
CHITRADURGA NEWS | 09 APRIL 2026
ಚಿತ್ರದುರ್ಗ: ಚುನಾವಣಾ ಪೂರ್ವದಲ್ಲಿ ಘೋಷಿಸಿದ ಪ್ರಣಾಳಿಕೆಯಂತೆ ಸರ್ಕಾರಿ ನೌಕರರಂತೆ ಸಾರಿಗೆ ನೌಕರರಿಗೂ ಏಳನೆ ವೇತನ ಆಯೋಗದ ಮಾದರಿಯಲ್ಲಿ ಸಮಾನ ವೇತನ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಲಾಯಿತು.
ಇದನ್ನೂ ಓದಿ: ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
ದಿನಾಂಕ : 1-1-2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಿಸಲಾಗಿದ್ದು, 38 ತಿಂಗಳ ಹಿಂಬಾಕಿಯನ್ನು ನೀಡಬೇಕು. ಈಗಾಗಲೆ ಸರ್ಕಾರ 26 ತಿಂಗಳ ಬಾಕಿ ವೇತನ ನೀಡಲು ಸುತ್ತೋಲೆ ಹೊರಡಿಸಿದ್ದು, ಬಾಕಿ 12 ತಿಂಗಳ ವೇತನವನ್ನು ಸರ್ಕಾರ ಅಥವಾ ಸಂಸ್ಥೆ ಭರಿಸಬೇಕು. ಸಾರಿಗೆ ಸಂಸ್ಥೆಗಳಲ್ಲಿ ಸಂಘಗಳ ಮಾನ್ಯತೆಗಾಗಿ ಕಾರ್ಮಿಕ ಸಂಘಟನೆಗಳ ಚುನಾವಣೆಯನ್ನು ನಡೆಸಬೇಕೆಂದು ಪ್ರತಿಭಟನಾನಿರತರು ಒತ್ತಾಯಿಸಿದರು.
ಏ.8 ರಿಂದ ಆರಂಭಗೊಂಡಿರುವ ಪಾದಯಾತ್ರೆ 21 ರಂದು ಬೆಂಗಳೂರು ತಲುಪಿ ಫ್ರೀಡಂ ಪಾರ್ಕ್‍ನಲ್ಲಿ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಆರ್.ಚಂದ್ರಶೇಖರ್ ತಿಳಿಸಿದರು.
ಇದನ್ನೂ ಓದಿ: ಬಿಸಿಲಿನಲ್ಲಿ ಪೊಲೀಸ್ ಸಿಬ್ಬಂದಿ ನಿಲ್ಲಿಸಿದ ಚಿಕ್ಕಜಾಜೂರು PSI | ಅಮಾನತಿಗೆ ಒತ್ತಾಯ
ಪ್ರೊ.ಕೆ.ಇ.ರಾಧಕೃಷ್ಣ, ಆಂಜಿನಪ್ಪ, ಜಯರಾಂ ರಾಥೋಡ್, ಲೋಕೇಶ್, ಹನುಮಂತಪ್ಪ, ಸಿಬ್ಬಂದಿಗಳ ಕುಟುಂಬದವರಾದ ರೇಣುಕ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

