
CHITRADURGA NEWS | 23 MARCH 2026
ಚಿತ್ರದುರ್ಗ: ಕೇಂದ್ರ ಸರ್ಕಾರದ ಹೊಸ ಪಿಂಚಣಿ ನೀತಿಯನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಮಾರ್ಚ್ 25ರಂದು ನಗರದಲ್ಲಿ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ ತಿಳಿಸಿದೆ.
ಇದನ್ನೂ ಓದಿ: ಚಿತ್ರದುರ್ಗಕ್ಕೆ ಗುಡ್ ನ್ಯೂಸ್ | ಕೇಂದ್ರೀಯ ವಿದ್ಯಾಲಯ ಪ್ರಾರಂಭ | ತರಗತಿ ಪ್ರವೇಶಕ್ಕೆ ನೊಂದಣಿಗೆ ಏ.2 ಕೊನೆ ದಿನ
ಕೇಂದ್ರ ಸರ್ಕಾರವು ನಿವೃತ್ತ ನೌಕರರ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಪರಿಷ್ಕರಿಸಲು ಹಾಗೂ ವಾರ್ಷಿಕ ಎರಡು ಹಂತದ ತುಟ್ಟಿಭತ್ಯೆ (DA) ನೀಡುವಲ್ಲಿ ಹೊಸ ನೀತಿಯನ್ನು ಜಾರಿಗೆ ತರಲು ಮುಂದಾಗಿದೆ. ಈ ನಿರ್ಧಾರವು ನಿವೃತ್ತ ನೌಕರರ ಮತ್ತು ಅವರ ಕುಟುಂಬದ ಹಿತಾಸಕ್ತಿಗೆ ಧಕ್ಕೆ ತರಲಿದೆ ಎಂಬುದು ಸಂಘದ ಆತಂಕವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಂಘದ ಸೂಚನೆಯಂತೆ ಜಿಲ್ಲಾ ಘಟಕವು ಪ್ರತಿಭಟನೆಗೆ ಕರೆ ನೀಡಿದೆ.
ಬುಧವಾರ ಬೆಳಿಗ್ಗೆ 10:30ಕ್ಕೆ ನಗರದ ಓಬವ್ವ ವೃತ್ತದಲ್ಲಿ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರು ಜಮಾಯಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 23 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಲು ನಿರ್ಧರಿಸಲಾಗಿದೆ. ಜಿಲ್ಲೆಯ ಎಲ್ಲಾ ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಘದ ಜಿಲ್ಲಾಧ್ಯಕ್ಷ ಬಿ.ಪಿ. ಪ್ರೇಮನಾಥ್ ಹಾಗೂ ಕಾರ್ಯದರ್ಶಿ ಟಿ. ತಿಮ್ಮಪ್ಪ ಮನವಿ ಮಾಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

