CHITRADURGA NEWS | 20 MARCH 2026
ಚಿತ್ರದುರ್ಗ: ನಗರದ ಎಸ್ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ದಿ ಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಹಾಗೂ ಮಷಿನ್ ಲರ್ನಿಂಗ್ ನೂತನ ವಿಭಾಗಗಳನ್ನು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ ಕಳಸದ ಉದ್ಘಾಟಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ಯುಗಾದಿ ನಂತರದ ಅಡಿಕೆ ಮಾರುಕಟ್ಟೆ ರೇಟ್
ಎಐ ನೂತನ ವಿಭಾಗ ಹಾಗೂ ಕೌಶಲ್ಯ ಅಭಿವೃದ್ಧಿ(ಕೌಶಲ್ಯ ಕಾಯಕ) ಕೇಂದ್ರವನ್ನು ಅಂದಾಜು ಒಂದು ಕೋಟಿ ರೂ ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸುಸಜ್ಜಿತ ಪ್ರಯೋಗಾಲಯ ಒಳಗೊಂಡಂತೆ ನಿರ್ಮಿಸಲಾಗಿದೆ. ಕೌಶಲ್ಯತೆಗೆ ಒತ್ತು ನೀಡುವ ಹಿನ್ನಲೆಯಲ್ಲಿ ನಿರ್ಮಿಸಲಾಗಿರುವ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಲಾಗಿದೆ.
ಎಐ ವಿಭಾಗಕ್ಕೆ ಚಾಲನೆ ನೀಡಿ ಮಾತನಾಡಿದ ಶಿವಯೋಗಿ ಕಳಸದ್, ಕೃತಕ ಬುದ್ಧಿಮತ್ತೆ ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನವಾಗಿ ಎಲ್ಲಾ ಕ್ಷೇತ್ರದಲ್ಲೂ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿರುವುದು ನಿಜ. ಆದರೆ, ಮನುಷ್ಯ ಕೃತಕ ಬುದ್ಧಿಮತ್ತೆಯ ಫಲಿತಾಂಶಗಳ ಮೇಲೆ ಸಂಪೂರ್ಣ ಅವಲಂಬಿತರಾಗಬಾರದು ಎಂದು ಸಲಹೆ ನೀಡಿದರು.
ತನ್ನ ಸ್ವಸಾಮರ್ಥ್ಯ ಹಾಗೂ ಬುದ್ಧಿ ಶಕ್ತಿಗೂ ಕೆಲಸ ಕೊಡಬೇಕು. ಇದರಿಂದ ನಿಖರ ಫಲಿತಾಂಶ ಪಡೆಯಲು ಸಾಧ್ಯ. ಕೃತಕಬುದ್ಧಿಮತ್ತೆ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ನಮ್ಮ ಬುದ್ಧಿಗೆ ಕೆಲಸ ನೀಡಿ ಸಾಗಬೇಕಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಭದ್ರೆಗಾಗಿ ಸಿರಿಗೆರೆ ಶ್ರೀಗಳ ನಡೆ ಸ್ವಾಗತಾರ್ಹ | ಆರ್.ಶೇಷಣ್ಣಕುಮಾರ್
ಎಸ್.ಜೆ.ಎಂ. ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ಎಸ್.ಎನ್.ಚಂದ್ರಶೇಖರ್, ಎಸ್.ಜೆ.ಎಂ.ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ. ಗುಡಸಿ, ಪ್ರಾಚಾರ್ಯ ಡಾ.ಭರತ್ ಪಿ.ಬಿ, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ & ಮಷಿನ್ ಲರ್ನಿಂಗ್ ವಿಭಾಗ ಮುಖ್ಯಸ್ಥ ಡಾ.ಅರವಿಂದ್ ಟಿ.ವಿ, ವಿವಿಧ ಇಲಾಖಾ ಮುಖ್ಯಸ್ಥರು ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

