸರ್ಕಾರದ ವಿರುದ್ಧ ನೇರ ಸಮರ ಸಾರಿದೆ. ಚಿತ್ರದುರ್ಗದ ಗುತ್ತಿಗೆದಾರರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ಅವರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 23 | ಮೆಕ್ಕೆಜೋಳ ರೇಟ್ ಎಷ್ಟಿದೆ?

ಸುದ್ದಿಗೋಷ್ಠಿಯ ಮುಖ್ಯಾಂಶಗಳು:
ಬಾಕಿ ಬಿಲ್ ಮೊತ್ತ: PWD, ನೀರಾವರಿ (MI), ಮತ್ತು BBMP ಸೇರಿದಂತೆ ವಿವಿಧ ಇಲಾಖೆಗಳಿಂದ ಒಟ್ಟು ₹36,000 ದಿಂದ ₹37,000 ಕೋಟಿ ಬಾಕಿ ಬಿಲ್ ಪೆಂಡಿಂಗ್ ಇದೆ.
ಬಜೆಟ್ ದಿನ ಪ್ರತಿಭಟನೆ: ಬಾಕಿ ಹಣ ಬಿಡುಗಡೆಗೆ ಒತ್ತಾಯಿಸಿ ಬಜೆಟ್ ಮಂಡನೆಯ ದಿನದಂದೇ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು.
ಸಿಎಂ ವಿರುದ್ಧ ಅಸಮಾಧಾನ: “ಹಿಂದೆ ವಿರೋಧ ಪಕ್ಷದಲ್ಲಿದ್ದಾಗ ಪ್ಯಾಕೇಜ್ ಪದ್ಧತಿ ಮಾಡಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ, ಈಗ ಮಾತು ತಪ್ಪಿದ್ದಾರೆ. ಹಿರಿಯರಾದ ಅವರು ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ,” ಎಂದು ಮಂಜುನಾಥ್ ಬೇಸರ ವ್ಯಕ್ತಪಡಿಸಿದರು.
ಪರ್ಸೆಂಟೇಜ್ ಆರೋಪ: “ಹಿಂದಿನ ಸರ್ಕಾರಕ್ಕಿಂತ ಈ ಸರ್ಕಾರದಲ್ಲಿ ಪರ್ಸೆಂಟೇಜ್ ವಸೂಲಿ ಹೆಚ್ಚಾಗಿದೆ. ಹಿಂದೆ ಕೆಂಪಣ್ಣ ಅವರು ಶೇ.40 ರಷ್ಟು ಪರ್ಸೆಂಟೇಜ್ ಎಂದು ಹೇಳಿದ್ದರಿಂದ ಸಮಸ್ಯೆ ಆಗಿತ್ತು. ಹಾಗಾಗಿ ನಾವು ಈಗ ಎಷ್ಟು ಪರ್ಸೆಂಟೇಜ್ ಎಂದು ಹೇಳುವುದಿಲ್ಲ. ಕೆಲ ಇಲಾಖೆಗಳಲ್ಲಿ ಹಿಂದಿನ ಸರ್ಕಾರಕ್ಕಿಂತ ಹೆಚ್ಚು ಪರ್ಸೆಂಟೇಜ್ ಕೇಳುತ್ತಿದ್ದಾರೆ ಎಂದು ಆರೋಪಿಸಿದರು. ಸಿಎಂ ಚರ್ಚೆಗೆ ಕರೆದರೆ ಇದಕ್ಕೆ ಪೂರಕ ಮಾಹಿತಿ ನೀಡಲು ಸಿದ್ಧ,” ಎಂದು ಗಂಭೀರ ಆರೋಪ ಮಾಡಿದರು.
ಇದನ್ನೂ ಓದಿ: ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
ಮ್ಯಾಚ್ ಫಿಕ್ಸಿಂಗ್ ದೂರು: ರಾಜ್ಯದ ಗುತ್ತಿಗೆದಾರರನ್ನು ಕಡೆಗಣಿಸಿ, ಹೊರ ರಾಜ್ಯದ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡಲು ‘ಮ್ಯಾಚ್ ಫಿಕ್ಸಿಂಗ್’ ನಡೆಯುತ್ತಿದೆ ಎಂದು ಅವರು ದೂರಿದರು.
“ಖಜಾನೆಯಲ್ಲಿ ಹಣವೇ ಇಲ್ಲವೇನೋ ಎಂಬ ಭಾವನೆ ಮೂಡುತ್ತಿದೆ. ಜುಲೈ ಒಳಗಾಗಿ ಬಿಲ್ ಪಾವತಿಸದಿದ್ದರೆ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು.”
–ಮಂಜುನಾಥ್, ರಾಜ್ಯಾಧ್ಯಕ್ಷರು, ಗುತ್ತಿಗೆದಾರರ ಸಂಘ.
ಶಾಸಕರ ಮೇಲೆ ದಾಳಿ: ಶಾಸಕ ಚಂದ್ರು ಲಮಾಣಿ ಅವರ ಮೇಲೆ ನಡೆದ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಘವು ಸಂತ್ರಸ್ತ ಗುತ್ತಿಗೆದಾರರ ಕುಟುಂಬದ ಪರವಾಗಿ ನಿಲ್ಲುವುದಾಗಿ ಘೋಷಿಸಿದೆ.
ಕೇಂದ್ರದ ಅನುದಾನ: ಜಲ ಜೀವನ್ ಮಿಷನ್ (JJM) ಯೋಜನೆಯಡಿ ಕೇಂದ್ರದಿಂದ ಬರಬೇಕಾದ ₹700 ಕೋಟಿ ಹಣವನ್ನು ತರಿಸುವ ಜವಾಬ್ದಾರಿಯನ್ನು ಯಾರೂ ವಹಿಸಿಕೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
