CHITRADURGA NEWS | 01 MARCH 2026
ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದಾವಣಗೆರೆ ಕಾರ್ಖಾನೆಗಳ ಮತ್ತು ಬಾಯ್ಲರ್‍ಗಳ ಇಲಾಖೆ ಇವರುಗಳ ಸಹಯೋಗದಲ್ಲಿ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿ-ಚಕ್ರವಾಹನಗಳ ವಿತರಣಾ ಕಾರ್ಯಕ್ರಮ ಮಾರ್ಚ್ 02ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಆಯೋಜಿಸಲಾಗಿದೆ.
ಇದನ್ನೂ ಓದಿ: ಬ್ಯಾಂಕುಗಳು ಸ್ವ-ಸಹಾಯ ಗುಂಪುಗಳಿಗೆ ಹೆಚ್ಚಿನ ಸಾಲ ಸೌಲಭ್ಯ ಒದಗಿಸಿ
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಕಾರ್ಮಿಕರ ಸಚಿವ ಸಂತೋಷ್ ಲಾಡ್, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ ಹೆಚ್.ಪಿ.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು, ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಶಿಂದಿಹಟ್ಟಿ, ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ್ ನಾಯಕ್, ಕಾರ್ಖಾನೆಗಳ ಸಹಾಯಕ ನಿರ್ದೇಶಕ ಚಿನ್ಮಯಿ ತೋರಗಲ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ ಎಂ.ಕಾಳಿಸಿಂಗೆ ಭಾಗವಹಿಸುವರು.
ಇದನ್ನೂ ಓದಿ: ದ್ವಿತೀಯ ಪಿಯುಸಿ | ಕನ್ನಡ ಪರೀಕ್ಷೆಯಲ್ಲಿ 291 ವಿದ್ಯಾರ್ಥಿಗಳು ಗೈರು
ಚಳ್ಳಕೆರೆ ಹೆಗ್ಗೆರೆ ಎಂ/ಎಸ್ ಪ್ರಕಾಶ್ ಸ್ಪಾಂಜ್ ಐರನ್ ಅಂಡ್ ಪವರ್ ಪ್ರೈ.ಲಿ, ಚಿತ್ರದುರ್ಗ ಮೋರೇಶ್ವರ ಆಗ್ರೋ ಫೀಡ್ಸ್ ಪ್ರೈ.ಲಿ, ಅರವಿಂದ್ ಲಿಮಿಟೆಡ್, ಹಿರಿಯೂರು ಸ್ನೇಹ ಫಾಮ್ರ್ಸ್ ಪ್ರೈ.ಲಿ ಕೈಗಾರಿಕೆಗಳು ತ್ರಿ-ಚಕ್ರ ವಾಹನಗಳ ಕೊಡುಗೆ ನೀಡಿವೆ ಎಂದು ಕಾರ್ಮಿಕ ಅಧಿಕಾರಿ ಅನಿಲ್ ಬಿ.ಬಗಟಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
