
CHITRADURGA NEWS | 09 APRIL 2026
ಚಿತ್ರದುರ್ಗ: ಭಾರತ ಜನಗಣತಿ ನಿರ್ದೇಶನಾಲಯದ ಸೂಚನೆಯಂತೆ ಭಾರತದ ಜನಗಣತಿ-2027ರ ಕಾರ್ಯಕ್ಕೆ ಸಂಬಂಧಿಸಿದಂತೆ ‘ಸ್ವಯಂ ಗಣತಿ’ ಪ್ರಕ್ರಿಯೆ ಆರಂಭವಾಗಿದ್ದು, ಸಾರ್ವಜನಿಕರು ಆನ್‍ಲೈನ್ ಮೂಲಕ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
2026ರ ಏಪ್ರಿಲ್ 01 ರಿಂದ ಸ್ವಯಂ ಗಣತಿ ಕಾರ್ಯ ಪ್ರಾರಂಭವಾಗಿದ್ದು, ಏಪ್ರಿಲ್ 15 ರವರೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದ್ದು, ಸ್ವಯಂ ಪ್ರೇರಿತರಾಗಿ ಇಲಾಖೆಯ ಅಧಿಕೃತ ಜಾಲತಾಣ www.se.census.gov.in ಗೆ ಭೇಟಿ ನೀಡಿ ಕೈಗೊಳ್ಳಬಹುದಾಗಿದೆ.
ಇದನ್ನೂ ಓದಿ: ಕ್ರೀಡಾ ಇಲಾಖೆಯಿಂದ ವಾಲಿಬಾಲ್ ಮತ್ತು ಅಥ್ಲೆಟಿಕ್ಸ್ ತರಬೇತಿ
ಸ್ವಯಂ ಗಣತಿ ಸಾರ್ವಜನಿಕರಿಗೆ ಸುರಕ್ಷಿತ ಆನ್‍ಲೈನ್ ಪೋರ್ಟಲ್ ಮೂಲಕ ತಮ್ಮದೇ ಆದ ಮಾಹಿತಿಯನ್ನು ಭರ್ತಿ ಮಾಡಲು ಮತ್ತು ಸಲ್ಲಿಸಲು ಅನುಮತಿ ಮಾಡಿಕೊಡುತ್ತದೆ.
ಈ ಪ್ರಕ್ರಿಯೆ ಮೂಲಕ ಸಿಗುವ ‘ರೆಫರೆನ್ಸ್ ಐಡಿ’ (Reference ID) ಅನ್ನು ನಾಗರಿಕರು ಕಡ್ಡಾಯವಾಗಿ ಸಂರಕ್ಷಿಸಿಟ್ಟುಕೊಳ್ಳಬೇಕು. 2026ರ ಏಪ್ರಿಲ್ 16 ರಿಂದ ಮೇ 15 ರವರೆಗೆ ನಿಗಧಿಪಡಿಸಲಾದ ಕ್ಷೇತ್ರ ಮಾಹಿತಿಗಳ ಸಂಗ್ರಹಣೆಯ ಸಮಯದಲ್ಲಿ ಮೌಲ್ಯೀಕರಣಕ್ಕಾಗಿ ಗಣತಿದಾರರು ನಿಮ್ಮ ಕುಟುಂಬಕ್ಕೆ ಭೇಟಿ ನೀಡಿದಾಗ ರೆಫರೆನ್ಸ್ ಐಡಿ ನೀಡಿ ಜನಗಣತಿ ಕಾರ್ಯದಲ್ಲಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ ಮಾಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

