By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    11 hours ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    11 hours ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    11 hours ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    13 hours ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    6 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    5 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    1 hour ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    5 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    23 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    23 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    2 days ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    2 days ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    3 days ago
Reading: ಸಾಮಾಜಿಕ ಭದ್ರಾ ಯೋಜನೆ ನೊಂದಣಿ ಹೆಚ್ಚಿಸಿ | ಬ್ಯಾಂಕುಗಳಿಗೆ 100 ದಿನಗಳ ಟಾರ್ಗೆಟ್ ಕೊಟ್ಟ ಡಾ.ಆಕಾಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಾಮಾಜಿಕ ಭದ್ರಾ ಯೋಜನೆ ನೊಂದಣಿ ಹೆಚ್ಚಿಸಿ | ಬ್ಯಾಂಕುಗಳಿಗೆ 100 ದಿನಗಳ ಟಾರ್ಗೆಟ್ ಕೊಟ್ಟ ಡಾ.ಆಕಾಶ್

News Desk Chitradurga News
Last updated: 25 February 2026 10:28
News Desk Chitradurga News
2 months ago
Share
ಜಿಲ್ಲಾ ಸಲಹಾ ಸಮಿತಿ ಹಾಗೂ ಪರಿಶೀಲನಾ ಸಮಿತಿ ಸಭೆ
ಜಿಲ್ಲಾ ಸಲಹಾ ಸಮಿತಿ ಹಾಗೂ ಪರಿಶೀಲನಾ ಸಮಿತಿ ಸಭೆ
SHARE

CHITRADURGA NEWS | 25 FEBRUARY 2026

ಚಿತ್ರದುರ್ಗ: ಬ್ಯಾಂಕುಗಳಲ್ಲಿ 100 ದಿನಗಳ ಕಾಲ ವಿಶೇಷ ಅಭಿಯಾನ ಹಮ್ಮಿಕೊಳ್ಳವ ಮೂಲಕ ಸಾಮಾಜಿಕ ಭದ್ರತಾ ಯೋಜನೆಗಳಾದ ಪಿ.ಎಂ.ಜೆ.ಜೆ.ಬಿ.ವೈ (ಪ್ರಧಾನಮಂತ್ರಿ ಜೀವನ್ ಜ್ಯೋತಿ ಭಿಮಾ ಯೋಜನೆ), ಪಿ.ಎಂ.ಎಸ್.ಬಿ.ವೈ (ಪ್ರಧಾನಮಂತ್ರಿ ಸುರಕ್ಷಾ ಭಿಮಾ ಯೋಜನೆ) ಮತ್ತು ಎ.ಪಿ.ವೈ (ಅಟಲ್ ಪೆನ್ಷನ್ ಯೋಜನೆ) ನೊಂದಣಿಗೆ ಶ್ರಮ ವಹಿಸುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಸೂಚಿಸಿದರು.

ಇದನ್ನೂ ಓದಿ: ಊಟದ ನಂತರ ನಿದ್ದೆ ಬರದಿರಲು ಏನು ತಿನ್ನಬೇಕು ಮತ್ತು ಏನು ತಪ್ಪಿಸಬೇಕು ಎಂಬುದನ್ನು ತಿಳಿಯಿರಿ

ನಗರದ ಜಿ.ಪಂ. ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನೇತೃತ್ವದಲ್ಲಿ ಜರುಗಿದ ಜಿಲ್ಲಾ ಸಲಹಾ ಸಮಿತಿ ಹಾಗೂ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ನೊಂದಣಿಯಾದವರ ಪ್ರಮಾಣ ಅತ್ಯಂತ ಕಡಿಮೆಯಿದೆ. ಜಿಲ್ಲೆಯ ಬ್ಯಾಂಕ್‍ಗಳ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆಯ ಕ್ರಮಗಳಿಂದಾಗಿ ಕಡಿಮೆ ಪ್ರಮಾಣದ ನೊಂದಣಿಯಾಗಿದೆ. ಪ್ರಧಾನಮಂತ್ರಿ ಜೀವನ್ ಜ್ಯೋತಿ ಬೀಮಾ ಯೋಜನೆಯಡಿ 18 ರಿಂದ 50 ವಯಸ್ಸಿನವರೆಗಿನ ನಾಗರಿಕರು ರೂ.436/-ಗಳ ಮತ್ತು ಪ್ರಧಾನಮಂತ್ರಿ ಸುರಕ್ಷಾ ಬೀಮಾ ಯೋಜನೆಯಡಿ 18 ರಿಂದ 70 ವಯಸ್ಸಿನವರೆಗಿನ ನಾಗರೀಕರು ರೂ.20/- ಪ್ರೀಮಿಯಂ ಹಣವನ್ನು ವಾರ್ಷಿಕವಾಗಿ ಪಾವತಿಸಿದರೆ, ಯಾವುದೇ ರೀತಿಯ ಮರಣ ಸಂಭವಿಸಿದರೂ ಅವರ ವಾರಸುದಾರಿಗೆ ಪ್ರತಿ ಯೋಜನೆಯಡಿ ರೂ.2 ಲಕ್ಷದವರೆಗೆ ವಿಮೆ ಸೌಲಭ್ಯ ದೊರೆಯಲಿದೆ. ಈ ಬಗ್ಗೆ ಗ್ರಾಹಕರ ಮನವೊಲಿಸಿ ನೊಂದಣಿ ಮಾಡಿಸುವಂತೆ ಜಿ.ಪಂ. ಸಿಇಓ ಡಾ.ಎಸ್.ಆಕಾಶ್ ಹೇಳಿದರು.

ಇದನ್ನೂ ಓದಿ: ನಿಲ್ಲದ ಬಿಕ್ಕಳಿಕೆ ಈ ಕಾಯಿಲೆಯ ಸಂಕೇತವಾಗಿದೆ

ಬ್ಯಾಂಕ್ ಆಫ್ ಬರೋಡಾ ಜಿಲ್ಲೆಯ ಶಾಖೆಗಳಲ್ಲಿ ಸುಮಾರು 1.79 ಲಕ್ಷ ಅರ್ಹ ಖಾತೆದಾರರನ್ನು ಹೊಂದಿದೆ. ಆದರೆ ಸಾಮಾಜಿಕ ಭದ್ರತಾ ಯೋಜನೆಗಳಿಡಿ 1,150 ನೋಂದಣಿಗಳನ್ನು ಮಾತ್ರ ಮಾಡಿದೆ. ಇದೇ ರೀತಿ ಅಪೆಕ್ಸ್ ಬ್ಯಾಂಕ್‍ನಲ್ಲಿ 1.20 ಲಕ್ಷ ಖಾತೆಗಳಿದ್ದರೂ ಕೇವಲ 1,080 ನೋಂದಣಿ ಮಾಡಲಾಗಿದೆ. ಈ ಬ್ಯಾಂಕುಗಳು ಮುಂದಿನ 100 ದಿನಗಳ ಅಭಿಯಾನದಲ್ಲಿ, ಪ್ರತಿ ಶಾಖೆಯಲ್ಲಿ ದಿನ ಒಂದಕ್ಕೆ 10 ಸಾಮಾಜಿಕ ಭದ್ರತಾ ಯೋಜನೆಗಳ ನೊಂದಣಿ ಮಾಡುವ ಮೂಲಕ ಸುಮಾರು 10,000 ನೊಂದಣಿಗಳ ಗುರಿಯನ್ನು ಸಾಧಿಸಬೇಕು ಎಂದು ಜಿ.ಪಂ.ಸಿಇಓ ಡಾ.ಎಸ್.ಆಕಾಶ್ ನಿರ್ದೇಶನ ನೀಡಿದರು.

ಸಾಮಾಜಿಕ ಭದ್ರತಾ ಯೋಜನೆಗಳಿಡಿ 21,865 ನೊಂದಣಿ ಮಾಡಿ ಪ್ರಥಮ ಸ್ಥಾನ ಪಡೆದ ಕರ್ನಾಟಕ ಗ್ರಾಮೀಣ ಬ್ಯಾಂಕ್, 11,392 ನೊಂದಣಿ ಮಾಡಿದ ಕೆನರಾ ಬ್ಯಾಂಕ್ ದ್ವಿತೀಯ ಸ್ಥಾನ ಪಡೆದಿದ್ದಕ್ಕಾಗಿ ಈ ಸಂದರ್ಭದಲ್ಲಿ ಜಿ.ಪಂ. ಸಿಇಓ ಡಾ.ಆಕಾಶ್ ಅಭಿನಂದನೆ ಸಲ್ಲಿಸಿದರು. ಜೂನ್ ಮೊದಲ ವಾರದಲ್ಲಿ ನಡೆಯಲಿರುವ ಮುಂದಿನ ಪ್ರಗತಿ ಪರಿಶೀಲನಾ ಸಭೆಯೊಳಗೆ ಈ ಗುರಿ ತಲುಪದಿದ್ದರೆ, ಸಂಬಂಧಿಸಿದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ನಡವಳಿಯಲ್ಲಿ ದಾಖಲಿಸಿ ಆರ್.ಬಿ.ಐ ಗೆ ವರದಿ ಸಲ್ಲಿಸುವುದಾಗಿ ಎಚ್ಚರಿಸಿದರು.

ಗ್ರಾಮೀಣ ಭಾಗದ ಬ್ಯಾಂಕ್‍ಗಳ ಸ್ಥಳಾಂತರಕ್ಕೆ ತಡೆ:

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಕೆನರಾ ಬ್ಯಾಂಕ್‍ನ ಆರು ಶಾಖೆಗಳನ್ನು ಮೂಲಭೂತ ಸೌಕರ್ಯಗಳ ಕೊರತೆಯ ನೆಪದಲ್ಲಿ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ತಡೆಹಿಡಿಯುವಂತೆ ಜಿ.ಪಂ. ಸಿಇಓ ಡಾ. ಎಸ್. ಆಕಾಶ್ ಸಭೆಯಲ್ಲಿ ಸೂಚನೆ ನೀಡಿದರು.

ಇದನ್ನೂ ಓದಿ: ದಿನ ಭವಿಷ್ಯ | ಫೆಬ್ರವರಿ 25 | ಆರ್ಥಿಕ ವಾತಾವರಣ ಅನುಕೂಲಕರ, ವ್ಯಾಪಾರಗಳಲ್ಲಿ ನಿರೀಕ್ಷಿತ ಲಾಭ

ಶಾಖೆಗಳ ಸ್ಥಳಾಂತರಕ್ಕೆ ಬ್ಯಾಂಕ್ ಅಧಿಕಾರಿಗಳು ಸಲ್ಲಿಸಿದ್ದ ಪ್ರಸ್ತಾವನೆಯನ್ನು ತಿರಸ್ಕರಿಸಿದ ಅವರು, ಗ್ರಾಮೀಣ ಭಾಗದ ಜನರಿಗೆ ತೊಂದರೆಯಾಗದಂತೆ ಅದೇ ಸ್ಥಳಗಳಲ್ಲಿ ಬ್ಯಾಂಕ್ ಮುಂದುವರಿಸಲು ಸೂಚಿಸಿದರು. 

ಗ್ರಾಮ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಅಧಿಕಾರಿಗಳು ಮಾರ್ಚ್ 31 ರೊಳಗೆ ಅಗತ್ಯ ದುರಸ್ತಿ ಹಾಗೂ ನವೀಕರಣ ಕಾರ್ಯಗಳನ್ನು ಪೂರ್ಣಗೊಳಿಸುತ್ತಾರೆ. ಪಂಚಾಯತ್ ವತಿಯಿಂದ ಆಗಬೇಕಿರುವ ಕೆಲಸಗಳಲ್ಲಿ ವಿಳಂಬವಾದರೆ ನೇರವಾಗಿ ಗಮನಕ್ಕೆ ತರುವಂತೆ ಜಿ.ಪಂ.ಸಿಇಓ ಡಾ.ಎಸ್.ಆಕಾಶ್ ತಿಳಿಸಿದರು.

ನಿಷ್ಕ್ರಿಯ ಠೇವಣಿ ವಿಲೇವಾರಿಗೆ ಕಟ್ಟುನಿಟ್ಟಿನ ಸೂಚನೆ:

ಜಿಲ್ಲೆಯ ವಿವಿಧ ಬ್ಯಾಂಕ್‍ಗಳಲ್ಲಿ 10 ವರ್ಷಗಳಿಗೂ ಹೆಚ್ಚು ಕಾಲ ಯಾವುದೇ ವ್ಯವಹಾರವಿಲ್ಲದೆ ಉಳಿದಿರುವ ಹಕ್ಕು ಪಡೆಯದ ಠೇವಣಿಗಳನ್ನು (Unclaimed Deposits) ವಾರಸುದಾರರಿಗೆ ತಲುಪಿಸಲು ವಿಶೇಷ ಅಭಿಯಾನವನ್ನು ಚುರುಕುಗೊಳಿಸುವಂತೆ ಜಿ.ಪಂ. ಸಿಇಓ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ: ಅಡಿಕೆ ಧಾರಣೆ | 24 ಫೆಬ್ರವರಿ | ರಾಶಿ ಬೆಲೆಯಲ್ಲಿ ಮತ್ತೆ ತುಸು ಏರಿಕೆ

ಜಿಲ್ಲೆಯಲ್ಲಿ 3,08,898 ನಿಷ್ಕ್ರಿಯ ಖಾತೆಗಳಲ್ಲಿ ಒಟ್ಟು 67 ಕೋಟಿ ಹಣವಿದೆ. ಈ ಪೈಕಿ ಕಳೆದ ಅಕ್ಟೋಬರ್ 01 ರಿಂದ ಡಿಸೆಂಬರ್ 31 ವರೆಗೆ ನಡೆದ ಅಭಿಯಾನದಲ್ಲಿ 122 ಪ್ರಕರಣಗಳನ್ನು ವಿಲೇವಾರಿ ಮಾಡಿ 5.52 ಕೋಟಿ ರೂ. ಗಳನ್ನು ಸಂಬಂಧಪಟ್ಟವರಿಗೆ ಹಿಂದಿರುಗಿಸಲಾಗಿದೆ. ಇದು ಒಟ್ಟು ಮೊತ್ತದ ಕೇವಲ ಶೇ.10 ರಷ್ಟಿದ್ದು ಅಭಿಯಾನದಲ್ಲಿ ಉತ್ತಮ ಪ್ರಗತಿಯಾಗಿರುವುದಿಲ್ಲ. 

ಬ್ಯಾಂಕ್‍ಗಳಲ್ಲಿ ಸಾರ್ವಜನಿಕರ ಹಣ ವಾರಸುದಾರರಿಲ್ಲದೆ ಉಳಿಯಬಾರದು. ಅದನ್ನು ಸಂಬಂಧಿಸಿದ ವಾರಸುದಾರರಿಗೆ ತಲುಪಿಸುವುದು ಬ್ಯಾಂಕ್‍ಗಳ ಜವಾಬ್ದಾರಿಯಾಗಿದೆ. ಒಂದು ತ್ರೈಮಾಸಿಕಕ್ಕೆ ಮಾತ್ರ ಈ ಅಭಿಯಾನ ಸೀಮಿತವಾದೇ, ವಾರಸುದಾರರನ್ನು ಗುರುತಿಸಿ ಹಣ ಹಿಂದಿರುಗಿಸುವ ಪ್ರಕ್ರಿಯೆಯು ನಿರಂತರವಾಗಿ ನಡೆಯಬೇಕು ಎಂದು ಡಾ. ಆಕಾಶ್ ತಿಳಿಸಿದರು.

ಕನ್ನಡ ಬಳಕೆಗೆ ನಿರ್ದೇಶನ:

ಬ್ಯಾಂಕುಗಳಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು. ಬ್ಯಾಂಕಿನ ಎಲ್ಲಾ ಅರ್ಜಿಗಳು, ಚಲನ್ ಮತ್ತು ಸುತ್ತೋಲೆಗಳು ಇಂಗ್ಲೀಷ್ ಮತ್ತು ಹಿಂದಿಯೊಂದಿಗೆ ಕಡ್ಡಾಯವಾಗಿ ಸ್ಥಳೀಯ ಭಾಷೆಯಲ್ಲಿ ಲಭ್ಯವಿರಬೇಕು. ಗ್ರಾಮೀಣ ಭಾಗದ ಜನರಿಗೆ ಭಾಷೆಯ ಸಮಸ್ಯೆಯಿಂದ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಯಾವುದೇ ರೀತಿಯ ಅಡೆತಡೆ ಅಥವಾ ನಿರಾಶೆಯಾಗಬಾರದು. 

ಇದನ್ನೂ ಓದಿ: ರಾಜ್ಯದಲ್ಲಿ ಹೊಸ ಮ್ಯೂಟೇಶನ್‌ ವ್ಯವಸ್ಥೆ ಜಾರಿ | ಪಹಣಿಗೆ ಆಧಾರ್‌ ಜೋಡಣೆ ಮಾಡಿಕೊಳ್ಳಲು ಡಿಸಿ ಮನವಿ

ಪ್ರತಿ ಶಾಖೆಯಲ್ಲಿ ಕನ್ನಡದಲ್ಲಿ ವ್ಯವಹರಿಸುವ ಸಿಬ್ಬಂದಿಯನ್ನು ಕಡ್ಡಾಯವಾಗಿ ನೇಮಿಸಬೇಕು. ತಮ್ಮ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿ ಈ ನಿಯಮಗಳು ಪಾಲನೆಯಾಗುತ್ತಿರುವ ಕುರಿತು ಜಿಲ್ಲಾ ಮಟ್ಟದ ಬ್ಯಾಂಕ್ ಸಮನ್ವಯಾಧಿಕಾರಿಗಳು ಮತ್ತು ಪ್ರತಿನಿಧಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಜಿ.ಪಂ.ಸಿಇಓ ಡಾ. ಎಸ್. ಆಕಾಶ್ ನಿರ್ದೇಶನ ನೀಡಿದರು.

30 ದಿನಗಳಲ್ಲಿ ಅರ್ಜಿ ವಿಲೇವಾರಿಗೆ ತಾಕೀತು:

ವಿವಿಧ ಇಲಾಖೆ ಹಾಗೂ ನಿಗಮ ಮಂಡಳಿಗಳಿಂದ ಸಾಲ ಸೌಲಭ್ಯಕ್ಕಾಗಿ ಸಲ್ಲಿಕೆಯಾದ ಅರ್ಜಿಗಳನ್ನು 30 ದಿನಗಳ ಒಳಗಾಗಿ ವಿಲೇವಾರಿ ಮಾಡಬೇಕು. ಬ್ಯಾಂಕುಗಳು ವಿಳಂಬ ನೀತಿ ಅನುಸರಿಸಬಾರದು. ಅರ್ಜಿಗೆ ಮಂಜೂರಾತಿ ನೀಡಬೇಕು, ಇಲ್ಲವೇ ತಿರಸ್ಕರಿಸಬೇಕು. ಸಂಬಂಧಪಟ್ಟ ನಿಗಮ ಮಂಡಳಿಗಳ ವ್ಯವಸ್ಥಾಪಕರು ಸಹಾಯಧನ ಅಥವಾ ಸಾಲ ಸೌಲಭ್ಯಕ್ಕಾಗಿ ಬ್ಯಾಂಕುಗಳಿಗೆ ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಹಿಂಬಾಲಿಸಿ ಮಂಜೂರಾತಿಗೆ ಪ್ರಯತ್ನಿಸಬೇಕು ಎಂದು ಜಿ.ಪಂ. ಸಿಇಓ ನಿರ್ದೇಶನ ನೀಡಿದರು.

ಇದನ್ನೂ ಓದಿ: ಮೊಬೈಲ್ ಕ್ಯಾಂಟಿನ್ | ಸಹಾಯಧನಕ್ಕೆ ಅರ್ಜಿ ಆಹ್ವಾನ

ಸಭೆಯಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ರಾಘವೇಂದ್ರ.ಎಂ, ಆರ್.ಬಿ.ಐ. ಪ್ರಾದೇಶಿಕ ವ್ಯವಸ್ಥಾಪಕ ಅರುಣ್ ಕುಮಾರ್, ನಬಾರ್ಡ್ ಜಿಲ್ಲಾ ವ್ಯವಸ್ಥಾಪಕ ವಿನ್ನತ್, ಕೆನರಾ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕಿ ಸುನಿತಾ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಜಯಲಕ್ಷ್ಮೀ, ಕರ್ನಾಟಕ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಜಗನಾಥ್ ಸೇರಿದಂತೆ ಬ್ಯಾಂಕುಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.  

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CampaignChitradurgaChitradurga newsSocial Security Schemeಅಭಿಯಾನಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಾಮಾಜಿಕ ಭದ್ರತಾ ಯೋಜನೆ
Share This Article
Facebook Email Print
Previous Article sleepy after dinner ಊಟದ ನಂತರ ನಿದ್ದೆ ಬರದಿರಲು ಏನು ತಿನ್ನಬೇಕು ಮತ್ತು ಏನು ತಪ್ಪಿಸಬೇಕು ಎಂಬುದನ್ನು ತಿಳಿಯಿರಿ
Next Article ಫಲ-ಪುಷ್ಪ ಪ್ರದರ್ಶನ ತೋಟಗಾರಿಕೆ ಇಲಾಖೆ ಫಲಪುಷ್ಪ ಪ್ರದರ್ಶನ ಮಾರ್ಚ್ 1 ರವರೆಗೆ ವಿಸ್ತರಣೆ
Leave a Comment

Leave a Reply Cancel reply

Your email address will not be published. Required fields are marked *

ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
Dina Bhavishya
ಕೃಷಿ ಹೊಂಡ
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
ಮುಖ್ಯ ಸುದ್ದಿ
ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up