
CHITRADURGA NEWS | 24 MARCH 2026
ಪ್ರತಿ ವರ್ಷ, ಪ್ರಪಂಚದಾದ್ಯಂತ ಲಕ್ಷಾಂತರ ಮಹಿಳೆಯರು ಸ್ತನ ಕ್ಯಾನ್ಸರ್ ನಿಂದ ಸಾವನಪ್ಪುತ್ತಿದ್ದಾರೆ. ಬಹಳ ಹಿಂದೆ ಈ ಸ್ತನ ಕ್ಯಾನ್ಸರ್ 40 ರಿಂದ 50 ವರ್ಷದೊಳಗಿನ ಮಹಿಳೆಯರಲ್ಲಿ ಕಂಡುಬರುತ್ತಿದ್ದವು. ಆದರೆ ಇತ್ತೀಚಿನ ವರ್ಷಗಳಲ್ಲಿ 30 ರಿಂದ 40 ವರ್ಷದೊಳಗಿನ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಇದು ತುಂಬಾ ಆತಂಕಕಾರಿ ವಿಷಯವಾಗಿದೆ. ಹಾಗಾಗಿ ಮಹಿಳೆಯರು ಸ್ತನ ಕ್ಯಾನ್ಸರ್ ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಸರಿಯಾಗಿ ಮಾಹಿತಿ ತಿಳಿದುಕೊಳ್ಳುವುದು ಅಗತ್ಯ. ಇದರಿಂದಾಗಿ ಅವರು ಈ ಅಪಾಯದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಬಹುದು. ಹಾಗದ್ರೆ ಚಿಕ್ಕ ವಯಸ್ಸಿನ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಬರಲು ಕಾರಣವೇನು? ಎಂಬುದನ್ನು ತಿಳಿದುಕೊಳ್ಳಿ.
ಇಂದಿನ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿ ಬದಲಾಗುತ್ತಿರುವುದರಿಂದ
ಸಂಸ್ಕರಿಸಿದ ಆಹಾರಗಳು, ಜಂಕ್ ಫುಡ್ ಮತ್ತು ಹೆಚ್ಚಿನ ಕ್ಯಾಲೋರಿ ಆಹಾರಗಳ ಸೇವನೆ ಹೆಚ್ಚಾಗಿದೆ. ಈ ಆಹಾರವು ಬೊಜ್ಜು ಮತ್ತು ಹಾರ್ಮೋನುಗಳ ಅಸಮತೋಲನದ ಅಪಾಯವನ್ನು ಹೆಚ್ಚಿಸುತ್ತದೆ. ಇದು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ.
ಒತ್ತಡ
ಹೆಚ್ಚು ಒತ್ತಡವು ಕಾರ್ಟಿಸೋಲ್ ಅನ್ನು ಹೆಚ್ಚಿಸುತ್ತದೆ. ಇದು ಕ್ಯಾನ್ಸರ್ಗೆ ಕಾರಣವಾಗಬಹುದು. ಒತ್ತಡವು ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತದೆ. ಹಾಗಾಗಿ ಆರೋಗ್ಯವಾಗಿರಲು ಒತ್ತಡವನ್ನು ನಿಯಂತ್ರಿಸಿ. ಅದರ ಜೊತೆಗೆ ಬೊಜ್ಜು ಕೂಡ ಸ್ತನ ಕ್ಯಾನ್ಸರ್ಗೆ ಕಾರಣವಾಗಬಹುದು. ಅದನ್ನು ನಿಯಂತ್ರಿಸುವುದು ಅತ್ಯಗತ್ಯ.
ಮದ್ಯಪಾನ ಮತ್ತು ಧೂಮಪಾನ
ಮದ್ಯಪಾನ ಮತ್ತು ಧೂಮಪಾನವು ಸ್ತನ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಮದ್ಯಪಾನ ಮತ್ತು ಧೂಮಪಾನವು ದೇಹದಲ್ಲಿ ಆಕ್ಸಿಡೇಟಿವ್ ಒತ್ತಡ ಮತ್ತು ಹಾರ್ಮೋನುಗಳ ಬದಲಾವಣೆಗಳನ್ನು ಉಂಟುಮಾಡುತ್ತದೆ. ಇದು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ.
ಸ್ತನ ಕ್ಯಾನ್ಸರ್ ಅಪಾಯವನ್ನು ಹೇಗೆ ಕಡಿಮೆ ಮಾಡಿಕೊಳ್ಳುವುದು
ವೈದ್ಯರ ಪ್ರಕಾರ, ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದರಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು.
ಪ್ರತಿದಿನ ವ್ಯಾಯಾಮ ಮಾಡಿ
ಪ್ರತಿದಿನ ವ್ಯಾಯಾಮ ಮಾಡುವುದರಿಂದ ಹಾರ್ಮೋನುಗಳ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುತ್ತದೆ. ಇದು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.
ಸಮತೋಲಿತ ಆಹಾರವನ್ನು ಸೇವಿಸಿ
ನಿಮ್ಮ ತಟ್ಟೆಯಲ್ಲಿ ಹಣ್ಣುಗಳು, ತರಕಾರಿಗಳು ಮತ್ತು ಹೆಚ್ಚಿನ ಫೈಬರ್ ಆಹಾರಗಳನ್ನು ಸೇರಿಸಿ. ಇದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಗಡ್ಡೆಗಳ ರಚನೆಯನ್ನು ತಡೆಯುತ್ತದೆ.
ಮದ್ಯಪಾನ ಮತ್ತು ಧೂಮಪಾನ ತಪ್ಪಿಸಿ
ಮದ್ಯಪಾನ ಮತ್ತು ಧೂಮಪಾನವು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುವುದರಿಂದ ಅವುಗಳನ್ನು ತಪ್ಪಿಸಬೇಕು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
