CHITRADURGA NEWS | 03 APRIL 2026
ಚಿತ್ರದುರ್ಗ: ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ರೈತರು ಬಿತ್ತನೆ ಕಾರ್ಯದಲ್ಲಿ ಉತ್ಸಾಹದಿಂದ ತೊಡಗಿಸಿಕೊಂಡಿದ್ದಾರೆ. ಬಿತ್ತನೆಗೆ ಪೂರಕವಾಗಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಖರೀದಿ ಪ್ರಕ್ರಿಯೆ ಚುರುಕುಗೊಂಡಿದೆ.
ಇದನ್ನೂ ಓದಿ: ಜೋಗಿಮಟ್ಟಿಯಲ್ಲಿ ವಾಚ್ ಟವರ್ ನಿರ್ಮಾಣಕ್ಕೆ ಪಪ್ಪಿಸ್ ಸ್ಪೂಡೆಂಟ್ ವಿಂಗ್ ಕಾರ್ಯಕರ್ತರ ಮನವಿ
ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಕೆಲವು ಮಾರಾಟಗಾರರು ರಸಗೊಬ್ಬರವನ್ನು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ.
ಜಿಲ್ಲೆಯ ಯಾವುದೇ ಅಧಿಕೃತ ರಸಗೊಬ್ಬರ ಮಾರಾಟಗಾರರು ರಸಗೊಬ್ಬರದ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಮಾರಾಟ ಬೆಲೆಗಿಂತ (MRP) ಹೆಚ್ಚಿನ ಬೆಲೆಗೆ ಗೊಬ್ಬರ ಮಾರಾಟ ಮಾಡಬಾರದು. ಪ್ರತಿ ಮಾರಾಟ ಮಳಿಗೆಯ ಮುಂದೆ ರಸಗೊಬ್ಬರದ ದರ ಪಟ್ಟಿ ಮತ್ತು ದೈನಂದಿನ ದಾಸ್ತಾನು ವಿವರಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಫಲಕದಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು.
ರಸಗೊಬ್ಬರ (ನಿಯಂತ್ರಣ) ಆದೇಶ 1985ರ ನಿಯಮಾವಳಿಗಳ ಅನ್ವಯ, ಈ ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 02 | ಹತ್ತಿ ರೇಟ್ ಎಷ್ಟಿದೆ?
ಕೃತಕ ಅಭಾವ ಸೃಷ್ಟಿಸುವುದು ಅಥವಾ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದಲ್ಲಿ, ಅಂತಹ ಮಾರಾಟಗಾರರ ಪರವಾನಗಿಯನ್ನು ತಕ್ಷಣವೇ ಅಮಾನತು ಅಥವಾ ರದ್ದು ಮಾಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಬಿ.ಎಚ್ಚರಿಕೆ ನೀಡಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
