CHITRADURGA NEWS | 12 APRIL 2026
ಚಿತ್ರದುರ್ಗ: ವರ್ಷವಿಡೀ ಕಚೇರಿ ಕೆಲಸದ ಒತ್ತಡದಲ್ಲಿರುವ ಸಿಬ್ಬಂದಿಗಳಿಗೆ ಕ್ರೀಡಾಕೂಟಗಳು ಹೊಸ ಚೈತನ್ಯ ನೀಡುತ್ತವೆ. ಸದೃಢ ದೇಹದಿಂದ ಮಾತ್ರ ಸದೃಢ ಮನಸ್ಸನ್ನು ಹೊಂದಲು ಸಾಧ್ಯ ಎಂದು ಜಿಲ್ಲಾ ಖಜಾನೆ ಇಲಾಖೆ ಉಪ ನಿರ್ದೇಶಕರಾದ ಎಚ್.ಟಿ.ಅಶೋಕ್ ಅಭಿಪ್ರಾಯಪಟ್ಟರು.
ಇದನ್ನೂ ಓದಿ: ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ
ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾ ಖಜಾನೆ ವ್ಯಾಪ್ತಿಯ ಆರು ತಾಲ್ಲೂಕುಗಳ ಸಿಬ್ಬಂದಿಗಳ 2026-27ನೇ ಸಾಲಿನ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಾರಾಂತ್ಯತ್ಯದ ಕೆಲಸದ ಒತ್ತಡದ ನಡುವೆ ಸಿಬ್ಬಂದಿಗಳು ಸಕ್ರಿಯವಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ನೆಮ್ಮದಿ ಮತ್ತು ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದರು.
ಕ್ರೀಡಾಕೂಟದಲ್ಲಿ ಕ್ರಿಕೆಟ್, ವಾಲಿಬಾಲ್, ಥ್ರೋಬಾಲ್, ಡಿಸ್ಕಸ್ ಥ್ರೋ, ಗುಂಡು ಎಸೆತ, 100 ಮೀಟರ್ ಓಟ ಹಾಗೂ ಒಳಾಂಗಣ ಕ್ರೀಡೆಗಳಾದ ಚೆಸ್ ಮತ್ತು ಕೇರಂ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಇದನ್ನೂ ಓದಿ: ಪೊಲೀಸ್ ಎಂದು ಹೇಳಿ ಮೊಬೈಲ್ ಕದ್ದಿದ್ದ ವ್ಯಕ್ತಿ ನ್ಯಾಯಾಂಗ ಬಂಧನಕ್ಕೆ
ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪದಕ, ಪಾರಿತೋಷಕ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ಆರು ತಾಲೂಕುಗಳ ಖಜಾನೆ ಸಿಬ್ಬಂದಿಗಳು ಈ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕರಾದ ಏಳು ಕೋಟಿ, ನರಸಿಂಹಮೂರ್ತಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ರಮೇಶ್, ಮದನ, ತಿಪ್ಪೇಸ್ವಾಮಿ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
