
CHITRADURGA NEWS | 10 APRIL 2026
ಚಿತ್ರದುರ್ಗ: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ಚಿತ್ರದುರ್ಗದ ಎಸ್.ಆರ್.ಎಸ್ ಕಾಲೇಜಿನ ಕೆ.ಎಂ.ಸುದರ್ಶನ್ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ವೈ.ಎಂ.ಮೇಘನಾ 9ನೇ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ: ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
ಕೆ.ಎಂ.ಸುದರ್ಶನ್ ವಿಜ್ಞಾನ ವಿಭಾಗದಲ್ಲಿ 600ಕ್ಕೆ 594 ಹಾಗೂ ಎಲ್ಲಾ ವಿಜ್ಞಾನ ವಿಷಯಗಳಲ್ಲಿ 100ಕ್ಕೆ 100 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನದೊಂದಿಗೆ ಮತ್ತೊಂದು ಹೊಸ ದಾಖಲೆ ನಿರ್ಮಿಸಿದ್ದಾರೆ. ವೈ.ಎಂ.ಮೇಘನಾ 591 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ ಹಾಗೂ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಅರ್‌ಹಮ್ ಜೈನ್ 589 ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರತೀ ವರ್ಷದಂತೆ ಈ ವರ್ಷವೂ ಜಿಲ್ಲೆಗೆ ಅಗ್ರ ಸ್ಥಾನವನ್ನು ಪಡೆಯುವುದರೊಂದಿಗೆ ನೆರೆಯ ಜಿಲ್ಲೆಗಳಲ್ಲೇ ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ.
ಕಾಲೇಜಿನ ಒಟ್ಟು 545 ವಿದ್ಯಾರ್ಥಿಗಳಲ್ಲಿ, 395 ವಿದ್ಯಾರ್ಥಿಗಳು ಡಿಸ್ಟಿಂಕ್ಷನಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ಒಟ್ಟು 133 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಒಟ್ಟು 100 ಕ್ಕೆ 100 ಅಂಕಗಳನ್ನು ಪಡೆದಿರುವುದು ವಿಶೇಷ.
ಇದನ್ನೂ ಓದಿ: PUC RESULT | ಚಿತ್ರದುರ್ಗಕ್ಕೆ 27ನೇ ಸ್ಥಾನ | ಎಷ್ಟು ಮಕ್ಕಳು ತೇರ್ಗಡೆ | ಯಾರು ಮೇಲುಗೈ ಪೂರ್ಣ ವಿವರ ಇಲ್ಲಿದೆ…
ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
