
CHITRADURGA NEWS | 25 FEBRUARY 2026
ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘ ಇವರ ಸಹಯೋಗದಲ್ಲಿ ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಹಮ್ಮಿಕೊಂಡಿರುವ 33 ನೇ ಫಲಪುಷ್ಪ ಪ್ರದರ್ಶನವನ್ನು ಮಾರ್ಚ್ 01 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಹೊಸ ಮ್ಯೂಟೇಶನ್ ವ್ಯವಸ್ಥೆ ಜಾರಿ | ಪಹಣಿಗೆ ಆಧಾರ್ ಜೋಡಣೆ ಮಾಡಿಕೊಳ್ಳಲು ಡಿಸಿ ಮನವಿ

ಫಲಪುಷ್ಪ ಪ್ರದರ್ಶನವನ್ನು ಫೆ. 20 ರಿಂದ 23 ರವರೆಗೆ ಆಯೋಜಿಸಲಾಗಿತ್ತು. ಈ ಪ್ರದರ್ಶನವು ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆಕಾಶ್ ಅವರ ಸೂಚನೆಯನ್ವಯ ಹೆಚ್ಚಿನ ಸಾರ್ವಜನಿಕರ ವೀಕ್ಷಣೆಗೆ ಅನುಕೂಲವಾಗುವಂತೆ ಫಲಪುಷ್ಪ ಪ್ರದರ್ಶನವನ್ನು ಮಾರ್ಚ್ 01 ರವರೆಗೆ ವಿಸ್ತರಿಸಲಾಗಿದೆ.
ಪ್ರದರ್ಶನವು ಪ್ರತಿ ದಿನ ಸಂಜೆ 5.30 ರಿಂದ ರಾತ್ರಿ 10 ಗಂಟೆಯವರೆಗೆ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತದೆ. ಅಲ್ಲದೆ ಆಹಾರ ಮಳಿಗೆಗಳ ವ್ಯಾಪಾರಕ್ಕೂ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತೋಟಗಾರಿಕೆ ಜಂಟಿ ನಿರ್ದೇಶಕಿ ಸವಿತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
