CHITRAUDRGA NEWS | 20 MARCH 2026
ಚಿತ್ರದುರ್ಗ: ಮಧ್ಯ ಕರ್ನಾಟಕದ ಮಹತ್ವದ ಯೋಜನೆ ಭದ್ರಾ ಮೇಲ್ದಂಡೆ ಕುರಿತು ದೆಹಲಿಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಇದಕ್ಕೆ ಪೂರಕವಾಗಿ ತರಳಬಾಳು ಬೃಹನ್ಮಠದ ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಯುಗಾದಿ ಹಬ್ಬವನ್ನು ಬಿಟ್ಟು ಮಾರ್ಚ್ 17 ರಂದೇ ದೆಹಲಿಗೆ ತೆರಳಿ ರಾಜ್ಯದ ಸಂಸದರು, ಜನನ ಬಿಜೆಪಿ ಹಿರಿಯ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: ವದ್ದೀಕೆರೆ ಶ್ರೀ ಕಾಲಭೈರವೇಶ್ವರ ಬ್ರಹ್ಮರಥೋತ್ಸವ ಮಾ.30ಕ್ಕೆ
2026ರ ಫೆಬ್ರವರಿ 27ರಂದು ಸಿರಿಗೆರೆ ಬೃಹನ್ಮಠದಲ್ಲಿ ಈ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಉನ್ನತ ಮಟ್ಟದ ಸಭೆಯನ್ನು ನಡೆದಿದ್ದು, ಸಭೆಯಲ್ಲಿ ಸಂಸತ್ ಸದಸ್ಯರು, ಶಾಸಕರು, ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರು, ಹಿರಿಯ ಅಧಿಕಾರಿಗಳು ಸೇರಿದಂತೆ ಚಿತ್ರದುರ್ಗ ಜಿಲ್ಲೆಯ ರೈತ ಮುಖಂಡರು ಹಾಗೂ ಪತ್ರಕರ್ತರು ಭಾಗವಹಿಸಿದ್ದರು.
ಈ ಸಭೆಯಲ್ಲಿ ಯೋಜನೆಯ ಪ್ರಗತಿ, ಅಡಚಣೆಗಳು ಹಾಗೂ ಕೇಂದ್ರದ ಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಸಲಾಗಿತ್ತು.
ಕೃಷಿ ಸಿಂಚಾಯಿ ಯೋಜನೆಗೆ ಸೇರ್ಪಡೆ ಯತ್ನ:
ಸಭೆಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿಯಂತೆ, ಭದ್ರಾ ಮೇಲ್ದಂಡೆ ಯೋಜನೆಯನ್ನು ಈಗಿರುವ ರಾಷ್ಟ್ರೀಯ ಯೋಜನೆಯಿಂದ ಕೃಷಿ ಸಿಂಚಾಯಿ ಯೋಜನೆಗೆ ಸೇರಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ಯೋಜನೆಗೆ ಅಗತ್ಯವಿರುವ ಎಲ್ಲಾ ಮಾನದಂಡಗಳು ಪೂರ್ತಿಯಾಗಿರುವುದರಿಂದ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಜಾರಿಗೆ ತರಲು ಸಾಧ್ಯತೆ ಇದೆ ಎಂದು ವಿವರಿಸಲಾಯಿತು.
₹10,000 ಕೋಟಿ ವೆಚ್ಚದ ಮಹತ್ವಾಕಾಂಕ್ಷಿ ಯೋಜನೆ
ಪೂರ್ಣ ಯೋಜನೆ ಜಾರಿಗೆ ಸುಮಾರು ₹10,000 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದ್ದು, ಇದರಲ್ಲಿ ಶೇಕಡಾ 60ರಷ್ಟು (₹6,000 ಕೋಟಿ) ಹಣವನ್ನು ಕೇಂದ್ರ ಸರ್ಕಾರ ಹಾಗೂ ಉಳಿದ ಶೇಕಡಾ 40ರಷ್ಟು (₹4,000 ಕೋಟಿ) ಹಣವನ್ನು ರಾಜ್ಯ ಸರ್ಕಾರ ಭರಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರವು ಅಗತ್ಯ ಮಾಹಿತಿಯನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ.
ಇದನ್ನೂ ಓದಿ: ರೋಸ್ಟರ್ ಬಿಂದು ಸರಿಪಡಿಸಿ ಒಳ ಮೀಸಲಾತಿ ಜಾರಿಗೆ ಒತ್ತಾಯ
ಮಾರ್ಚ್ 20, 2026ರಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯಲ್ಲಿ ನಿಗಧಿ ಆಗಿದ್ದ ತಾಂತ್ರಿಕ ನೀರಾವರಿ ಸಲಹಾ ಸಮಿತಿ ಸಭೆ ನಿಗದಿಯಾಗಿದ್ದು, ಈ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ಕೃಷಿ ಸಿಂಚಾಯಿ ಯೋಜನೆಗೆ ಸೇರ್ಪಡಿಸುವ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ. ಈ ಹಿನ್ನೆಲೆ, ಸಂಬಂಧಿತ ಕೇಂದ್ರ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಚರ್ಚೆ ನಡೆಸಲು ಜಗದ್ಗುರುಗಳವರು ಮಾರ್ಚ್ 17ರಂದುಲೇ ದೆಹಲಿಗೆ ತೆರಳಿರುವುದು ವಿಶೇಷವಾಗಿದೆ.
ಬಯಲುಸೀಮೆ ಭಾಗದಲ್ಲಿ ಉಂಟಾಗಿರುವ ನೀರಿನ ಕೊರತೆ, ನಿರಂತರ ಬರ ಪರಿಸ್ಥಿತಿ ಹಾಗೂ ರೈತರ ಸಂಕಷ್ಟಗಳನ್ನು ಮನವರಿಕೆ ಮಾಡಿಕೊಡುವ ಮೂಲಕ ಯೋಜನೆಗೆ ವೇಗ ನೀಡುವ ನಿಟ್ಟಿನಲ್ಲಿ ಜಗದ್ಗುರುಗಳವರು ಶ್ರಮಿಸುತ್ತಿದ್ದಾರೆ. ಈ ನಡೆ ರೈತರ ಹಿತಾಸಕ್ತಿಯ ಬಗ್ಗೆ ಅವರಿಗಿರುವ ಅಪಾರ ಕಾಳಜಿಯನ್ನು ಪ್ರತಿಬಿಂಬಿಸುತ್ತದೆ.
“ಆಧುನಿಕ ಭಗೀರಥ”ರಿಂದ ಭದ್ರಾ ಯೋಜನೆಗೆ ವೇಗ, ರೈತರಲ್ಲಿ ವಿಶ್ವಾಸ
ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳವರು ಈಗಾಗಲೇ ಅನೇಕ ಏತನೀರಾವರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ “ಆಧುನಿಕ ಭಗೀರಥ” ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದೀಗ ಭದ್ರಾ ಮೇಲ್ದಂಡೆ ಯೋಜನೆಯನ್ನು ತಮ್ಮ ಹಸ್ತಕ್ಕೆ ತೆಗೆದುಕೊಂಡಿರುವುದರಿಂದ, ಯೋಜನೆ ಶೀಘ್ರದಲ್ಲೇ ಜಾರಿಗೆ ಬರುತ್ತದೆ ಎಂಬ ವಿಶ್ವಾಸ ರೈತರಲ್ಲಿ ವ್ಯಕ್ತವಾಗಿದೆ.
ಇದನ್ನೂ ಓದಿ: ಮಾ.22 ವಿದ್ಯುತ್ ವ್ಯತ್ಯಯ
ಇದಲ್ಲದೆ, ರೈತರಿಗೆ ಅನುಕೂಲಕರವಾಗಿಲ್ಲವೆಂದು ಟೀಕೆಗೆ ಗುರಿಯಾದ ಫಸಲ್ ಬಿಮಾ ಯೋಜನೆಯ ಸಮಸ್ಯೆಗಳ ಕುರಿತು ಕೇಂದ್ರ ಕೃಷಿ ಸಚಿವರ ಗಮನ ಸೆಳೆಯುವ ಜೊತೆಗೆ, ಕಾರ್ಮಿಕರ ಹಿತದೃಷ್ಟಿಯಿಂದ VISL ಪುನರುಜ್ಜೀವನಕ್ಕೆ ಸಂಬಂಧಿಸಿದಂತೆ ಉಕ್ಕು ಮತ್ತು ಗಣಿ, ಬೃಹತ್ ಕೈಗಾರಿಕಾ ಹಾಗೂ ಹಣಕಾಸು ಸಚಿವರೊಂದಿಗೆ ಚರ್ಚಿಸಲು ಶ್ರೀಗಳು ಮುಂದಾಗಿದ್ದಾರೆ.
ಫೆಬ್ರವರಿ 27ರಂದು ಸಿರಿಗೆರೆಯಲ್ಲಿ ನಡೆದ ಸಭೆಯಲ್ಲಿ ಸಂಸತ್ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ರೈತ ಮುಖಂಡರ ಸಮ್ಮುಖದಲ್ಲಿ ಜಗದ್ಗುರುಗಳವರು ಸಕ್ರಿಯವಾಗಿ ಪಾಲ್ಗೊಂಡು ಮಾರ್ಗದರ್ಶನ ನೀಡಿರುವುದು ಈ ಯೋಜನೆಗೆ ಮತ್ತಷ್ಟು ಬಲ ತುಂಬಿದೆ.
ನವದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಆಗಮಿಸಿದ ಶ್ರೀ ತರಳಬಾಳು ಜಗದ್ಗುರುಗಳವರನ್ನು ಬೊಮ್ಮಾಯಿಯವರು, ಚಿತ್ರದುರ್ಗದ ಸಂಸದರ ಗೋವಿಂದ ಕಾರಜೋಳ ಅವರು ಸ್ವಾಗತಿಸಿ, ಸತ್ಕರಿಸಿದ್ದಾರೆ.
ಇದನ್ನೂ ಓದಿ: ರೆಡ್ ಕ್ರಾಸ್ ಸಂಸ್ಥೆ | ಚಿತ್ರದುರ್ಗ ಜಿಲ್ಲಾ ಶಾಖೆಗೆ ನ್ಯಾಷನಲ್ ಸೋಷಿಯಲ್ ಇಂಪ್ಯಾಕ್ಟ್ ಪ್ರಶಸ್ತಿ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ರೈಲ್ವೇ ಸಚಿವ ವಿ.ಸೋಮಣ್ಣ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಹಲವರು ಭಾಗವಹಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
