
CHITRADURGA NEWS | 27 FEBRUARY 2026
ಚಿತ್ರದುರ್ಗ: ಒಳ ಮೀಸಲಾತಿಗನುಗುಣವಾಗಿ 56432 ಹುದ್ದೆಗಳನ್ನು ಕೂಡಲೆ ಭರ್ತಿ ಮಾಡಬೇಕು. ಇಲ್ಲವಾದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮ್ಯನವರನ್ನು ರಸ್ತೆಯಲ್ಲಿ ಓಡಾಡಲು ಬಿಡುವುದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಎಚ್ಚರಿಸಿದರು.
ಇದನ್ನೂ ಓದಿ: ನಗರಸಭೆ ಮಾಜಿ ಸದಸ್ಯ ಬಾಂಡ್ ತಿಪ್ಪೇಸ್ವಾಮಿ ನಿಧನ

ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರು, ಶೋಷಿತರು, ಅಸ್ಪøಶ್ಯರನ್ನು ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕವಾಗಿ ಮೇಲೆತ್ತಲು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರವರು ಮೀಸಲಾತಿ ಜಾರಿಗೆ ತಂದರು. ಮೂವತ್ತು ವರ್ಷಗಳಿಂದಲೂ ಒಳ ಮೀಸಲಾತಿ ಜಾರಿಗಾಗಿ ದಲಿತರು ಹೋರಾಟ ನಡೆಸುತ್ತಿದ್ದಾರೆ.
ಜಸ್ಟಿಸ್ ನಾಗಮೋಹನ್ದಾಸ್ ವರದಿಯನ್ನು ಕಾಂಗ್ರೆಸ್ ಒಪ್ಪಲಿಲ್ಲ. ಬಸವರಾಜ್ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಎಸ್ಸಿಗಳಿಗೆ ಶೇ.15 ರಿಂದ 17, ಎಸ್ಟಿಗಳಿಗೆ ಶೇ.3 ರಿಂದ 4 ಪರ್ಸೆಂಟ್ ಮೀಸಲಾತಿಯನ್ನು ಹೆಚ್ಚಿಸಿದರು.
ಸಮಾಜ ಕಲ್ಯಾಣ ಮಂತ್ರಿ ಹೆಚ್.ಸಿ.ಮಹದೇವಪ್ಪ ದಲಿತ ಜನಾಂಗಕ್ಕೆ ಸೇರಿದ್ದರು ಮೀಸಲಾತಿ ಜಾರಿಗೆ ತರುವ ಬದ್ದತೆ ತೋರುತ್ತಿಲ್ಲ ಎಂದು ಕಿಡಿ ಕಾರಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 27 ಫೆಬ್ರವರಿ | ಭೀಮಸಮುದ್ರ, ಚನ್ನಗಿರಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್ಸ್
6:6:5 ಅನುಪಾತದಂತೆ ಲಂಬಾಣಿ, ಭೋವಿ, ಕೊರಚ, ಕೊರಮ ಜನಾಂಗದವರು ಇರಬೇಕಾದ ಜಾಗದಲ್ಲಿ 59 ಜಾತಿಗಳನ್ನು ಸೇರಿಸಿ ಶೇ.7 ರಷ್ಟು ಮೀಸಲಾತಿಯನ್ನು ಕಡಿಮೆಗೊಳಿಸಿ ದಲಿತರಿಗೆ ಮೋಸ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ನಾಯಕ ಅಲ್ಲ.
ವಿಶ್ವಾಸದ್ರೋಹಿ, ಕಪಟ ನಾಟಕದಿಂದ ಸರ್ಕಾರವನ್ನು ದಿವಾಳಿಯಾಗಿಸಿದ್ದಾರೆ. ಕೂಡಲೆ ಸರ್ವಪಕ್ಷ ಹಾಗೂ 101 ಜಾತಿಗಳ ಮುಖಂಡರ ಸಭೆ ಕರೆದು ಚರ್ಚಿಸಬೇಕು. ಇಲ್ಲವಾದಲ್ಲಿ ರಾಜ್ಯದಲ್ಲಿ ಓಡಾಡುವುದು ಕಷ್ಟವಾಗುತ್ತದೆಂದು ಗಡುವು ನೀಡಿದರು.
ರಾಜ್ಯದಲ್ಲಿರುವ ಪೌರ ಕಾರ್ಮಿಕರು ಕೆಲಸ ನಿಲ್ಲಿಸಿದರೆ ವಿಧಾನಸೌಧದಲ್ಲಿ ಕುಳಿತುಕೊಳ್ಳುವುದು ಕಷ್ಟವಾಗುತ್ತದೆ. ಅಲೆಮಾರಿಗಳು ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಪರಿಶಿಷ್ಟಜಾತಿ, ಪರಿಶಿಷ್ಟ ವರ್ಗದವರಲ್ಲಿ ಒಡಕು ಮೂಡಿಸುತ್ತಿದ್ದಾರೆ. ರಾಜ್ಯದಲ್ಲಿರುವುದು ಸಾಮಾಜಿಕ ನ್ಯಾಯದ ಸರ್ಕಾರವಲ್ಲ. ದಲಿತರನ್ನು ಓಟ್ ಬ್ಯಾಂಕ್ ಮಾಡಿಕೊಂಡು ರಾಜಕಾರಣ ಮಾಡುವುದನ್ನು ನಾವುಗಳು ಸಹಿಸಿಕೊಂಡಿರುವುದಿಲ್ಲವೆಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಗೋವಿಂದ ಎಂ.ಕಾರಜೋಳ ತರಾಟೆ ತೆಗೆದುಕೊಂಡರು.
ಇದನ್ನೂ ಓದಿ: ತೋಟಗಾರಿಕೆ ಇಲಾಖೆ ಬಳಿ ಹೊಸ ಡಿಸಿ ಕಚೇರಿಗೆ ಅನುಮತಿ | 6.30 ಎಕರೆಯಲ್ಲಿ ಜಿಲ್ಲಾಡಳಿತ ಭವನ
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಟಿ.ಕುಮಾರಸ್ವಾಮಿ, ಮುಖಂಡ ಬಿ.ಸಿ.ಹನುಮಂತೆಗೌಡ, ಉಪಾಧ್ಯಕ್ಷ ಡಾ.ಸಿದ್ದಾರ್ಥ, ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ಯಾದವ್, ಮೋಹನ್, ಜಿಲ್ಲಾ ವಕ್ತಾರ ನಾಗರಾಜ್ಬೇದ್ರೆ, ನಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಎಸ್ಸಿ ಮೋರ್ಚಾ ಅಧ್ಯಕ್ಷ ಪರಶುರಾಮ್, ಬಿಜೆಪಿ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಎ.ಮುರಳಿ ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
