CHITRADURGA NEWS | 03 MARCH 2026
ಚಿತ್ರದುರ್ಗ: ವಿದ್ಯುತ್ ಪೂರೈಕೆ ಸೇರಿದಂತೆ ವಿದ್ಯುತ್ ಸಂಬಂಧಿತ ದೂರುಗಳ ಶೀಘ್ರ ಪರಿಹಾರಕ್ಕಾಗಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸಪ್ಪ್ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು ಬೆಸ್ಕಾಂ ಮನವಿ ಮಾಡಿದೆ.
ಇದನ್ನೂ ಓದಿ: ಮೀಸಲಾತಿ ಕಡಿತದ ಮೂಲಕ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ದ್ರೋಹ | ಕೆ.ಟಿ. ಕುಮಾರಸ್ವಾಮಿ ಆಕ್ರೋಶ
ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ. ಕರೆಗಳ ಒತ್ತಡದಿಂದಾಗಿ ಕೆಲವೊಮ್ಮೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಹೀಗಾಗಿ ಗ್ರಾಹಕರು ಬೆಸ್ಕಾಂನ 11 ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶ ಕಳುಹಿಸುವ ಮೂಲಕ ವಿದ್ಯುತ್ ಸಂಬಂಧಿತ ದೂರುಗಳಿಗೆ ಪರಿಹಾರ ಪಡೆಯಬಹುದಾಗಿದೆ ಎಂದು ಬೆಸ್ಕಾಂ ತಿಳಿಸಿದೆ.
ವಾಟ್ಸಪ್ ಸಹಾಯವಾಣಿ ವಿವರ
ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ : 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ-:8277884013 , ಉತ್ತರ ವೃತ್ತ :8277884014, ಕೋಲಾರ ಜಿಲ್ಲೆ : 8277884015, ಚಿಕ್ಕಬಳ್ಳಾಪುರ ಜಿಲ್ಲೆ : 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದರ್ಗ ಜಿಲ್ಲೆ : 8277884020, ದಾವಣಗೆರೆ ಜಿಲ್ಲೆ : 8277884021 ಗೆ ಗ್ರಾಹಕರು ವಾಟ್ಸಪ್ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್ ಸಂಬಂಧಿತ ದೂರಗಳ ಪೋಟೋ ಹಾಗೂ ವಿಡಿಯೋಗಳನ್ನು ಸಹ ಕಳುಹಿಸಬಹುದಾಗಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 3 ಮಾರ್ಚ್ | ರಾಶಿ, ಕೆಂಪಡಕೆ, ಬೆಟ್ಟೆ, ಚಾಲಿ ರೇಟ್ ?
ಗ್ರಾಹಕರು ತಮ್ಮ ಪ್ರದೇಶದ ವ್ಯಾಪ್ತಿಗೆ ಸಂಬಂಧಿತ ವಾಟ್ಸ್‌ಪ್ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ನೀಡಿದರೆ ಅವುಗಳನ್ನು ತ್ವರಿತವಾಗಿ ಪರಿಹರಿಸಲಾಗುವುದು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
