CHITRADURGA NEWS | 31 MARCH 2026
ಚಿತ್ರದುರ್ಗ: ಒಳಮೀಸಲಾತಿ ಅಳವಡಿಸಿಕೊಂಡೇ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ಭರವಸೆ ನೀಡಿದರು.
ಇದನ್ನೂ ಓದಿ: ಅಂಗನವಾಡಿ ಹುದ್ದೆಗಳು | ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ
ನಗರದ ಹೊರವಲಯದ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರುದ್ಯೋಗಿ ಯುವಕರ ಬೇಡಿಕೆ ಅನುಸಾರ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ. ಆದರೆ, ಒಳಮೀಸಲಾತಿ ವಿಚಾರ ಗೊಂದಲವಾಗಿದ್ದು, ಉಪಚುನಾವಣೆ ಮುಗಿದ ತಕ್ಷಣ ಬಗೆಹರಿಸುವುದಾಗಿ ತಿಳಿಸಿದರು.
ಎಲ್ಲಾ ಸಮುದಾಯದ ನಿರುದ್ಯೋಗಿ ಅಭ್ಯರ್ಥಿಗಳಿಗೂ ನ್ಯಾಯ ಸಿಗಲಿದೆ. ಇದರಲ್ಲಿ ಯಾವುದೇ ಆತಂಕ ಬೇಡ ಎಂದು ಸ್ಪಷ್ಟಪಡಿಸಿದರು.
ಹಿಂದಿನ ಬಿಜೆಪಿ ಸರ್ಕಾರ ಮೀಸಲಾತಿಯ ಪ್ರಮಾಣವನ್ನು ಶೇ.56 ಕ್ಕೆ ಏರಿಸಿದೆ. ಮಾಧುಸ್ವಾಮಿ ವರದಿ ಅಂಗೀಕರಿಸಿದೆ. ಆದರೆ ಕೇಂದ್ರದಿಂದ ಸಂವಿಧಾನದ ಶೆಡ್ಯೂಲ್ ಗೆ ಯಾಕೆ ಸೇರಿಸಲಿಲ್ಲ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
ಈಗ ರೋಸ್ಟರ್ ಬಿಂದು ವಿಚಾರದಲ್ಲಿ ಸ್ವಲ್ಪ ಗೊಂದಲವಾಗಿರುವುದು ನಿಜ. ಆದರೆ, ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿ ಉಪಚುನಾವಣೆಯ ನಂತರ ಸರಿಪಡಿಸಲಾಗುತ್ತದೆ ಎಂದರು.
ಒಳಮೀಸಲಾತಿಗೆ ಸಂಬಂಧಪಟ್ಟಂತೆ ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳು ಕಳೆದ 35 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿವೆ. ಮಾರ್ಚ್ 27ರಂದು ವಿಶೇಷ ಸಂಪುಟ ಸಭೆಯಲ್ಲಿ ಸರ್ಕಾರ ಜಾರಿ ಮಾಡಲು ಮುಂದಾಗಿತ್ತು. ಆದರೆ, ಉಪಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಸಚಿವರು ತಿಳಿಸಿದರು.
ನಮ್ಮ ನೆರೆ ರಾಜ್ಯಗಳು ಈಗಾಗಲೇ ಒಳ ಮೀಸಲಾತಿ ಜಾರಿ ಮಾಡಿವೆ. ಅದರಂತೆ ನಮ್ಮ ರಾಜ್ಯದಲ್ಲೂ ಜಾರಿಯಾಗಲಿದೆ. ಪರಿಶಿಷ್ಟ ಜಾತಿಯಲ್ಲಿ 101 ಉಪ ಜಾತಿಗಳಿವೆ. ಸಮಗಾರ, ದೋಹಾರ, ದಕ್ಕಲಿಗ ಸೇರಿದಂತೆ ಎಲ್ಲರೂ ಮಾದಿಗ ಸಮುದಾಯಕ್ಕೆ ಸಂಬಂಧಪಟ್ಟವರು. ಇವರಲ್ಲಿ ಗೊಂದಲವಿದ್ದು, ಯಾರಿಗೂ ಅನ್ಯಾಯ ಆಗದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದರು.
ಇದನ್ನೂ ಓದಿ: ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮಕ್ಕಳ ಹೃದಯ ತಪಾಸಣೆ
ಪೆಟ್ರೋಲ್, ಡಿಸೇಲ್, ಎಲ್‌ಪಿಜಿ ಅಭಾವ ಇಲ್ಲ:
ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಸಿಲೆಂಡರ್ ಗ್ಯಾಸ್‍ನ ಅಭಾವವಿಲ್ಲ. ಸರಿಯಾದ ರೀತಿಯಲ್ಲಿ ವಿತರಣೆ ಆಗುತ್ತಿದೆ. ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡ ಬಂದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದ ಅವರು ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪೆಟ್ರೋಲ್ ಹಾಗೂ ಎಲ್‌ಪಿಜಿ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ:
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಇದಕ್ಕೆ ಎಲ್ಲಾ ಮತದಾರರು ಆಶೀರ್ವಾದ ಮಾಡಲಿದ್ದಾರೆ. ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಹಾಗೂ ಬಾಗಲಕೋಟೆಯಲ್ಲಿ ಮೇಟಿ ಅವರ ಮಗ ಉಮೇಶ್ ಮೇಟಿ ಗೆಲ್ಲಿಸುವ ಮೂಲಕ ಅವರು ಮಾಡಿರುವ ಕೆಲಸಗಳನ್ನು ಮತದಾರರು ಸ್ಮರಿಸಲಿದ್ದಾರೆ ಎಂದರು.
ಇದನ್ನೂ ಓದಿ: ಜನಗಣತಿ | ಆನ್‍ಲೈನ್ ಮೂಲಕ ಸ್ವಯಂ ದಾಖಲಿಸಲು ಅವಕಾಶ
ಸುದ್ದಿಗೋಷ್ಟಿಯಲ್ಲಿ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕಾಂಬ್ಲೆ ಸಂತೋಷ ಡಿಸಿಸಿ ಕಾರ್ಯಾಧ್ಯಕ್ಷ ಹಾಲಸ್ವಾಮಿ ಮತ್ತಿತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
