CHITRADURGA NEWS | 01 APRIL 2026
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಧಾರ್ಮಿಕ ಪುಣ್ಯಕ್ಷೇತ್ರವಾದ ಅಂಬಲಗೆರೆ ಗ್ರಾಮದಲ್ಲಿ ನೆಲೆಸಿರುವ ಶ್ರೀ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವವು ಏಪ್ರಿಲ್ 1 ರಿಂದ ಏಪ್ರಿಲ್ 4 ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ಪೂಜಾ ಕಾರ್ಯಕ್ರಮಗಳ ಪ್ರಮುಖ ಘಟ್ಟವಾದ ‘ಬ್ರಹ್ಮ ರಥೋತ್ಸವ’ವು ಏಪ್ರಿಲ್ 3 ರಂದು ನಡೆಯಲಿದೆ ಎಂದು ದೇವಸ್ಥಾನದ ಸಮಿತಿ ತಿಳಿಸಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 31 ಮಾರ್ಚ್ | ಚನ್ನಗಿರಿ, ಭೀಮಸಮುದ್ರ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್
ಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ 1948ನೇ ಶ್ರೀ ಪರಾಭವ ನಾಮ ಸಂವತ್ಸರದ ಚೈತ್ರ ಶುದ್ಧ ಚತುರ್ದಶಿಯ ಪ್ರಯುಕ್ತ ಈ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 1 ರ ಬುಧವಾರ ರಾತ್ರಿ 8 ಗಂಟೆಗೆ ಗರುಡೋತ್ಸವದೊಂದಿಗೆ ಚಾಲನೆ ದೊರೆಯಲಿದೆ.
ಏಪ್ರಿಲ್ 2 ರಂದು ರಾತ್ರಿ 10 ಗಂಟೆಗೆ ಪುಣ್ಯಾಹ, ಪಂಚಾಮೃತ ಅಭಿಷೇಕ, ತುಳಸಿ ಅರ್ಚನೆ ಹಾಗೂ ಕುಂಕುಮಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರುಗಲಿವೆ. ಗ್ರಾಮಸ್ಥರು ಹಾಗೂ ಭಕ್ತಾದಿಗಳಿಂದ ಅರತಿ ರಥೋತ್ಸವ ನೆರವೇರಲಿದೆ.
ಏಪ್ರಿಲ್ 3 ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ವೈಭವದ ಬ್ರಹ್ಮ ರಥೋತ್ಸವ ಜರುಗಲಿದ್ದು, ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅಂದು ಸಹಸ್ರನಾಮ ಪೂಜೆ ಹಾಗೂ ರಾತ್ರಿ ಪಂಜಿನ ಸೇವೆ ನಡೆಯಲಿದೆ. ಏಪ್ರಿಲ್ 4 ರ ಶನಿವಾರದಂದು ಓಕುಳಿ ಬಂಡಿ ಕಾರ್ಯಕ್ರಮ, ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗದೊಂದಿಗೆ ಜಾತ್ರಾ ಮಹೋತ್ಸವವು ಮುಕ್ತಾಯಗೊಳ್ಳಲಿದೆ.
ಇದನ್ನೂ ಓದಿ: KSRTC ಬಸ್ ಡಿಕ್ಕಿ | ಅಪರಿಚಿತ ಮಹಿಳೆ ಸಾವು
ಈ ಧಾರ್ಮಿಕ ಕೈಂಕರ್ಯಗಳಲ್ಲಿ ಅರ್ಚಕರಾದ ಶ್ರೀ ಎಸ್. ತಿಮ್ಮರಾಯಪ್ಪ ಮತ್ತು ಸಿಬ್ಬಂದಿ ವರ್ಗ, ಗ್ರಾಮದ ಆಡಳಿತಾಧಿಕಾರಿ ಹರ್ಷ ಜಿ., ಕಂದಾಯ ನಿರೀಕ್ಷಕ ಎನ್. ವರದರಾಜು, ಉಪ ತಹಶೀಲ್ದಾರ್ ನವೀನ್ ಕುಮಾರ್ ಡಿ. ಹಾಗೂ ಮುಜರಾಯಿ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಅಂಬಲಗೆರೆ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕೋರಲಾಗಿದೆ.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
