CHITRADURGA NEWS | 31 MARCH 2026
ಚಿತ್ರದುರ್ಗ: ಭಾರತ ಜನಗಣತಿ-2027ರ ಕಾರ್ಯವು 2026ರ ಏಪ್ರಿಲ್ 01 ರಿಂದ 15 ರವರೆಗೆ ಸ್ವಯಂ ಗಣತಿ ನಡೆಯಲಿದ್ದು, ಸಾರ್ವಜನಿಕರು ತಮ್ಮ ಕುಟುಂಬದ ವಿವರಗಳನ್ನು ಆನ್ಲೈನ್ ಮೂಲಕ ಸ್ವಯಂ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರು ವೆಬ್ಸೈಟ್ www.se.census.gov.in ಗೆ ಭೇಟಿ ನೀಡಿ ತಮ್ಮ ಕುಟುಂಬದ ವಿವರಗಳನ್ನು ಆನ್ಲೈನ್ ಪೋರ್ಟಲ್ ಮೂಲಕ ಭರ್ತಿ ಮಾಡಬಹುದಾಗಿದೆ. ಸಾರ್ವಜನಿಕರು ನೀಡುವ ಎಲ್ಲಾ ವಿವರಗಳನ್ನು ಅತ್ಯಂತ ಗೌಪ್ಯವಾಗಿ ಇಡಲಾಗುವುದು.
ಇದನ್ನೂ ಓದಿ: ಚನ್ನಗಿರಿ, ತುಮಕೂರು ಅಡಿಕೆ ಮಾರುಕಟ್ಟೆ ರೇಟ್ಸ್
ದೇಶದ ಸಮಗ್ರ ಅಭಿವೃದ್ಧಿ ಹಾಗೂ ಭವಿಷ್ಯದ ಯೋಜನೆಗಳ ರೂಪಿಸುವಿಕೆಯಲ್ಲಿ ಜನಗಣತಿಯು ಪ್ರಮುಖ ಪಾತ್ರ ವಹಿಸುವುದರಿಂದ, ನಗರದ ನಾಗರಿಕರು ನಿಗದಿತ ಅವಧಿಯೊಳಗೆ ಆನ್ಲೈನ್ ಮೂಲಕ ಮಾಹಿತಿ ನೀಡಿ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ಮನವಿ ಮಾಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

